
ವಾಲ್ನಟ್ಸ್ (Walnuts) ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ? ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮಾತ್ರವಲ್ಲ, ಆರೋಗ್ಯ (Health) ತಜ್ಞರು ಕೂಡ ಅವುಗಳನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಹೇಳುತ್ತಾರೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. ತಜ್ಞರ ಪ್ರಕಾರ, ವಾಲ್ನಟ್ಸ್ ನಲ್ಲಿರುವ ಜೀವಸತ್ವಗಳು ಮಧುಮೇಹ, ತೂಕ ಇಳಿಕೆ (weight loss) ಮತ್ತು ಮೂಳೆಗಳ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿಯೂ ಪ್ರತಿದಿನ ವಾಲ್ನಟ್ಸ್ ನೆನೆಸಿಟ್ಟು ತಿಂದ್ರೆ ಇನ್ನೂ ಒಳ್ಳೆಯದು. ಹಾಗಾದರೆ ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.
ವಾಲ್ನಟ್ಸ್ ಗಳಲ್ಲಿ ಅಪರ್ಯಾಪ್ತ ಕೊಬ್ಬಿನಾಮ್ಲಗಳು ಹೇರಳವಾಗಿವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ, ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯ ಕಡಿಮೆಯಾಗುತ್ತದೆ. ಮಾತ್ರವಲ್ಲ ವಾಲ್ನಟ್ಸ್ ಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು, ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಅವು ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.
ವಾಲ್ನಟ್ಸ್ನಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳು ಮೆದುಳಿನ ಕಾರ್ಯವನ್ನು ಹೆಚ್ಚಿಸಲು ಮತ್ತು ಸ್ಮರಣ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದಿನಕ್ಕೆ ಎರಡು ವಾಲ್ನಟ್ಸ್ ಸೇವಿಸುವುದರಿಂದ ಅವುಗಳಲ್ಲಿರುವ ಉತ್ಕರ್ಷಣ ನಿರೋಧಕಗಳಿಂದಾಗಿ ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಕೂಡ ಕಡಿಮೆ ಮಾಡಬಹುದು.
ವಾಲ್ನಟ್ಸ್ ಫೈಬರ್ ಮತ್ತು ಪ್ರೋಟೀನ್‌ಗಳ ಉತ್ತಮ ಮೂಲವಾಗಿದ್ದು, ನಿಮ್ಮನ್ನು ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿದ ಅನುಭವ ನೀಡಲು ಸಹಾಯ ಮಾಡುತ್ತದೆ. ಇದು ತೂಕ ಕಡಿಮೆ ಮಾಡಿಕೊಳ್ಳಲು ಬಯಸುತ್ತಿರುವವರಿಗೆ ಸಹಕಾರಿಯಾಗಿದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.
ಇದನ್ನೂ ಓದಿ: ಪ್ರತಿನಿತ್ಯ ಈ ಸಮಯಕ್ಕೆ ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ! ನೀವೂ ಟ್ರೈ ಮಾಡಿ
ವಾಲ್ನಟ್‌ನಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ವಾಲ್ನಟ್ಸ್ ತಿನ್ನುವುದು ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಮಾತ್ರವಲ್ಲ, ವಾಲ್ನಟ್ಸ್ ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 2 ನೆನೆಸಿದ ವಾಲ್ನಟ್ಸ್ ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ