AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಧಾರಣೆಗೆ ಪದೇ ಪದೇ ಸಮಸ್ಯೆ ಆಗ್ತಾ ಇದ್ದರೆ ಚಿಂತೆ ಮಾಡಬೇಡಿ, ವಾರಕ್ಕೊಮ್ಮೆ ಈ ಒಂದು ಹಣ್ಣನ್ನು ಸೇವಿಸಿ

ಮಹಿಳೆಯರ ಆರೋಗ್ಯ: ಆವಕಾಡೊ ಹಣ್ಣು ಸ್ವಲ್ಪ ದುಬಾರಿಯಾದರೂ ಕೂಡ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಮಹಿಳೆಯರ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ವೈದ್ಯರು ಇದನ್ನು ಯಥೇಚ್ಛವಾಗಿ ಸೇವನೆ ಮಾಡಿ ಎಂದು ಹೇಳುತ್ತಾರೆ. ಈ ಹಣ್ಣಿನಲ್ಲಿರುವ ಔಷಧೀಯ ಗುಣಗಳು ಮಹಿಳೆಯರಿಗೆ ಸಂಬಂಧ ಪಟ್ಟ ಸಮಸ್ಯೆಗಳಿಗೆ ಪರಿಹಾರ ನೀಡಲು ಸಹಕಾರಿಯಾಗಿದೆ. ಹಾಗಾದರೆ ಮಹಿಳೆಯರು ಆವಕಾಡೊ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಧಾರಣೆಗೆ ಪದೇ ಪದೇ ಸಮಸ್ಯೆ ಆಗ್ತಾ ಇದ್ದರೆ ಚಿಂತೆ ಮಾಡಬೇಡಿ, ವಾರಕ್ಕೊಮ್ಮೆ ಈ ಒಂದು ಹಣ್ಣನ್ನು ಸೇವಿಸಿ
Avocado
ಪ್ರೀತಿ ಭಟ್​, ಗುಣವಂತೆ
|

Updated on: Aug 06, 2025 | 3:32 PM

Share

ಆವಕಾಡೊ (Avocado) ಹಣ್ಣಿನ ಬಗ್ಗೆ ಯಾರು ತಾನೇ ಕೇಳಿಲ್ಲ ಹೇಳಿ? ಇದೊಂದು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು. ಮಾತ್ರವಲ್ಲ ಮಹಿಳೆಯರ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹೌದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಆವಕಾಡೊಗಳು ಬಹಳ ಅವಶ್ಯಕವಾಗಿದೆ. ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಮ್ಮೆಯಾದರೂ ಈ ಹಣ್ಣನ್ನು ಮಹಿಳೆಯರು ಸೇವನೆ ಮಾಡಬೇಕು. ಅದರಲ್ಲಿಯೂ ಮುಟ್ಟಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವರು ಇದನ್ನು ಸೇವನೆ ಮಾಡುವುದರಿಂದ ಯಾವುದೇ ರೀತಿಯ ಔಷಧಗಳಿಲ್ಲದೆ ಪರಿಹಾರ ಪಡೆಯಬಹುದಾಗಿದೆ. ಹಾಗಾದರೆ ಮಹಿಳೆಯರು ಆವಕಾಡೊ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಆವಕಾಡೊವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಮುಟ್ಟನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಋತುಚಕ್ರದ ಸಮಯದಲ್ಲಿ ಕಂಡುಬರುವ ಹೊಟ್ಟೆ ನೋವನ್ನು ಕೂಡ ನಿವಾರಿಸುತ್ತದೆ.
  • ಆವಕಾಡೊ ಚರ್ಮಕ್ಕೆ ಒಳ್ಳೆಯದು. ಇದರಲ್ಲಿ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಅವು ಚರ್ಮವನ್ನು ಮೃದುವಾಗಿ, ಕಾಂತಿಯುತವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.
  • ಆವಕಾಡೊ ಹಣ್ಣು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ಹಣ್ಣುಗಳಲ್ಲಿ ಆರೋಗ್ಯಕರ ಮೋನೋಸಾಚುರೇಟೆಡ್ ಕೊಬ್ಬುಗಳು ಸಮೃದ್ಧವಾಗಿದ್ದು ಮಹಿಳೆಯರ ಹಾರ್ಮೋನುಗಳನ್ನು ಸಮತೋಲನಗೊಳಿಸುವಲ್ಲಿ ಅವು ಉಪಯುಕ್ತವಾಗಿವೆ.
  • ಆವಕಾಡೊ ಗರ್ಭಧಾರಣೆಗೂ ಒಳ್ಳೆಯದು. ಇದರಲ್ಲಿರುವ ಹೆಚ್ಚಿನ ಫೋಲಿಕ್ ಆಮ್ಲದ ಅಂಶವು ಗರ್ಭಧಾರಣೆಯ ಮೊದಲು ಮತ್ತು ಆ ಸಮಯದಲ್ಲಿ ತುಂಬಾ ಉಪಯುಕ್ತವಾಗಿದೆ. ಇದು ಭ್ರೂಣದ ಬೆಳವಣಿಗೆಗೂ ಕೂಡ ಸಹಾಯ ಮಾಡುತ್ತದೆ. ಹಾಗಾಗಿ ಗರ್ಭಿಣಿಯರು ಕೂಡ ಇದನ್ನು ಸೇವನೆ ಮಾಡಬಹುದು.
  • ಈ ಹಣ್ಣು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮಾತ್ರವಲ್ಲ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೀಗಾಗಿ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಈ ಹಣ್ಣುಗಳು ಮೂಳೆಗಳನ್ನು ಬಲವಾಗಿಡುತ್ತದೆ. ಮಾತ್ರವಲ್ಲ, ಈ ಆವಕಾಡೊಗಳು ಹಣ್ಣಿನಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ರಂಜಕ ಸಮೃದ್ಧವಾಗಿದ್ದು, ಮೂಳೆಗಳ ಬಲಕ್ಕೆ ಅವಶ್ಯಕವಾಗಿದೆ.
  • ಆವಕಾಡೊ ಹಣ್ಣಿನಲ್ಲಿ ಹೆಚ್ಚಿನ ಫೈಬರ್ ಅಂಶವಿರುವುದರಿಂದ, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗೆ ಮುಕ್ತಿ ನೀಡುವುದಕ್ಕೆ ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ