AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಕ್, ಬಾಳೆಹಣ್ಣಿಗಿಂತ ದುಪ್ಪಟ್ಟು ಶಕ್ತಿ ಇರುವ ಈ ತರಕಾರಿ ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಒಳ್ಳೆಯದಲ್ಲ

ಸಕ್ಕರೆ ಕಾಯಿಲೆ ಇರುವವರಿಗೆ ಹಾಗಲಕಾಯಿ ಒಂದು ರೀತಿಯ ಔಷಧವಿದ್ದಂತೆ. ಕಹಿಯಾದರೂ ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಆದರೂ ಈ ತರಕಾರಿ ಎಲ್ಲರಿಗೂ ಇಷ್ಟವಾಗುವುದಿಲ್ಲ. ಆದರೆ ಕೆಲವರಿಗೆ ಈ ತರಕಾರಿ ಬಹಳ ಇಷ್ಟವಾಗುತ್ತದೆ. ಆರೋಗ್ಯಕರ ತರಕಾರಿ ಎಂದು ಪರಿಗಣಿಸಲಾಗಿದ್ದರೂ ಕೂಡ ಕೆಲವರು ಅಪ್ಪಿತಪ್ಪಿಯೂ ತಿನ್ನಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಯಾರಿಗೆ ಇದು ಒಳ್ಳೆಯದಲ್ಲ? ಯಾಕೆ ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ.

ಪಾಲಕ್, ಬಾಳೆಹಣ್ಣಿಗಿಂತ ದುಪ್ಪಟ್ಟು ಶಕ್ತಿ ಇರುವ ಈ ತರಕಾರಿ ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಒಳ್ಳೆಯದಲ್ಲ
Bitter Melon
ಪ್ರೀತಿ ಭಟ್​, ಗುಣವಂತೆ
|

Updated on:Jul 08, 2025 | 2:59 PM

Share

ಹಾಗಲಕಾಯಿ (Bitter Melon) ಕಹಿಯಾದರೂ ಕೂಡ ಅನೇಕ ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ (Cholesterol) ಮಟ್ಟವನ್ನು ನಿಯಂತ್ರಿಸಬಹುದು. ಅದಕ್ಕಾಗಿಯೇ ಇದನ್ನು ಆಗಾಗ ಸೇವನೆ ಮಾಡಲಾಗುತ್ತದೆ. ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಸಾಕಷ್ಟು ಕ್ಯಾಲೋರಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್‌ಗಳು, ಫೈಬರ್, ಜೊತೆಗೆ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಹೆಚ್ಚುವರಿಯಾಗಿ, ಹಾಗಲಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಒಂದು ಕಪ್‌ನಲ್ಲಿ ಈ ವಿಟಮಿನ್ ಸುಮಾರು 41.5 ಗ್ರಾಂ ಇರುತ್ತದೆ. ಇದರಲ್ಲಿ ಉತ್ತಮ ಪ್ರಮಾಣದಲ್ಲಿ ಫೋಲೇಟ್ ಇರುತ್ತದೆ. ಇದು ವಿಟಮಿನ್ ಬಿ9 ನ ನೈಸರ್ಗಿಕ ರೂಪವಾಗಿದೆ. ಜೀವಕೋಶಗಳು ಬೆಳೆಯಲು ಮತ್ತು ಅಭಿವೃದ್ಧಿ ಹೊಂದಲು ಇದು ಅವಶ್ಯಕ. ಇದಲ್ಲದೆ, ಹಾಗಲಕಾಯಿಯಲ್ಲಿ ಸೋಡಿಯಂ ಅಂಶ ಹೆಚ್ಚಾಗಿರುತ್ತದೆ. ಪಾಲಕ್ ಸೊಪ್ಪಿಗಿಂತ ಎರಡು ಪಟ್ಟು ಹೆಚ್ಚು ಕ್ಯಾಲ್ಸಿಯಂ ಮತ್ತು ಬಾಳೆಹಣ್ಣಿಗಿಂತ ಎರಡು ಪಟ್ಟು ಹೆಚ್ಚು ಪೊಟ್ಯಾಸಿಯಮ್ ಇದರಲ್ಲಿದೆ. ಹಾಗಲಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿವೆ. ಅವು ಜೀವಕೋಶಗಳನ್ನು ಉರಿಯೂತ ಮತ್ತು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತವೆ. ಆದರೆ ಇಷ್ಟೊಂದು ಪೋಷಕಾಂಶಗಳನ್ನು ಹೊಂದಿರುವ ಹಾಗಲಕಾಯಿಯನ್ನು ಕೆಲವರು ಅಪ್ಪಿತಪ್ಪಿಯೂ ತಿನ್ನಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಯಾರಿಗೆ ಇದು ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಹಾಗಲಕಾಯಿ ಸೇವನೆ ಯಾರಿಗೆ ಒಳ್ಳೆಯದಲ್ಲ?

  • ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಹಾಗಲಕಾಯಿಯಿಂದ ದೂರವಿರುವುದು ಒಳ್ಳೆಯದು.
  • ಜೀರ್ಣಕಾರಿ ಸಮಸ್ಯೆ, ವಾಂತಿ, ಭೇದಿಯಿಂದ ಬಳಲುತ್ತಿರುವವರು ಹಾಗಲಕಾಯಿಯಿಂದ ದೂರವಿರಬೇಕು. ಏಕೆಂದರೆ ಇದು ಇಂತಹ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುವ ಸಾಧ್ಯತೆ ಇದೆ. ಜೊತೆಗೆ ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಹಾಗಲಕಾಯಿಯಿಂದ ದೂರವಿರಬೇಕು.
  • ದೈಹಿಕವಾಗಿ ದುರ್ಬಲರಾಗಿರುವವರು, ದೀರ್ಘಕಾಲ ಉಪವಾಸ ಮಾಡಿದವರು ಮತ್ತು ಶಸ್ತ್ರಚಿಕಿತ್ಸೆಗಳಿಂದಾಗಿ ರಕ್ತ ಕಳೆದುಕೊಂಡವರು ಹಾಗಲಕಾಯಿ ತಿನ್ನಬಾರದು. ಏಕೆಂದರೆ ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತೀವ್ರವಾಗಿ ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ತಲೆತಿರುಗುವಿಕೆ ಮತ್ತು ಮೂರ್ಛೆ ಹೋಗುವುದು ಮುಂತಾದ ಸಮಸ್ಯೆಗಳು ಕಂಡುಬರಬಹುದು.
  • ಇನ್ಸುಲಿನ್, ಮಧುಮೇಹ ಮತ್ತು ಇತರ ಸಮಸ್ಯೆಗಳಿಗೆ ಔಷಧಿ ತೆಗೆದುಕೊಳ್ಳುವವರು ಹಾಗಲಕಾಯಿಯನ್ನು ಸೂಕ್ತ ಪ್ರಮಾಣದಲ್ಲಿ ಸೇವಿಸಬೇಕು. ಇಲ್ಲದಿದ್ದರೆ, ರಕ್ತದಲ್ಲಿನ ಸಕ್ಕರೆ ಮಟ್ಟಗಳು ಗಮನಾರ್ಹವಾಗಿ ಕಡಿಮೆಯಾಗಬಹುದು.
  • ಕೆಲವು ರೀತಿಯ ಔಷಧಿಗಳನ್ನು ಬಳಸುವವರಿಗೆ, ಹಾಗಲಕಾಯಿ ಸೇವಿಸುವುದರಿಂದ ಇದು ಚಯಾಪಚಯ ಪ್ರಕ್ರಿಯೆಗಳನ್ನು ತಡೆಯಬಹುದು. ಹಾಗಾಗಿ ಯಾವುದೇ ಸಮಸ್ಯೆಗಳಿಗೆ ಔಷಧಿಗಳನ್ನು ಬಳಸುವಾಗ ವೈದ್ಯರ ಮಾರ್ಗದರ್ಶನ ಪಡೆದ ನಂತರವೇ ಹಾಗಲಕಾಯಿಯನ್ನು ತಿನ್ನುವುದು ಸೂಕ್ತ.
  • ಮೂತ್ರಪಿಂಡ ಮತ್ತು ಯಕೃತ್ತಿನ ಸಮಸ್ಯೆಗಳಿಂದ ಬಳಲುತ್ತಿರುವವರು ಹೆಚ್ಚಾಗಿ ಹಾಗಲಕಾಯಿಯ ಸೇವನೆ ಮಾಡಬಾರದು. ಈ ತರಕಾರಿ ಒಳ್ಳೆಯದಾಗಿದ್ದರೂ, ಕೆಲವು ಸಮಸ್ಯೆಗಳಿಂದಾಗಿ ನಮ್ಮ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ, ಹಾಗಲಕಾಯಿಯಿಂದ ದೂರವಿದ್ದಷ್ಟೂ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Mon, 7 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ