AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಶ್ರೀ ಕೃಷ್ಣನಿಗೆ ಪ್ರಿಯವಾದ ಈ ರವೆ ಉಂಡೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

Krishna Janmashtami 2025: ಕೃಷ್ಣನಿಗೆ ಪ್ರಿಯವಾದ ರವೆ ಉಂಡೆ ಕೇವಲ ಸಿಹಿ ಮಾತ್ರವಲ್ಲ ಇದು ಆರೋಗ್ಯಕ್ಕೂ ಪ್ರಯೋಜಕಾರಿಯಾಗಿರುವ ಸೂಪರ್ ಫುಡ್. ದೇವರ ನೈವೇದ್ಯಕ್ಕಾಗಿ ಮಾಡುವ ರವೆ ಉಂಡೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ರವೆಯಲ್ಲಿ ಫೈಬರ್, ಪ್ರೋಟೀನ್, ವಿಟಮಿನ್ ಗಳು ಮತ್ತು ಖನಿಜಾಂಶಗಳು ಸಮೃದ್ಧವಾಗಿವೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು, ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾದ್ರೆ ಈ ರವೆ ಉಂಡೆ ಸೇವನೆ ಮಾಡುವುದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

Krishna Janmashtami 2025: ಶ್ರೀ ಕೃಷ್ಣನಿಗೆ ಪ್ರಿಯವಾದ ಈ ರವೆ ಉಂಡೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು
Health Benefits Of Rava Laddu
ಪ್ರೀತಿ ಭಟ್​, ಗುಣವಂತೆ
|

Updated on: Aug 15, 2025 | 4:15 PM

Share

ಗೋಕುಲಾಷ್ಟಮಿ (Krishna Janmashtami) ಹಬ್ಬವನ್ನು ಸಾಮಾನ್ಯವಾಗಿ ಎಲ್ಲರೂ ಕೂಡ ತುಂಬಾ ಖುಷಿ ಖುಷಿಯಿಂದ ಆಚರಣೆ ಮಾಡುತ್ತಾರೆ. ಕೃಷ್ಣನ ಹುಟ್ಟಿದ ದಿನವನ್ನು ಹಬ್ಬವಾಗಿ ಆಚರಿಸುವುದರಲ್ಲಿರುವ ಸಂತೋಷ ಬೇರೆ ಯಾವುದರಲ್ಲಿಯೂ ಸಿಗುವುದಿಲ್ಲ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ದೇವರ ನೈವೇದ್ಯಕ್ಕಾಗಿ ವಿವಿಧ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ ಅದರಲ್ಲಿ ಶ್ರೀ ಕೃಷ್ಣನಿಗೆ ಪ್ರಿಯವಾದ ರವೆ ಉಂಡೆಯೂ ಕೂಡ ಒಂದು. ಇದೊಂದು ಜನಪ್ರಿಯ ಸಿಹಿ ತಿಂಡಿ. ಮಾತ್ರವಲ್ಲ ಇದು ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿ. ಸಿಹಿತಿಂಡಿ ನಮ್ಮ ದೇಹಕ್ಕೆ ಆರೋಗ್ಯಕರವಾಗಿರಬಹುದೇ ಎಂದು ಆಶ್ಚರ್ಯವಾಗಬಹುದು ಆದರೆ ಇದು ಸತ್ಯ. ರವೆಯಲ್ಲಿ ಫೈಬರ್, ಪ್ರೋಟೀನ್, ವಿಟಮಿನ್ ಗಳು ಮತ್ತು ಖನಿಜಾಂಶಗಳು ಸಮೃದ್ಧವಾಗಿವೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು, ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರವೆ ಉಂಡೆ (Rava Laddu) ಅಥವಾ ರವೆಯುಂಡೆ ಯಲ್ಲಿ ನೀವು ಊಹಿಸಲೂ ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳಿವೆ. ಹಾಗಾದರೆ ಆರೋಗ್ಯಕ್ಕೆ ಹೇಗೆ ಒಳ್ಳೆಯದು? ಸೇವನೆ ಮಾಡುವುದರಿಂದ ಸಿಗುವ ಲಾಭಗಳೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರವೆ ಉಂಡೆ ಆರೋಗ್ಯ ಪ್ರಯೋಜನಗಳು:

ಜೀರ್ಣಕ್ರಿಯೆಗೆ ಸಹಕಾರಿ:

ರವೆಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ಕರುಳು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು:

ರವೆಯಲ್ಲಿರುವ ಫೈಬರ್ ಅಂಶವು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ
Image
ಕೃಷ್ಣ ಜನ್ಮಾಷ್ಟಮಿ ದಿನ ತಪ್ಪದೇ ಭೇಟಿ ನೀಡಲೇಬೇಕಾದ ಕೃಷ್ಣ ದೇವಾಲಯಗಳಿವು
Image
ಶ್ರೀಕೃಷ್ಣನ ಮೈ ಬಣ್ಣ ನೀಲಿ ಯಾಕೆ? ಇದೇ ನೋಡಿ ಕಾರಣ
Image
ರಾಧ-ಕೃಷ್ಣ ವೇಷ ತೊಡುವುದಕ್ಕೆ ವಯಸ್ಸಿನ ಮಿತಿಯಿದೆಯೇ?
Image
ಶ್ರೀಕೃಷ್ಣ ಜಗತ್ತಿಗೆ ಹೇಳಿದ ಈ ಮೂರು ಕಟು ಸತ್ಯಗಳ ಬಗ್ಗೆ ನಿಮಗೆ ತಿಳಿದಿದ್ಯಾ

ಶಕ್ತಿಯನ್ನು ಹೆಚ್ಚಿಸುತ್ತದೆ:

ರವೆಯಲ್ಲಿರುವ ಕಾರ್ಬೋಹೈಡ್ರೇಟ್‌ ಗಳು ಶಕ್ತಿಯ ಮೂಲವಾಗಿದೆ. ಇದು ದೀರ್ಘಕಾಲದ ವರೆಗೆ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ:

ರವೆಯಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ನಂತಹ ಖನಿಜಾಂಶಗಳು ಸಮೃದ್ಧವಾಗಿವೆ, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದಕ್ಕೆ ಬಳಸುವ ತುಪ್ಪ ಕೂಡ ಮೂಳೆಗಳ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ರವೆಯಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ರವೆ ಉಂಡೆಯಲ್ಲಿ ಬಳಸುವ ತುಪ್ಪ ಕೂಡ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದ್ದು ಸೋಂಕುಗಳು ಬರದಂತೆ ತಡೆಯುತ್ತದೆ.

ಇದನ್ನೂ ಓದಿ: Independence Day 2025: ಸ್ವಾತಂತ್ರ್ಯೋತ್ಸವದಂದು ಬೆಳಗ್ಗಿನ ಉಪಹಾರಕ್ಕೆ ತಯಾರಿಸಿ ತ್ರಿವರ್ಣ ಇಡ್ಲಿ

ತೂಕ ಇಳಿಕೆಗೆ ಸಹಕಾರಿ:

ರವೆಯಲ್ಲಿರುವ ಫೈಬರ್ ಅಂಶವು ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ರವೆ ಉಂಡೆ ತಯಾರಿಸಲು ಬೇಕಾಗುವ ಸಾಮಗ್ರಿಗಳು:

ರವೆ, ಸಕ್ಕರೆ, ತುಪ್ಪ, ಏಲಕ್ಕಿ ಪುಡಿ, ಗೋಡಂಬಿ

ರವೆ ಉಂಡೆ ಮಾಡುವ ವಿಧಾನ:

  • ತುಪ್ಪವನ್ನು ಬಿಸಿ ಮಾಡಿ ಅದರಲ್ಲಿ ರವೆಯನ್ನು ಹುರಿಯಿರಿ.
  • ಹುರಿದ ರವೆಗೆ ಸಕ್ಕರೆ, ಏಲಕ್ಕಿ ಪುಡಿ, ಗೋಡಂಬಿ ಮತ್ತು ಕಿಷ್ಮಿಸ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
  • ಮಿಶ್ರಣವನ್ನು ಸ್ವಲ್ಪ ತಣ್ಣಗಾಗಲು ಬಿಡಿ.
  • ಮಿಶ್ರಣದಿಂದ ಸಣ್ಣ ಉಂಡೆಗಳನ್ನು ಮಾಡಿ.
  • ಈ ರೀತಿ ತಯಾರಿಸಿದ ರವೆ ಉಂಡೆಗಳನ್ನು ತಿನ್ನುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ