ರಾತ್ರಿ ಊಟ ತಡವಾಗಿ ಮಾಡುತ್ತಿದ್ದರೆ ಈ ವಿಷಯಗಳನ್ನು ನೀವು ತಿಳಿದುಕೊಳ್ಳಬೇಕು

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ನಮ್ಮ ಜೀವನಶೈಲಿ, ಕೆಲಸದ ಒತ್ತಡದಿಂದಾಗಿ ಅನೇಕರು ಊಟಕ್ಕೆ ಸರಿಯಾದ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಈ ರೀತಿಯ ಹಲವಾರು ಕಾರಣಗಳಿಂದಾಗಿ ಊಟ ಮಾಡುವುದು ತಡವಾಗುತ್ತಿದೆ. ಇಂತಹ ಅಭ್ಯಾಸ ತಿಳಿದೋ ತಿಳಿಯದೆಯೋ ದೇಹಕ್ಕೆ ಅನೇಕ ರೀತಿಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಊಟ ವಿಳಂಬವಾದರೆ ಯಾವ ರೀತಿಯ ಸಮಸ್ಯೆಗಳನ್ನು ಎದುರಿಸಬೇಕು? ತಡವಾಗಿ ಊಟ ಮಾಡುವುದರಿಂದ ಯಾವ ರೀತಿಯ ಪರಿಣಾಮಗಳು ಕಂಡು ಬರುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ರಾತ್ರಿ ಊಟ ತಡವಾಗಿ ಮಾಡುತ್ತಿದ್ದರೆ ಈ ವಿಷಯಗಳನ್ನು ನೀವು ತಿಳಿದುಕೊಳ್ಳಬೇಕು
ಸಾಂದರ್ಭಿಕ ಚಿತ್ರ
Edited By:

Updated on: Feb 11, 2025 | 6:09 PM

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಕಷ್ಟ. ಒಳ್ಳೆಯ ಆಹಾರ ಸೇವನೆ ಮಾಡುವುದು ಮಾತ್ರವಲ್ಲ ಅವುಗಳನ್ನು ಸರಿಯಾದ ಸಮಯಕ್ಕೆ ಸೇವನೆ ಮಾಡುವುದು ಕೂಡ ಬಹಳ ಮುಖ್ಯವಾಗುತ್ತದೆ. ಬದಲಾಗುತ್ತಿರುವ ನಮ್ಮ ಜೀವನಶೈಲಿ, ಕೆಲಸದ ಒತ್ತಡದಿಂದಾಗಿ ಅನೇಕರು ಊಟಕ್ಕೆ ಸರಿಯಾದ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ರಾತ್ರಿ ಊಟಕ್ಕೆ ಸಮಯ ನಿಗದಿ ಮಾಡಿಕೊಳ್ಳುವುದು ಬಹಳ ಮುಖ್ಯ. ತಜ್ಞರ ಪ್ರಕಾರ, ಸಂಜೆ 5 ರಿಂದ 7 ರವರೆಗೆ ಊಟ ಮಾಡುವುದು ಉತ್ತಮ. ಈ ಸಮಯದಲ್ಲಿ ನೀವು ಸೇವನೆ ಮಾಡುವ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಇದಲ್ಲದೆ, ಹಾರ್ಮೋನುಗಳ ಸಮತೋಲನ ಸುಧಾರಿಸುತ್ತದೆ. ಇದೆಲ್ಲದರ ಜೊತೆಗೆ ಊಟದ ನಂತರ, ಕನಿಷ್ಠ 2 ರಿಂದ 3 ಗಂಟೆಗಳ ವಿರಾಮ ನೀಡುವುದು ಬಹಳ ಮುಖ್ಯವಾಗಿರುವುದರಿಂದ ಈ ಸಮಯದಲ್ಲಿ ಊಟ ಮಾಡಿದರೆ ಆರೋಗ್ಯವೂ ಚೆನ್ನಾಗಿರುತ್ತದೆ ರಾತ್ರಿ ನಿದ್ರೆಯೂ ಸರಿಯಾಗಿ ಆಗುತ್ತದೆ. ಹಾಗಾದರೆ ಊಟ ವಿಳಂಬವಾದರೆ ಯಾವ ರೀತಿಯ ಸಮಸ್ಯೆಗಳನ್ನು ಎದುರಿಸಬೇಕು? ತಡವಾಗಿ ಊಟ ಮಾಡುವುದರಿಂದ ಯಾವ ರೀತಿಯ ಪರಿಣಾಮಗಳು ಕಂಡು ಬರುತ್ತವೆ ಎಂಬುದನ್ನು ತಿಳಿದುಕೊಳ್ಳಿ.

  • ಜೀರ್ಣಕಾರಿ ಸಮಸ್ಯೆಗಳು ಹೆಚ್ಚುತ್ತವೆ: ಊಟ ವಿಳಂಬವಾದರೆ ಜೀರ್ಣಕಾರಿ ಸಮಸ್ಯೆಗಳು ಕಂಡುಬರುತ್ತವೆ. ಏಕೆಂದರೆ ರಾತ್ರಿ ತಡವಾಗಿ ತಿನ್ನುವುದರಿಂದ ಆಹಾರ ಸರಿಯಾಗಿ ಜೀರ್ಣವಾಗದಿರುವುದರಿಂದ ಗ್ಯಾಸ್, ಆಮ್ಲೀಯತೆ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಗೆ ಕಾರಣವಾಗಬಹುದು.
  • ತೂಕ ಹೆಚ್ಚಾಗುವ ಅಪಾಯ: ತಡವಾಗಿ ತಿನ್ನುವುದರಿಂದ ದೇಹವು ಹೆಚ್ಚಿನ ಕ್ಯಾಲೊರಿಗಳನ್ನು ಸುಡಲು ಸಾಧ್ಯವಾಗುವುದಿಲ್ಲ. ಇದು ಕೊಬ್ಬು ಶೇಖರಣೆ ಮತ್ತು ತೂಕ ಹೆಚ್ಚಾಗುವ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ.
  • ನಿದ್ರಾಹೀನತೆ: ರಾತ್ರಿ ಊಟವಾದ ತಕ್ಷಣ ಮಲಗುವ ಅಭ್ಯಾಸ ರೂಢಿಸಿಕೊಂಡಲ್ಲಿ ಜೀರ್ಣಕ್ರಿಯೆ ಸರಿಯಾಗಿ ನಡೆಯುವುದಿಲ್ಲ. ಇದು ನಿಮ್ಮ ಸುಖ ನಿದ್ರೆಗೆ ಅಡೆತಡೆ ಉಂಟುಮಾಡುತ್ತದೆ ಇದರಿಂದ ನಾನಾ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಜೊತೆಗೆ ನಿದ್ರಾಹೀನತೆಗೆ ಮುಖ್ಯ ಕಾರಣವಾಗುತ್ತದೆ
  • ಹಾರ್ಮೋನುಗಳ ಅಸಮತೋಲನ: ತಡವಾಗಿ ತಿನ್ನುವುದು ದೇಹದಲ್ಲಿ ಹಾರ್ಮೋನುಗಳ ಅಸಮತೋಲನಕ್ಕೆ ಕಾರಣವಾಗಬಹುದು. ಇದು ಮಾನಸಿಕ ಒತ್ತಡ, ಮಧುಮೇಹ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು.
  • ಹೃದಯದ ಆರೋಗ್ಯದ ಮೇಲೆ ಪರಿಣಾಮ: ರಾತ್ರಿ ತಡವಾಗಿ ತಿನ್ನುವುದು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಇವೆಲ್ಲವೂ ಹೃದಯದ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರಬಹುದು.

ಹಾಗಾಗಿ ಪ್ರತಿನಿತ್ಯ ನೀವು ಸಮಯಕ್ಕೆ ಸರಿಯಾಗಿ ಊಟ ಮಾಡಿದರೆ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಆಹಾರವು ಸರಿಯಾಗಿ ಜೀರ್ಣವಾಗುತ್ತದೆ. ನಿದ್ರೆಯಲ್ಲಿ ಅಡೆತಡೆಯಿಲ್ಲದೆ ದೇಹವು ಸಂಪೂರ್ಣ ವಿಶ್ರಾಂತಿ ಪಡೆಯುತ್ತದೆ. ತೂಕವೂ ಕೂಡ ನಿಯಂತ್ರಣದಲ್ಲಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ