
ಬೊಜ್ಜನ್ನು ಕಡಿಮೆ ಮಾಡಿಕೊಂಡು ಫಿಟ್ ಆಗಿರಲು ನಾವು ವಿವಿಧ ವಿಧಾನಗಳನ್ನು ಪ್ರಯತ್ನಿಸುತ್ತೇವೆ. ಜಿಮ್‌ಗೆ ಹೋಗುತ್ತೇವೆ. ಕಟ್ಟುನಿಟ್ಟಾದ ಆಹಾರ ಕ್ರಮಗಳನ್ನು ಅನುಸರಿಸುತ್ತೇವೆ. ಆದರೆ ಇದರ ಹೊರತಾಗಿ ತೂಕ ಇಳಿಸಿಕೊಂಡು ಆರೋಗ್ಯವಾಗಿರಲು ಕೆಲವು ಸರಳ ನೈಸರ್ಗಿಕ ಮಾರ್ಗಗಳಿವೆ. ಅಡುಗೆ ಮನೆಯಲ್ಲಿ ಕಂಡು ಬರುವ ಈ ಸಣ್ಣ ಬೀಜಗಳು ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕಡಿಮೆ ಮಾಡಲು, ಕೊಲೆಸ್ಟ್ರಾಲ್ (Cholesterol) ನಿಯಂತ್ರಿಸಲು ಸಹಾಯ ಮಾಡುತ್ತದೆ. ಅದು ಬೇರಾವುದು ಅಲ್ಲ ನಾವು ಪ್ರತಿನಿತ್ಯ ಬಳಸುವ ಜೀರಿಗೆ (Cumin Seeds). ಇದು ನೀವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ತೂಕ ಕಡಿಮೆ ಮಾಡುವುದರ ಜೊತೆಗೆ ಜೀರಿಗೆಯನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಮತ್ತಷ್ಟು ಪ್ರಯೋಜನಗಳು ಸಿಗುತ್ತದೆ. ಹಾಗಾದ್ರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ.
ರಾತ್ರಿ ಮಲಗುವ ಮುನ್ನ, ಒಂದು ಲೋಟ ನೀರಿಗೆ ಎರಡು ಚಮಚ ಜೀರಿಗೆಯನ್ನು ಸೇರಿಸಿ ಬೆಳಿಗ್ಗೆ ಎದ್ದ ನಂತರ, ಈ ಜೀರಿಗೆ ನೀರನ್ನು ಕುದಿಸದೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಉಳಿದ ಜೀರಿಗೆಯನ್ನು ಅಗೆದು ನುಂಗಬೇಕು. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಸೊಂಟದ ಸುತ್ತಲೂ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡುವಲ್ಲಿ ಬಹಳ ಪರಿಣಾಮಕಾರಿಯಾಗಿದೆ. ಇದು ಹಸಿವನ್ನು ಕಡಿಮೆ ಮಾಡುತ್ತದೆ ಮತ್ತು ನಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಈ ರೀತಿಯಾಗಿ, ಜೀರಿಗೆ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹೆಚ್ಚಿನ ಕೊಲೆಸ್ಟ್ರಾಲ್ ಸಮಸ್ಯೆ ಇರುವವರಿಗೆ ಜೀರಿಗೆ ತುಂಬಾ ಪ್ರಯೋಜನಕಾರಿ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ನಿಮಗೆ ಅನಿಲ, ಉಬ್ಬುವುದು, ಆಮ್ಲೀಯತೆ ಅಥವಾ ಮಲಬದ್ಧತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ, ಜೀರಿಗೆ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಮಾತ್ರವಲ್ಲ ಜೀರಿಗೆ ನೀರು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಕಬ್ಬಿಣದ ಕೊರತೆ, ರಕ್ತಹೀನತೆ ಇರುವವರು ಖಂಡಿತವಾಗಿಯೂ ಆಹಾರದಲ್ಲಿ ಜೀರಿಗೆಯನ್ನು ಸೇರಿಸಿಕೊಳ್ಳಬೇಕು. ಉಪವಾಸದ ಸಮಯದಲ್ಲಿ ಇದನ್ನು ಸೇವಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳು ಸಿಗುತ್ತವೆ.
ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಓಕ್ರಾ ವಾಟರ್ ಕುಡಿಯುವ ಅಭ್ಯಾಸ ಇದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳಿ
ಮೊಡವೆಗಳಿಂದ ಬಳಲುತ್ತಿರುವವರಿಗೂ ಜೀರಿಗೆ ನೀರು ತುಂಬಾ ಪ್ರಯೋಜನಕಾರಿ. ಇದರಲ್ಲಿ ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿವೆ. ಇದು ಮುಖದ ಮೇಲಿನ ಮೊಡವೆಗಳು ಮತ್ತು ಕಲೆಗಳನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದು ಬಹಳ ಒಳ್ಳೆಯದು. ಇದನ್ನು ತಜ್ಞರು ಕೂಡ ಹೇಳುತ್ತಾರೆ. ಅಷ್ಟೇ ಅಲ್ಲ.. ಜೀರಿಗೆ ನೀರು ಗರ್ಭಿಣಿಯರಿಗೂ ತುಂಬಾ ಪ್ರಯೋಜನಕಾರಿ. ಇದು ಗರ್ಭಿಣಿಯರಲ್ಲಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಕಾರ್ಬೋಹೈಡ್ರೇಟ್‌ಗಳನ್ನು ಜೀರ್ಣಿಸಿಕೊಳ್ಳಲು ಅಗತ್ಯವಾದ ಕಿಣ್ವಗಳನ್ನು ಉತ್ಪಾದಿಸುತ್ತದೆ. ಅಷ್ಟೇ ಅಲ್ಲ.. ಹಾಲುಣಿಸುವ ತಾಯಂದಿರು ಪ್ರತಿದಿನ ಜೀರಿಗೆ ನೀರನ್ನು ಕುಡಿಯುವುದು ಒಳ್ಳೆಯದು. ಏಕೆಂದರೆ ಇದು ಹಾಲು ಉತ್ಪಾದನೆಗೆ ಸಹಾಯ ಮಾಡುತ್ತದೆ. ಜೊತೆಗೆ ತಾಯಿ ಮತ್ತು ಮಗು ಇಬ್ಬರನ್ನೂ ಆರೋಗ್ಯವಾಗಿಡುತ್ತದೆ. ಜೀರಿಗೆ ನೀರನ್ನು ಕುಡಿಯುವುದರಿಂದ ಉಸಿರಾಟ ಸಂಬಂಧಿತ ಸಮಸ್ಯೆಗಳು ಬರುವುದಿಲ್ಲ. ಈ ನೀರಿನಲ್ಲಿರುವ ರಕ್ತ ಹೆಪ್ಪುಗಟ್ಟುವಿಕೆ ನಿರೋಧಕ ಗುಣಗಳು ಎದೆಯಲ್ಲಿ ಸಂಗ್ರಹವಾಗುವ ಲೋಳೆಯನ್ನು ಕರಗಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ