ಅಯೋಡಿನ್ ಆರೋಗ್ಯಕ್ಕೆ ಅತ್ಯಗತ್ಯ. ಉಪ್ಪು ಸೇವನೆಯಿಂದ ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಮಿತ ಪ್ರಮಾಣದಲ್ಲಿ ಉಪ್ಪು ಸೇವಿಸುವುದು ಅತ್ಯಂತ ಅಗತ್ಯ. ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಅನೇಕ ರೀತಿಯ ಹಾನಿ ಉಂಟಾಗುತ್ತದೆ. ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇರಿಸುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡಿದಂತೆ. ಆದ್ದರಿಂದ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಆಗುವ ಅನಾನುಕೂಲಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಹೃದಯದ ತೊಂದರೆಗಳು ಉಂಟಾಗಬಹುದು. ಬಿಪಿಯ ಹೊರತಾಗಿ, ಉಪ್ಪು ಸೇವನೆಯು ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತದೆ. ಹೃದಯಕ್ಕೆ ಸರಿಯಾದ ಆಮ್ಲಜನಕ ಪೂರೈಕೆಯಾಗದಿದ್ದಾಗ, ಹೃದಯಾಘಾತ ಉಂಟಾಗುತ್ತದೆ.
ಅತಿಯಾಗಿ ಉಪ್ಪನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸಮಸ್ಯೆಯೂ ಉಂಟಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ನಿಮ್ಮ ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಉಂಟಾಗಬಹುದು. ಇದು ಅಜೀರ್ಣ ಮತ್ತು ಅಸಿಡಿಟಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.
ಮಧುಮೇಹ ಇರುವವರು ಉಪ್ಪಿನ ಸೇವನೆಯನ್ನು ತುಂಬಾ ಕಡಿಮೆ ಮಾಡಬೇಕು. ಮಧುಮೇಹ ಇರುವವರು ಉಪ್ಪು ಸೇವನೆಯ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಹೆಚ್ಚು ಉಪ್ಪನ್ನು ಸೇವಿಸಿದರೆ ದೇಹದಲ್ಲಿ ಇನ್ಸುಲಿನ್ ಮಟ್ಟ ಮತ್ತು ಗ್ಲೂಕೋಸ್ ಮಟ್ಟ ಹೆಚ್ಚಾಗಬಹುದು ಎನ್ನುತ್ತಾರೆ ತಜ್ಞರು. ಇದು ಟೈಪ್ 2 ಮಧುಮೇಹಕ್ಕೆ ಕಾರಣವಾಗಬಹುದು.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ