AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸಾಹಾರ ಸೇವನೆ ಮಾಡುವ ಬದಲು ಈ ಒಂದು ಹಣ್ಣನ್ನು ತಿನ್ನಿ

ನಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿ ಸರಿಯಾಗಿ ಇದ್ದಾಗ ಮಾತ್ರ ಆರೋಗ್ಯ ಚೆನ್ನಾಗಿರುತ್ತದೆ. ಹಾಗಾಗಿ ನಮ್ಮ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳ ಜೊತೆಗೆ ಮಾಂಸಾಹಾರಗಳ ಸೇವನೆ ಮಾಡಬೇಕು. ಕೆಲವರು ಸಸ್ಯಹಾರಿಗಳಾಗಿರುತ್ತಾರೆ ಅಂತವರು ಮಾಂಸಾಹಾರ ಸೇವನೆ ಮಾಡುವುದಿಲ್ಲ. ಅಲ್ಲದೆ ಅವುಗಳು ನೀಡುವ ಪೋಷಕಾಂಶಕ್ಕೆ ತಕ್ಕನಾದ ಬದಲಿ ಆಹಾರ ಹುಡುಕಿ ಮಾಂಸಾಹಾರಕ್ಕೆ ಸಮನಾದ ಆಹಾರ ಸೇವನೆ ಮಾಡುತ್ತಾರೆ. ನಿಮಗೂ ಈ ರೀತಿಯಾದರೆ ಈ ಹಣ್ಣುಗಳನ್ನು ತಪ್ಪದೆ ತಿನ್ನಿ.

ಮಾಂಸಾಹಾರ ಸೇವನೆ ಮಾಡುವ ಬದಲು ಈ ಒಂದು ಹಣ್ಣನ್ನು ತಿನ್ನಿ
ಸಾಂದರ್ಭಿಕ ಚಿತ್ರImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 07, 2025 | 4:15 PM

Share

ಹಲಸಿನ ಹಣ್ಣು (Jackfruit) ಯಾರಿಗೆ ತಾನೇ ಇಷ್ಟವಿಲ್ಲ. ಕಾಲೋಚಿತವಾಗಿ ಸಿಗುವ ಹಣ್ಣಾದ್ದರಿಂದ (Seasonal fruit) ಸ್ವಲ್ಪ ಬೇಡಿಕೆ ಹೆಚ್ಚಾಗಿಯೇ ಇರುತ್ತದೆ. ಕೇವಲ ರುಚಿ ಹಚ್ಚಿಸುವುದು ಮಾತ್ರವಲ್ಲ ಇದು ಆರೋಗ್ಯಕ್ಕೆ (Health) ಪ್ರಯೋಜನಕಾರಿಯೂ ಹೌದು. ಈ ಹಣ್ಣಿನಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು ಇದನ್ನು ಮಾಂಸಾಹಾರಗಳ (Meat) ಬದಲಿಯಾಗಿ ಸೇವನೆ ಮಾಡಬಹುದು ಎಂದು ವೈದ್ಯರು ಹೇಳುತ್ತಾರೆ. ಅಂದರೆ ಈ ಹಣ್ಣಿನಲ್ಲಿ ಅಷ್ಟು ಆರೋಗ್ಯಕರ ಅಂಶಗಳು ಅಡಕವಾಗಿದೆ. ಹಾಗಾಗಿಯೇ ಇವುಗಳನ್ನು ಯಥೇಚ್ಛವಾಗಿ ಸೇವನೆ ಮಾಡಲಾಗುತ್ತದೆ. ಅಲ್ಲದೆ ಇದನ್ನು ಅನೇಕ ರೀತಿಯ ಆಹಾರಗಳಲ್ಲಿಯೂ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಆಹಾರದ ರುಚಿಯನ್ನೇ ಬದಲಿಸುತ್ತದೆ. ಹಾಗಾದರೆ ಇದನ್ನು ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳಿ.

ಹಲಸಿನ ಹಣ್ಣನ್ನು ಯಾಕೆ ಸೇವನೆ ಮಾಡಬೇಕು?

  • ಈ ಹಣ್ಣಿನಲ್ಲಿ ಜೀವಸತ್ವಗಳು, ಖನಿಜಗಳು, ಕ್ಯಾಲ್ಸಿಯಂ, ಕಾರ್ಬೋಹೈಡ್ರೇಟ್, ಎಲೆಕ್ಟ್ರೋಲೈಟ್ ಮತ್ತು ಕಬ್ಬಿಣದ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ ಬೇರೆ ಹಣ್ಣುಗಳಿಗೆ ಹೋಲಿಸಿದರೆ ಇದರಲ್ಲಿ ಹಚ್ಚಿನ ಪೋಷಕಾಂಶಗಳನ್ನು ಹೊಂದಿದೆ.
  • ಹಲಸಿನ ಹಣ್ಣು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿದ್ದು ಮಧುಮೇಹದಂತಹ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.
  • ಹಲಸಿನ ಹಣ್ಣು ಪೋಷಕಾಂಶಗಳ ಜೊತೆಗೆ ಪೊಟ್ಯಾಸಿಯಂ ಮತ್ತು ಫೈಬರ್ ಅಂಶವನ್ನು ಒದಗಿಸುತ್ತದೆ. ಇದು ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.
  • ಹಲಸಿನ ಹಣ್ಣು ಅಥವಾ ಜಾಕ್ ಫ್ರೂಟ್ ನಲ್ಲಿ ಫೈಬರ್, ವಿಟಮಿನ್ ಸಿ ಇದ್ದು ಅದಲ್ಲದೆ ಅದರ ಬೀಜಗಳಲ್ಲಿರುವ ಸಂಯುಕ್ತಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
  • ಹಲಸಿನ ಹಣ್ಣಿನಲ್ಲಿ ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇದ್ದು ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
  • ಹಲಸಿನ ಹಣ್ಣುನ್ನು ಮಿತವಾಗಿ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ.
  • ಹಲಸಿನ ಹಣ್ಣು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ನಿಯಂತ್ರಿಸುವುದು ಮಾತ್ರವಲ್ಲ, ಹೃದಯಕ್ಕೆ ಸಂಬಂಧಪಟ್ಟ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ಕೂಡ ದೂರ ಮಾಡುತ್ತದೆ.
  • ಈ ಹಣ್ಣಿನಲ್ಲಿ ನಾರಿನಾಂಶ ಸಮೃದ್ಧವಾಗಿದ್ದು ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸುವಲ್ಲಿ, ಇದು ಪ್ರಮುಖ ಪಾತ್ರ ವಹಿಸುತ್ತದೆ.
  • ಹಲಸಿನ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ, ಜೀರ್ಣಕ್ರಿಯೆ ಸರಿಯಾಗಿ ಆಗುವುದಲ್ಲದೆ ಅಜೀರ್ಣತೆ, ಮಲಬದ್ಧತೆ ಸಮಸ್ಯೆ ಕ್ರಮೇಣವಾಗಿ ದೂರವಾಗುತ್ತದೆ.
  • ಈ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್ ಅಂಶಗಳು ದೇಹದಲ್ಲಿ ಕಂಡು ಬರುವ ಫ್ರೀ ರಾಡಿಕಲ್ ಗಳ ವಿರುದ್ಧ ರಕ್ಷಣಾತ್ಮಕವಾಗಿ ಕೆಲಸ ಮಾಡಿ ಅದರಿಂದ ಬರುವ ಕ್ಯಾನ್ಸರ್ ಕಣಗಳು ನಮ್ಮ ದೇಹದಲ್ಲಿ ಉತ್ಪತ್ತಿ ಆಗುವುದನ್ನು ತಡೆಯಲು ನೆರವಾಗುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
Image
ಯಾವುದೇ ರೀತಿಯ ಕ್ಯಾನ್ಸರ್‌ ಬರಬಾರದು ಎಂದರೆ ಈ ಹಣ್ಣನ್ನು ತಿಂದು ನೋಡಿ
Image
ಕಣ್ಣಿನಲ್ಲಿ ಕಾಣಿಸಿಕೊಳ್ಳುವ ನೋವಿಗೆ ಬಾಣಂತಿಯರ ಎದೆ ಹಾಲಿನಲ್ಲಿದೆ ಮದ್ದು
Image
ಮಗುವಿಗೆ ಮೊಲೆ ಹಾಲು ನೀಡುವ ಮೊದಲು ಹೊರಗೆ ಸ್ಪಲ್ಪ ಚೆಲ್ಲಬೇಕು, ಯಾಕೆ ?
Image
ಸಿಸೇರಿಯನ್‌, ನಾರ್ಮಲ್ ಡೆಲಿವರಿಯಾದ ಬಾಣಂತಿಯರಿಗೆ ಡಾ. ಶಿಲ್ಪಾ ಹೇಳೋದೇನು?

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ