Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಲಕ್ಕಿಯಲ್ಲಿರುವ ಈ ಆರೋಗ್ಯ ರಹಸ್ಯ ತಿಳಿದರೆ ಪ್ರತಿದಿನ ಇದನ್ನೇ ತಿನ್ನುತ್ತೀರಿ

ಪರಮಾತ್ಮ ಶ್ರೀಕೃಷ್ಣನಿಗೆ ಪ್ರೀಯವಾದ ಅವಲಕ್ಕಿ ಕೇವಲ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲ ಅನೇಕ ರೀತಿಯಲ್ಲಿ ಆರೋಗ್ಯ ಪ್ರಯೋಜನಗಳನ್ನು ಕೂಡ ನೀಡುತ್ತದೆ. ಇದನ್ನು ಸೇವನೆ ಮಾಡುವುದು ಕೆಲವರಿಗೆ ಇಷ್ಟವಾಗದಿರಬಹುದು ಆದರೆ ಇದನ್ನು ಒಮ್ಮೆ ಸೇವನೆ ಮಾಡಿದರೆ ಅಥವಾ ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಅವಲಕ್ಕಿ ತಿನ್ನುವುದನ್ನು ತಪ್ಪಿಸುವುದಿಲ್ಲ. ಹಾಗಾದರೆ ಇದು ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಅವಲಕ್ಕಿಯಲ್ಲಿರುವ ಈ ಆರೋಗ್ಯ ರಹಸ್ಯ ತಿಳಿದರೆ ಪ್ರತಿದಿನ ಇದನ್ನೇ ತಿನ್ನುತ್ತೀರಿ
ಸಾಂದರ್ಭಿಕ ಚಿತ್ರ Image Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 16, 2025 | 5:14 PM

ಅವಲಕ್ಕಿಯನ್ನು ತಿನ್ನದವರಿಲ್ಲ. ಇದು ಪರಮಾತ್ಮ ಶ್ರೀಕೃಷ್ಣನಿಗೂ ಪ್ರೀಯ. ಇದನ್ನು ಚಪ್ಪಟೆಯಾದ ಅಕ್ಕಿ ಅಥವಾ ಪೋಹಾ (poha) ಎಂದೂ ಕರೆಯಲಾಗುತ್ತದೆ. ನೀವು ಇದರಿಂದ ಮಾಡುವ ಹಲವಾರು ಬಗೆಯ ಖಾದ್ಯಗಳನ್ನು ಮನಸಾರೆ ಸವಿದಿರಬಹುದು. ಆದರೆ ಇದು ಕೇವಲ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ (Health) ಪ್ರಯೋಜನಗಳನ್ನು ನೀಡುತ್ತದೆ. ಹಾಗಾಗಿಯೇ ಇವುಗಳನ್ನು ಅನೇಕ ಮನೆ ಮದ್ದುಗಳಲ್ಲಿ ಬಳಕೆ ಮಾಡಲಾಗುತ್ತದೆ. ಅದಲ್ಲದೆ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ಒಳ್ಳೆಯ ಆಹಾರವಾಗಿದೆ. ಹಾಗಾ್ದರೆ ಇದನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅವಲಕ್ಕಿಯಲ್ಲಿದೆ ಆರೋಗ್ಯ ಪ್ರಯೋಜನ:

  • ಅವಲಕ್ಕಿಯಲ್ಲಿ ಕಾರ್ಬೋಹೈಡ್ರೇಟ್ಗಳು, ಫೈಬರ್ ಮತ್ತು ಕಬ್ಬಿಣದ ಅಂಶಗಳು ಸಮೃದ್ಧವಾಗಿದ್ದು, ಕಡಿಮೆ ಕ್ಯಾಲೊರಿಗಳನ್ನು ಹೊಂದಿದೆ. ಇದರ ಸೇವನೆ ಮಾಡುವುದರಿಂದ ಆರೋಗ್ಯಕರ ಕೆಂಪು ರಕ್ತ ಕಣಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ ರಕ್ತಹೀನತೆಯನ್ನು ತಡೆಯಬಹುದು.
  • ಅವಲಕ್ಕಿಯಲ್ಲಿರುವ ಫೈಬರ್ ಅಂಶವು ಕರುಳಿನ ಆರೋಗ್ಯವನ್ನು ಕಾಪಾಡಲು ಮತ್ತು ಮಲಬದ್ಧತೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
  • ಅವಲಕ್ಕಿಯ ಫೈಬರ್ ಅಂಶ ಹೆಚ್ಚಾಗಿದ್ದು ಕಡಿಮೆ ಕ್ಯಾಲೊರಿಗಳಿರುವುದರಿಂದ ಹೆಚ್ಚು ಸಮಯದ ವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದ ನಿಮಗೆ ಪದೇ ಪದೇ ಹಸಿವಾಗುವುದಿಲ್ಲ.
  • ಅವಲಕ್ಕಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಈ ಆಹಾರವನ್ನು ಜೀರ್ಣಿಸಿಕೊಳ್ಳುವುದು ಕೂಡ ಸುಲಭವಾಗಿರುತ್ತದೆ.

ಇದನ್ನೂ ಓದಿ: ಕಣ್ಣಿನಲ್ಲಿರುವ ರಕ್ತನಾಳಗಳ ಆರೋಗ್ಯ ಹೆಚ್ಚಿಸುತ್ತೆ ಈ ಆಹಾರಗಳು

ಅವಲಕ್ಕಿಯನ್ನು ಯಾವ ರೀತಿಯ ಆರೋಗ್ಯ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು;

  • ಜೀರ್ಣಕ್ರಿಯೆಗೆ ಸಹಾಯ ಮಾಡಲು ಮತ್ತು ಮಲಬದ್ಧತೆಯನ್ನು ನಿವಾರಿಸಲು ಅವಲಕ್ಕಿಯನ್ನು ನೀರು ಅಥವಾ ಮಜ್ಜಿಗೆಯಲ್ಲಿ ನೆನೆಸಿಟ್ಟು ಆ ಬಳಿಕ ಉಪ್ಪು ಹಾಕಿ ಕುಡಿಯಬಹುದು.
  • ಹೊಟ್ಟೆಯ ಆಮ್ಲವನ್ನು ತಟಸ್ಥಗೊಳಿಸಲು ಅವಲಕ್ಕಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವನೆ ಮಾಡಬಹುದು.
  • ತ್ವರಿತ ಶಕ್ತಿ ಪಡೆಯಲು ಅವಲಕ್ಕಿ ಉಪ್ಮಾ ಅಥವಾ ಪೋಹಾ ಮಾಡಿ ಸೇವನೆ ಮಾಡಬಹುದು.
  • ಪದೇ ಪದೇ ಕೆಮ್ಮು ಬರುತ್ತಿದ್ದರೆ ಅವಲಕ್ಕಿ ಮತ್ತು ಸಕ್ಕರೆ ಸೇರಿಸಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದರಿಂದ ಕೆಮ್ಮು ಕಡಿಮೆಯಾಗುತ್ತದೆ.
  • ಹೊಟ್ಟೆಯಲ್ಲಿ ಉರಿ ಜಾಸ್ತಿಯಾಗಿದ್ದಾರೆ ಅವಲಕ್ಕಿಯನ್ನು ಮೊಸರಿನ ಜೊತೆಗೆ ಸೇವನೆ ಮಾಡಿ. ನಿಮಗೆ ಬೇಕಾದಲ್ಲಿ ಅದಕ್ಕೆ ಉಪ್ಪು ಅಥವಾ ಸಕ್ಕರೆ ಸೇರಿಸಿಕೊಳ್ಳಬಹುದು.

ಅವಲಕ್ಕಿ ಬಳಸುವ ಮುನ್ನ ಈ ಸಲಹೆಗಳನ್ನು ಅನುಸರಿಸಿ

  1. ಹೆಚ್ಚಿನ ಫೈಬರ್ ಮತ್ತು ಪೋಷಕಾಂಶಗಳನ್ನು ಪಡೆಯಲು ಕೆಂಪು ಅವಲಕ್ಕಿಯನ್ನು ಆರಿಸಿಕೊಳ್ಳಿ.
  2. ಫೈಟಿಕ್ ಆಮ್ಲವನ್ನು ಕಡಿಮೆ ಮಾಡಲು ಅಡುಗೆ ಮಾಡುವ ಮೊದಲು ಅವಲಕ್ಕಿಯನ್ನು ನೆನೆಸಿಡಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
Image
ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ
Image
ರೋಗ ನಿರೋಧಕ ಶಕ್ತಿ ಕಡಿಮೆ ಆಗಿರುವುದು ಹೇಗೆ ತಿಳಿಯುತ್ತದೆ?
Image
ಕೀಲು ನೋವಿದ್ದರೆ ಈ ರೀತಿಯ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಿ
Image
ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಲಗಿಸಿದರೆ ಈ ಸಮಸ್ಯೆ ಬರುವುದಿಲ್ಲ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು