ಆರೋಗ್ಯ ತಜ್ಞರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು, ಮೊಸರು ಸೇವನೆ ಮಾಡಬಾರದು ಎಂದು ಹೇಳುವುದಕ್ಕೆ ಕಾರಣವೇನು?

ಹಾಲು ಮತ್ತು ಮೊಸರು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಅವುಗಳನ್ನು ಸೇವಿಸಲು ಸರಿಯಾದ ಸಮಯವಿದೆ. ಅಮೃತದಂತಹ ಗುಣಗಳಿದ್ದರೂ ಸಹ ಬೆಳಗಿನ ಸಮಯದಲ್ಲಿ ಇವುಗಳ ಸೇವನೆ ತುಂಬಾ ಅಪಾಯಕಾರಿ. ಇದರ ಪರಿಣಾಮ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹಾಲು ಮತ್ತು ಮೊಸರು ಸೇವನೆ ಮಾಡುವುದಕ್ಕೆ ಸರಿಯಾದ ಸಮಯ ಯಾವುದು? ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ಏನಾಗುತ್ತೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯ ತಜ್ಞರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು, ಮೊಸರು ಸೇವನೆ ಮಾಡಬಾರದು ಎಂದು ಹೇಳುವುದಕ್ಕೆ ಕಾರಣವೇನು?
Curd And Milk

Updated on: Aug 29, 2025 | 8:35 AM

ಹಾಲು ಮತ್ತು ಮೊಸರು (Curd and Milk) ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ತಿಳಿದಿರುವ ವಿಚಾರ. ಆದರೆ ಅವುಗಳನ್ನು ಸೇವಿಸಲು ಕೂಡ ಸರಿಯಾದ ಸಮಯವಿದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು. ಎಷ್ಟೇ ಆರೋಗ್ಯಕರ ಪದಾರ್ಥವಾದರೂ ಸಹ ಅದರ ಸೇವನೆ ಮಾಡುವುದಕ್ಕೆ ಒಂದು ಸಮಯವಿರುತ್ತದೆ. ಅದರ ಹೊರತಾಗಿ, ನಮ್ಮ ಮನಸ್ಸಿಗೆ ಕಂಡಾಗ ಸೇವನೆ ಮಾಡಿದರೆ ಅದರಿಂದ ಸಿಗುವ ಲಾಭಕ್ಕಿಂತ ನಷ್ಟವೇ ಜಾಸ್ತಿಯಾಗಿರುತ್ತದೆ. ಅದರಲ್ಲಿಯೂ ವಿಶೇಷವಾಗಿ ಬೆಳಗಿನ ಸಮಯದಲ್ಲಿ ಹಾಲು ಮತ್ತು ಮೊಸರು ಸೇವಿಸುವುದು ತುಂಬಾ ಅಪಾಯಕಾರಿ ಎಂದು ಆರೋಗ್ಯ (Health) ತಜ್ಞರು ಹೇಳುತ್ತಾರೆ. ಏಕೆಂದರೆ ಈ ಸಮಯದಲ್ಲಿ ಸೇವನೆ ಮಾಡುವುದರಿಂದ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಹಾಗಾದರೆ ಹಾಲು ಮತ್ತು ಮೊಸರು ಸೇವನೆ ಮಾಡುವುದಕ್ಕೆ ಸರಿಯಾದ ಸಮಯ ಯಾವುದು? ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ಏನಾಗುತ್ತೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅನೇಕ ಜನರು ಬೆಳಿಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ಹಾಲನ್ನು ಕುಡಿಯುವ ಮೂಲಕ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಮಾತ್ರವಲ್ಲ, ಕೆಲವರು ಖಾಲಿ ಹೊಟ್ಟೆಯಲ್ಲಿ ಮೊಸರನ್ನು ಕೂಡ ಸೇವನೆ ಮಾಡುತ್ತಾರೆ. ಆದರೆ ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುವುದು ಅಥವಾ ಮೊಸರನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ತಜ್ಞರು ಹೇಳುತ್ತಾರೆ. ಆದ್ದರಿಂದ, ಖಾಲಿ ಹೊಟ್ಟೆಯಲ್ಲಿ ಹಾಲು ಅಥವಾ ಮೊಸರು ಸೇವಿಸದಂತೆ ಸಲಹೆ ನೀಡಲಾಗುತ್ತದೆ. ಆದರೆ ಇದಕ್ಕೂ ಕಾರಣವಿದೆ. ಆರೋಗ್ಯಕ್ಕೆ ಅಮೃತವಾದರೂ ಸಹ ಇದರ ಸೇವನೆಯನ್ನು ಖಾಲಿ ಹೊಟ್ಟೆಯಲ್ಲಿ ಮಾಡಬಾರದು.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್ ಕುಡಿಯುತ್ತಿದ್ದೀರಾ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ

ಇದನ್ನೂ ಓದಿ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಚಿಕ್ಕ ವಯಸ್ಸಿಗೆ ತಾಯಿಯಾಗುವವರೇ ಎಚ್ಚರ!
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಸಿಸೇರಿಯನ್‌, ನಾರ್ಮಲ್ ಡೆಲಿವರಿಯಾದ ಬಾಣಂತಿಯರಿಗೆ ಡಾ. ಶಿಲ್ಪಾ ಹೇಳೋದೇನು?

ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ಏನಾಗುತ್ತೆ?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುವುದು ಮತ್ತು ಮೊಸರು ತಿನ್ನುವುದರಿಂದ ಹೊಟ್ಟೆ ಉಬ್ಬರ, ಆಮ್ಲೀಯತೆ ಮತ್ತು ಹೊಟ್ಟೆ ನೋವು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಡೈರಿ ಉತ್ಪನ್ನಗಳು ನೈಸರ್ಗಿಕ ಲ್ಯಾಕ್ಟಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ಹೊಟ್ಟೆಯಲ್ಲಿ ಆಮ್ಲವನ್ನು ಸೃಷ್ಟಿಸುತ್ತದೆ, ಇದರ ಪರಿಣಾಮವಾಗಿ ಹೊಟ್ಟೆ ಉಬ್ಬರ ಉಂಟಾಗುತ್ತದೆ. ಕೆಲವೊಮ್ಮೆ ಮೊಸರಿನಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾಗಳು ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದರೂ ಸಹ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಇದು ಆಮ್ಲದ ಹಿಮ್ಮುಖ ಹರಿವಿಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ತಿಂಡಿ ತಿಂದ ಬಳಿಕ ಸೇವನೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ