
ಗೋಕುಲಾಷ್ಟಮಿ (Krishna Janmashtami) ಹಬ್ಬವನ್ನು ಸಾಮಾನ್ಯವಾಗಿ ಎಲ್ಲರೂ ಕೂಡ ತುಂಬಾ ಖುಷಿ ಖುಷಿಯಿಂದ ಆಚರಣೆ ಮಾಡುತ್ತಾರೆ. ಕೃಷ್ಣನ ಹುಟ್ಟಿದ ದಿನವನ್ನು ಹಬ್ಬವಾಗಿ ಆಚರಿಸುವುದರಲ್ಲಿರುವ ಸಂತೋಷ ಬೇರೆ ಯಾವುದರಲ್ಲಿಯೂ ಸಿಗುವುದಿಲ್ಲ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ದೇವರ ನೈವೇದ್ಯಕ್ಕಾಗಿ ವಿವಿಧ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ ಅದರಲ್ಲಿ ಶ್ರೀ ಕೃಷ್ಣನಿಗೆ ಪ್ರಿಯವಾದ ರವೆ ಉಂಡೆಯೂ ಕೂಡ ಒಂದು. ಇದೊಂದು ಜನಪ್ರಿಯ ಸಿಹಿ ತಿಂಡಿ. ಮಾತ್ರವಲ್ಲ ಇದು ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿ. ಸಿಹಿತಿಂಡಿ ನಮ್ಮ ದೇಹಕ್ಕೆ ಆರೋಗ್ಯಕರವಾಗಿರಬಹುದೇ ಎಂದು ಆಶ್ಚರ್ಯವಾಗಬಹುದು ಆದರೆ ಇದು ಸತ್ಯ. ರವೆಯಲ್ಲಿ ಫೈಬರ್, ಪ್ರೋಟೀನ್, ವಿಟಮಿನ್ ಗಳು ಮತ್ತು ಖನಿಜಾಂಶಗಳು ಸಮೃದ್ಧವಾಗಿವೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು, ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರವೆ ಉಂಡೆ (Rava Laddu) ಅಥವಾ ರವೆಯುಂಡೆ ಯಲ್ಲಿ ನೀವು ಊಹಿಸಲೂ ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳಿವೆ. ಹಾಗಾದರೆ ಆರೋಗ್ಯಕ್ಕೆ ಹೇಗೆ ಒಳ್ಳೆಯದು? ಸೇವನೆ ಮಾಡುವುದರಿಂದ ಸಿಗುವ ಲಾಭಗಳೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ರವೆಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ಕರುಳು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.
ರವೆಯಲ್ಲಿರುವ ಫೈಬರ್ ಅಂಶವು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸಿ ಉರಿಯೂತವನ್ನು ಕಡಿಮೆ ಮಾಡುತ್ತದೆ.
ರವೆಯಲ್ಲಿರುವ ಕಾರ್ಬೋಹೈಡ್ರೇಟ್ ಗಳು ಶಕ್ತಿಯ ಮೂಲವಾಗಿದೆ. ಇದು ದೀರ್ಘಕಾಲದ ವರೆಗೆ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.
ರವೆಯಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ನಂತಹ ಖನಿಜಾಂಶಗಳು ಸಮೃದ್ಧವಾಗಿವೆ, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದಕ್ಕೆ ಬಳಸುವ ತುಪ್ಪ ಕೂಡ ಮೂಳೆಗಳ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.
ರವೆಯಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ರವೆ ಉಂಡೆಯಲ್ಲಿ ಬಳಸುವ ತುಪ್ಪ ಕೂಡ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದ್ದು ಸೋಂಕುಗಳು ಬರದಂತೆ ತಡೆಯುತ್ತದೆ.
ಇದನ್ನೂ ಓದಿ: Independence Day 2025: ಸ್ವಾತಂತ್ರ್ಯೋತ್ಸವದಂದು ಬೆಳಗ್ಗಿನ ಉಪಹಾರಕ್ಕೆ ತಯಾರಿಸಿ ತ್ರಿವರ್ಣ ಇಡ್ಲಿ
ರವೆಯಲ್ಲಿರುವ ಫೈಬರ್ ಅಂಶವು ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ರವೆ, ಸಕ್ಕರೆ, ತುಪ್ಪ, ಏಲಕ್ಕಿ ಪುಡಿ, ಗೋಡಂಬಿ
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ