AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವವರಲ್ಲಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಬರುವುದನ್ನು ತಡೆಯಲು ಈ ರೀತಿ ಮಾಡಬೇಕು!

ನೀವು ಕೂಡ ಆಫೀಸ್ನಲ್ಲಿ ಕುಳಿತು ಗಂಟೆಗಟ್ಟಲೆ ಡೆಸ್ಕ್ ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ಜಾಗರೂಕರಾಗಿರಿ. ಸರಿಯಾದ ರೀತಿಯಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಹೃದಯಾಘಾತದಂತಹ ಅಪಾಯಗಳು ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸೈಲೆಂಟ್ ಹಾರ್ಟ್ ಅಟ್ಯಾಕ್ ಎಷ್ಟು ಸದ್ದಿಲ್ಲದೆ ಬರುತ್ತದೆಯೋ ಅಷ್ಟು ಅಪಾಯಕಾರಿಯಾಗಿರುತ್ತದೆ. ಹಾಗಾಗಿ ಸಣ್ಣ ಆರೋಗ್ಯಕರ ಅಭ್ಯಾಸಗಳಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಿ. ಹಾಗಾದರೆ ಹೃದಯಾಘಾತವನ್ನು ತಡೆಯುವುದು ಹೇಗೆ? ಯಾರಿಗೆ ಹೆಚ್ಚು ಅಪಾಯಕಾರಿ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವವರಲ್ಲಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಬರುವುದನ್ನು ತಡೆಯಲು ಈ ರೀತಿ ಮಾಡಬೇಕು!
Prolonged Sitting And Silent Heart Attacks
ಪ್ರೀತಿ ಭಟ್​, ಗುಣವಂತೆ
|

Updated on: Sep 04, 2025 | 3:33 PM

Share

ನೀವು ಕೂಡ ಆಫೀಸ್ ನಲ್ಲಿ ಕುಳಿತು ಗಂಟೆಗಟ್ಟಲೆ ಕೆಲಸ ಮಾಡುತ್ತೀರಾ? ಮನೆಗೆ ಬಂದರೂ ಕೆಲಸ ಮುಗಿಯೋದಿಲ್ವಾ? ಇದು ಒಬ್ಬರಿಬ್ಬರ ಸಮಸ್ಯೆಯಲ್ಲ. ಇತ್ತೀಚಿಗೆ, ಸಮಯದ ಪರಿವಿಲ್ಲದೆ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರ ಪರಿಣಾಮ ಅವರ ಪೂರ್ತಿ ಜೀವನಶೈಲಿ (Lifestyle) ಬದಲಾಗಿರುತ್ತದೆ. ಆದರೆ ಈ ರೀತಿಯ ಅಭ್ಯಾಸವು ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಜೊತೆಗೆ, ದೀರ್ಘಕಾಲ ಕುಳಿತುಕೊಂಡಿರುವುದರಿಂದ ಹೃದಯದ ಆರೋಗ್ಯ (Heart health) ಹಾಳಾಗುತ್ತದೆ. ಇದರ ಪರಿಣಾಮ ಸೈಲೆಂಟ್ ಆಗಿ ಸಂಭವಿಸುವ ಹೃದಯಾಘಾತದ (Silent Heart Attack) ಅಪಾಯ ಹೆಚ್ಚಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಿರಂತರವಾಗಿ ಕುಳಿತುಕೊಳ್ಳುವುದನ್ನು ಧೂಮಪಾನ ಮಾಡಿದಷ್ಟೇ ಹಾನಿ ಮಾಡುತ್ತದೆ ಎಂಬುದನ್ನು ಮರೆಯಬಾರದು. ಹಾಗಾದರೆ ದೀರ್ಘಕಾಲ ಕುಳಿತುಕೊಂಡಿರುವ ಅಭ್ಯಾಸ ಹೃದಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಯಾಕೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ತುಂಬಾ ಸಮಯದ ವರೆಗೆ ಚಲನೆ ಇಲ್ಲದೆಯೇ, ಕುಳಿತಲ್ಲಿಯೇ ಕುಳಿತುಕೊಳ್ಳುವುದರಿಂದ ರಕ್ತ ಪರಿಚಲನೆ ನಿಧಾನವಾಗುತ್ತದೆ, ಇದರ ಪರಿಣಾಮವಾಗಿ, ರಕ್ತ ಮತ್ತು ಆಮ್ಲಜನಕ ಹೃದಯವನ್ನು ಸರಿಯಾಗಿ ತಲುಪುವುದಿಲ್ಲ. ಈ ಸ್ಥಿತಿಯು ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಈ ರೀತಿ ನಿರಂತರವಾಗಿ ಕುಳಿತುಕೊಳ್ಳುವುದರಿಂದ ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಬೆನ್ನು ನೋವು ಮುಂತಾದ ಸಮಸ್ಯೆಗಳಿಗೂ ಕಾರಣವಾಗಬಹುದು. ಕುಳಿತುಕೊಳ್ಳುವುದರಿಂದ ಹೃದಯಾಘಾತವಾಗದಿದ್ದರೂ ಆ ಅಪಾಯವನ್ನು ಹೆಚ್ಚಿಸುತ್ತದೆ, ಅದರಲ್ಲಿಯೂ ಈಗಾಗಲೇ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ಈ ರೀತಿಯ ಅಪಾಯ ಕಂಡುಬರುವುದು ಹೆಚ್ಚಾಗಿರುತ್ತದೆ.

ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದರೇನು?

ಸಾಮಾನ್ಯವಾಗಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಅನ್ನು ಮೌನ ಹೃದಯಾಘಾತ ಎಂದು ಕರೆಯಲಾಗುತ್ತದೆ. ಇದರಲ್ಲಿ ಎದೆ ನೋವು, ಬೆವರುವುದು ಮತ್ತು ಉಸಿರಾಟದ ತೊಂದರೆಯಂತಹ ಸ್ಪಷ್ಟ ಲಕ್ಷಣಗಳು ಕಂಡುಬರುವುದಿಲ್ಲ. ಬದಲಾಗಿ ಈ ರೀತಿಯ ಲಕ್ಷಣಗಳು ಬಹಳ ಸೌಮ್ಯವಾಗಿರಬಹುದು ಅಥವಾ ಕಾಣಿಸಿಕೊಳ್ಳದೆಯೇ ಇರಬಹುದು. ಹೃದಯಕ್ಕೆ ರಕ್ತದ ಹರಿವು ನಿಂತಿದ್ದರೂ ಸಹ, ದೇಹವು ಗಮನಾರ್ಹ ಎಚ್ಚರಿಕೆಗಳನ್ನು ನೀಡುವುದಿಲ್ಲ. ಅನೇಕ ಜನರು ಇದನ್ನು ಆಯಾಸ ಅಥವಾ ಒತ್ತಡ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ.

ಹೆಚ್ಚು ಅಪಾಯಕಾರಿ ಏಕೆ?

ಸೈಲೆಂಟ್ ಹಾರ್ಟ್ ಅಟ್ಯಾಕ್ ದೊಡ್ಡ ಸಮಸ್ಯೆ ಎಂದರೆ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಇದರಿಂದ ರೋಗಿಗೆ ಸಕಾಲಿಕ ವೈದ್ಯಕೀಯ ನೆರವು ಸಿಗುವುದಿಲ್ಲ. ಹೃದಯವು ತೀವ್ರವಾಗಿ ಹಾನಿಗೊಳಗಾದ ನಂತರವೇ ಇದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಹಾಗಾಗಿ ಇದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಪ್ರತಿದಿನ ಈ 6 ಆಹಾರ ಸೇವನೆ ಮಾಡಿ, ಹೃದಯಕ್ಕೆ ರಕ್ಷಣೆಯಾಗಿ ನಿಲ್ಲುತ್ತದೆ

ಹೆಚ್ಚಿನ ಅಪಾಯದಲ್ಲಿರುವವರು ಯಾರು?

  • ಗಂಟೆಗಟ್ಟಲೆ ಕುಳಿತು ಡೆಸ್ಕ್ ಕೆಲಸ ಮಾಡುವ ಉದ್ಯೋಗಿಗಳು
  • ಬೊಜ್ಜು ಹೊಂದಿರುವವರು ಅಥವಾ ಹೊಟ್ಟೆಯ ಸುತ್ತ ಕೊಬ್ಬು ಹೊಂದಿರುವವರು
  • ಅಧಿಕ ರಕ್ತದೊತ್ತಡ ಅಥವಾ ಮಧುಮೇಹ ಹೊಂದಿರುವ ರೋಗಿಗಳು
  • ಹೆಚ್ಚು ಧೂಮಪಾನ ಮಾಡುವವರು ಅಥವಾ ಮದ್ಯಪಾನ ಮಾಡುವ ವ್ಯಕ್ತಿಗಳು
  • ತೀವ್ರ ಒತ್ತಡ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿರುವವರು.

ತಡೆಗಟ್ಟುವುದು ಹೇಗೆ?

ಈ ಅಪಾಯವನ್ನು ಕಡಿಮೆ ಮಾಡಲು, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದು ಅವಶ್ಯಕ. ಪ್ರತಿದಿನ ಲಘು ವ್ಯಾಯಾಮ ಮತ್ತು ವಾಕಿಂಗ್ ಮಾಡುವುದನ್ನು ಮರೆಯಬೇಡಿ. ಜೊತೆಗೆ ಪ್ರತಿನಿತ್ಯ ಸಮತೋಲಿತ ಆಹಾರವನ್ನು ಸೇವನೆ ಮಾಡಿ. ಪ್ರತಿ 30 ರಿಂದ 40 ನಿಮಿಷಗಳಿಗೊಮ್ಮೆ ಎದ್ದು ಸ್ವಲ್ಪ ನಡೆದಾಡುವುದು ಒಳ್ಳೆಯದು. ಸಾಧ್ಯವಾದಷ್ಟು ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ. ಕನಿಷ್ಠ 7- 8 ಗಂಟೆಗಳ ಕಾಲ ನಿದ್ರೆ ಮಾಡಿ. ನಿಯಮಿತ ತಪಾಸಣೆ ಮಾಡಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!