AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gut Bacteria: ಕರುಳಿನ ಆರೋಗ್ಯವನ್ನು ಕಾಪಾಡಲು ಈ ಜೀವನಶೈಲಿ ರೂಢಿಸಿಕೊಳ್ಳಿ

ಕರುಳು ಮತ್ತು ಮೆದುಳಿನ ನಡುವೆ ನೇರ ಸಂಪರ್ಕವಿದೆ ಎಂದು ಸಂಶೋಧನೆ ತೋರಿಸಿದೆ. ತೊಂದರೆಗೊಳಗಾದ ಕರುಳು ಮನಸ್ಸಿಗೆ ಸಂಕೇತಗಳನ್ನು ಕಳುಹಿಸಬಹುದು, ಹಾಗೆಯೇ ತೊಂದರೆಗೊಳಗಾದ ಮೆದುಳು ಕರುಳಿಗೆ ಸಂಕೇತಗಳನ್ನು ಕಳುಹಿಸಬಹುದು ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ.

Gut Bacteria: ಕರುಳಿನ ಆರೋಗ್ಯವನ್ನು ಕಾಪಾಡಲು ಈ ಜೀವನಶೈಲಿ ರೂಢಿಸಿಕೊಳ್ಳಿ
Gut Health
Follow us
ಅಕ್ಷತಾ ವರ್ಕಾಡಿ
|

Updated on: Jul 26, 2023 | 6:24 AM

ಕರುಳಿನಲ್ಲಿ ಆರೋಗ್ಯಕರ ಸಮತೋಲನವನ್ನು ಕಾಯ್ದುಕೊಳ್ಳಲು ಸಹಾಯ ಮಾಡುವ ಸೂಕ್ಷ್ಮಾಣುಜೀವಿಗಳು ಕರುಳಿನ ಬ್ಯಾಕ್ಟೀರಿಯಾಗಳಾಗಿವೆ. ಈ ಜೀವಿಗಳು ವ್ಯಕ್ತಿಯ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಜೊತೆಗೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಕರುಳು ಮತ್ತು ಮೆದುಳಿನ ನಡುವೆ ನೇರ ಸಂಪರ್ಕವಿದೆ ಎಂದು ಸಂಶೋಧನೆ ತೋರಿಸಿದೆ. ಸಂಪರ್ಕವು ದ್ವಿಮುಖವಾಗಿದೆ. ತೊಂದರೆಗೊಳಗಾದ ಕರುಳು ಮನಸ್ಸಿಗೆ ಸಂಕೇತಗಳನ್ನು ಕಳುಹಿಸಬಹುದು, ಹಾಗೆಯೇ ತೊಂದರೆಗೊಳಗಾದ ಮೆದುಳು ಕರುಳಿಗೆ ಸಂಕೇತಗಳನ್ನು ಕಳುಹಿಸಬಹುದು. ಸರಿಯಾದ ಆಹಾರ, ನಿಯಮಿತ ದೈಹಿಕ ವ್ಯಾಯಾಮ ಮತ್ತು ಜಡ ಜೀವನಶೈಲಿಯನ್ನು ತಪ್ಪಿಸುವ ಮೂಲಕ ಕರುಳಿನ ಬ್ಯಾಕ್ಟೀರಿಯಾವನ್ನು ಸುಧಾರಿಸಬಹುದು ಎಂದು ಸಂಶೋಧನೆಳು ಬಹಿರಂಗಪಡಿಸಿದೆ.

ಕರುಳಿನ ಆರೋಗ್ಯವನ್ನು ಹೇಗೆ ಸುಧಾರಿಸುವುದು?

ಪ್ರೋಬಯಾಟಿಕ್‌ಗಳನ್ನು ತೆಗೆದುಕೊಳ್ಳುವುದು:

ಪ್ರೋಬಯಾಟಿಕ್‌ಗಳನ್ನು ಸೇವಿಸುವುದರಿಂದ ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳನ್ನು ಬೆಂಬಲಿಸುತ್ತದೆ ಮತ್ತು ಇದು ಕರುಳಿನ ಉರಿಯೂತ ಮತ್ತು ಇತರ ಕರುಳಿನ ಸಮಸ್ಯೆಗಳನ್ನು ತಡೆಯುತ್ತದೆ. ಹುದುಗಿಸಿದ ತರಕಾರಿಗಳು, ಕೆಫಿರ್, ಕಿಮ್ಚಿ, ಕೊಂಬುಚಾ, ಮೊಸರು ಮುಂತಾದ ಆಹಾರಗಳು ಪ್ರೋಬಯಾಟಿಕ್‌ಗಳ ಸಮೃದ್ಧ ಮೂಲವಾಗಿದೆ.

ಕಡಿಮೆ ಸಕ್ಕರೆ ತಿನ್ನಿರಿ:

ಕೃತಕ ಸಿಹಿಕಾರಕಗಳು ಮಾನವನ ಕರುಳಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಹಲವಾರು ಅಧ್ಯಯನಗಳು ಸೂಚಿಸಿವೆ. ಹೆಚ್ಚಿನ ಪ್ರಮಾಣದ ಸಕ್ಕರೆ ಅಥವಾ ಕೃತಕ ಸಿಹಿಕಾರಕಗಳನ್ನು ಸೇವಿಸುವುದರಿಂದ ಕರುಳಿನ ಸೂಕ್ಷ್ಮಜೀವಿಗಳ ಅಸಮತೋಲನ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ತೊಂದರೆಗೊಳಿಸುತ್ತದೆ ಎಂದು ಇದು ಸೂಚಿಸುತ್ತದೆ.

ನಿಯಮಿತ ವ್ಯಾಯಾಮ:

ನಿಯಮಿತ ದೈಹಿಕ ವ್ಯಾಯಾಮವು ಕರುಳಿನ ಸೂಕ್ಷ್ಮಜೀವಿಗಳ ಸಮತೋಲನವನ್ನು ಸುಧಾರಿಸುತ್ತದೆ ಮತ್ತು ಉತ್ತಮ ಹೃದಯದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಕ್ರೀಡಾಪಟುಗಳು ಇತರರಿಗಿಂತ ದೊಡ್ಡ ವೈವಿಧ್ಯಮಯ ಕರುಳಿನ ಸಸ್ಯವನ್ನು ಹೊಂದಿದ್ದರು ಎಂದು ಅಧ್ಯಯನವು ತೋರಿಸಿದೆ.

ಇದನ್ನೂ ಓದಿ: Monsoon Recipe: ಮಳೆಗಾಲಕ್ಕೆ ಹೇಳಿ ಮಾಡಿಸಿದ ಘರಂ ಕಾಳುಮೆಣಸಿನ ಸಾರು; ರೆಸಿಪಿ ಇಲ್ಲಿದೆ

ಸರಿಯಾದ ನಿದ್ರೆಯ ಅಭ್ಯಾಸಗಳು:

ಸರಿಯಾದ ನಿದ್ರೆಯ ದಿನಚರಿಯು ಮನಸ್ಥಿತಿ, ಅರಿವು ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ಕಳಪೆ ಮಲಗುವ ಅಭ್ಯಾಸವು ವ್ಯಕ್ತಿಯ ಕರುಳಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಉರಿಯೂತದ ಪರಿಸ್ಥಿತಿಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​