AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹೆಚ್ಚು ಉಪ್ಪು ತಿನ್ನುತ್ತೀರಾ? ಹಾಗಿದ್ದರೆ ಈ ಅಪಾಯಕಾರಿ ಅಂಶಗಳ ಬಗ್ಗೆಯೂ ತಿಳಿದುಕೊಳ್ಳಿ

ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇರಿಸುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡಿದಂತೆ. ಆದ್ದರಿಂದ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಆಗುವ ಅನಾನುಕೂಲಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ಹೆಚ್ಚು ಉಪ್ಪು ತಿನ್ನುತ್ತೀರಾ? ಹಾಗಿದ್ದರೆ ಈ ಅಪಾಯಕಾರಿ ಅಂಶಗಳ ಬಗ್ಗೆಯೂ ತಿಳಿದುಕೊಳ್ಳಿ
ಅಕ್ಷತಾ ವರ್ಕಾಡಿ
|

Updated on: May 17, 2024 | 5:34 PM

Share

ಅಯೋಡಿನ್ ಆರೋಗ್ಯಕ್ಕೆ ಅತ್ಯಗತ್ಯ. ಉಪ್ಪು ಸೇವನೆಯಿಂದ ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಮಿತ ಪ್ರಮಾಣದಲ್ಲಿ ಉಪ್ಪು ಸೇವಿಸುವುದು ಅತ್ಯಂತ ಅಗತ್ಯ. ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಅನೇಕ ರೀತಿಯ ಹಾನಿ ಉಂಟಾಗುತ್ತದೆ. ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇರಿಸುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡಿದಂತೆ. ಆದ್ದರಿಂದ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಆಗುವ ಅನಾನುಕೂಲಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹೃದಯದ ಸಮಸ್ಯೆಗಳು:

ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಹೃದಯದ ತೊಂದರೆಗಳು ಉಂಟಾಗಬಹುದು. ಬಿಪಿಯ ಹೊರತಾಗಿ, ಉಪ್ಪು ಸೇವನೆಯು ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತದೆ. ಹೃದಯಕ್ಕೆ ಸರಿಯಾದ ಆಮ್ಲಜನಕ ಪೂರೈಕೆಯಾಗದಿದ್ದಾಗ, ಹೃದಯಾಘಾತ ಉಂಟಾಗುತ್ತದೆ.

ಜೀರ್ಣಕಾರಿ ಸಮಸ್ಯೆಗಳು:

ಅತಿಯಾಗಿ ಉಪ್ಪನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸಮಸ್ಯೆಯೂ ಉಂಟಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ನಿಮ್ಮ ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಉಂಟಾಗಬಹುದು. ಇದು ಅಜೀರ್ಣ ಮತ್ತು ಅಸಿಡಿಟಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಇದನ್ನೂ ಓದಿ: Covishield vaccine side-effects: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಶುರುವಾಯಿತು ಚಿಂತೆ? ತಜ್ಞರು ಹೇಳುವುದೇನು?

ಗ್ಲೂಕೋಸ್ ಮಟ್ಟವು ಪರಿಣಾಮ ಬೀರಬಹುದು:

ಮಧುಮೇಹ ಇರುವವರು ಉಪ್ಪಿನ ಸೇವನೆಯನ್ನು ತುಂಬಾ ಕಡಿಮೆ ಮಾಡಬೇಕು. ಮಧುಮೇಹ ಇರುವವರು ಉಪ್ಪು ಸೇವನೆಯ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಹೆಚ್ಚು ಉಪ್ಪನ್ನು ಸೇವಿಸಿದರೆ ದೇಹದಲ್ಲಿ ಇನ್ಸುಲಿನ್ ಮಟ್ಟ ಮತ್ತು ಗ್ಲೂಕೋಸ್ ಮಟ್ಟ ಹೆಚ್ಚಾಗಬಹುದು ಎನ್ನುತ್ತಾರೆ ತಜ್ಞರು. ಇದು ಟೈಪ್ 2 ಮಧುಮೇಹಕ್ಕೆ ಕಾರಣವಾಗಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ