ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!

ನಿಮ್ಮ ಆಹಾರ ಕ್ರಮ ಸರಿಯಾಗಿ ಇಲ್ಲದಿದ್ದರೆ, ಆರೋಗ್ಯ ಚೆನ್ನಾಗಿರಲು ಸಾಧ್ಯವೇ ಇಲ್ಲ ಎಂಬುದು ನಿಮಗೆ ತಿಳಿದಿರಬಹುದು. ಅದರ ಜೊತೆಗೆ ಒಳ್ಳೆಯ ಊಟವನ್ನು ಸರಿಯಾಗಿ ಮಾಡದಿದ್ದರೆ ಅದು ಕೂಡ ಆರೋಗ್ಯಕ್ಕೆ ಹಾನಿಯುಂಟುಮಾಡಬಹುದು. ಹೌದು, ಊಟ ಮಾಡುವಾಗ ಫೋನ್ ಬಳಸಿದರೆ, ಅದು ನಿಮ್ಮ ಆರೋಗ್ಯಕ್ಕೂ ಹಾನಿ ಮಾಡುತ್ತದೆ. ಫೋನ್ ಬಳಸುವುದರಿಂದ ಕರುಳು ಹಾಳಾಗುತ್ತದೆ. ಹಾಗಾದರೆ ಫೋನ್ ಬಳಕೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆಯೇ, ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!
Digestive Health
Image Credit source: Getty Images

Updated on: Apr 07, 2026 | 4:51 PM

ಇಂದಿನ ಕಾಲದಲ್ಲಿ ಅನಾರೋಗ್ಯಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ಥಿರ ಜೀವನ ಶೈಲಿ. ಈಗ ಹೆಚ್ಚಿನವರು ಆನ್‌ಲೈನ್ ಮೂಲಕ ಆರ್ಡರ್ ಮಾಡಿ ತಿನ್ನುತ್ತಾರೆ. ಅಷ್ಟು ಮಾತ್ರವಲ್ಲ, ಊಟ ಮಾಡುವಾಗ ಮೊಬೈಲ್ ಬಳಸದೆಯೇ ಊಟ ಮಾಡುವುದೇ ಇಲ್ಲ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಅಭ್ಯಾಸ ನಿಮ್ಮ ಆರೋಗ್ಯಕ್ಕೆ, ಅದರಲ್ಲಿಯೂ ಕರುಳಿನ ಆರೋಗ್ಯಕ್ಕೆ (Gut Health) ಹಾನಿ ಉಂಟುಮಾಡಬಹುದು. ಹಾಗಾದರೆ ಫೋನ್ ಬಳಕೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆಯೇ, ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಫೋನ್ ಬಳಕೆ ಮತ್ತು ಜೀರ್ಣಕ್ರಿಯೆ ಮೇಲೆ ಪರಿಣಾಮ:

ಊಟ ಮಾಡುವಾಗ ಫೋನ್ ನೋಡುತ್ತಾ ಆಹಾರ ಸೇವನೆ ಮಾಡುವವರು ಸಾಮಾನ್ಯವಾಗಿ ಆಹಾರವನ್ನು ಸರಿಯಾಗಿ ಜಗಿದು ತಿನ್ನುವುದಿಲ್ಲ. ಇದರ ಪರಿಣಾಮವಾಗಿ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಈ ಒತ್ತಡದಿಂದ ಕರುಳು ಅಥವಾ ಗಟ್ ಆರೋಗ್ಯ ಹದಗೆಡುತ್ತದೆ. ಆಗ ಮೈಕ್ರೋಬಿಯೊಮ್‌ನಲ್ಲಿ ಅಸಮತೋಲನ ಉಂಟಾಗುತ್ತದೆ. ಇದು ಇಮ್ಯುನಿಟಿ ಕಡಿಮೆಯಾಗುವುದರಿಂದ ಹಿಡಿದು ನಿದ್ರಾಹೀನತೆ ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಖಾರವಾಗಿರುವ ಆಹಾರ ಸೇವನೆ ಮಾಡೋದಕ್ಕೆ ತುಂಬಾ ಇಷ್ಟಾನಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಕೆಟ್ಟ ಆಹಾರ ಪದ್ಧತಿಯೂ ಕಾರಣ!

ಪ್ಯಾಸಿಫಿಕ್ ವನ್‌ಹೆಲ್ತ್ ಸಂಸ್ಥೆಯ ಪ್ರಿವೆಂಟಿವ್ ವೆಲ್‌ನೆಸ್ ಮತ್ತು ಮೆಟಾಬಾಲಿಕ್ ಡಿಸೀಸ್ ವಿಭಾಗದ ಮುಖ್ಯಸ್ಥರಾದ ಡಾ. ಐಜಾಝ್ ಇಲ್ಮಿ ಅವರ ಪ್ರಕಾರ, 2025ರಲ್ಲಿ ನಡೆದ ಒಂದು ಅಧ್ಯಯನದಂತೆ ಸುಮಾರು 39% ನಗರ ಪ್ರದೇಶದ ಜನರು ಕಡಿಮೆ ಫೈಬರ್ ಇರುವ ಆಹಾರ ಸೇವಿಸುತ್ತಿದ್ದಾರೆ. ಜೊತೆಗೆ 36% ಕ್ಕಿಂತ ಹೆಚ್ಚು ಜನರು ಹೆಚ್ಚು ಸಕ್ಕರೆ ಇರುವ ಆಹಾರಗಳನ್ನು ಸೇವಿಸುತ್ತಿದ್ದಾರೆ. ಈ ರೀತಿಯ ಆಹಾರ ಪದ್ಧತಿಗಳು ಕರುಳಿನ ಆರೋಗ್ಯವನ್ನು ಹಾನಿಗೊಳಿಸುತ್ತವೆ. ದೇಹದಲ್ಲಿ ಉರಿಯೂತ (ಇನ್‌ಫ್ಲಮೇಷನ್) ಹೆಚ್ಚುವುದು, ಇಮ್ಯೂನ್ ಸಿಸ್ಟಮ್ ಮೇಲೆ ಪರಿಣಾಮ ಬೀಳುವುದು ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುತ್ತವೆ. ಹೊಟ್ಟೆ ಉಬ್ಬರ, ಮಧ್ಯಾಹ್ನದ ವೇಳೆಯಲ್ಲಿ ದಣಿವು ಇತ್ಯಾದಿ ಲಕ್ಷಣಗಳು ಕಂಡುಬರುತ್ತದೆ ಆದರೆ ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುವುದರಿಂದ ಸಮಸ್ಯೆ ಗಂಭೀರವಾಗಬಹುದು.

ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು:

  • ಊಟ ಮಾಡುವಾಗ ಫೋನ್ ಬಳಕೆ ಮಾಡಬೇಡಿ
  • ಆಹಾರದಲ್ಲಿ ದಾಲ್, ಹಣ್ಣು ಮತ್ತು ಕಾಯಿ, ಬೀಜಗಳನ್ನು ಸೇರಿಸಿಕೊಳ್ಳಿ
  • ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ
  • ಪ್ರತಿದಿನ ವ್ಯಾಯಾಮ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us