ಒಂದು ತಿಂಗಳು ಬೆಳಿಗ್ಗೆ ಎದ್ದ ತಕ್ಷಣ ಇದರ ನೀರನ್ನು ತಪ್ಪದೆ ಕುಡಿಯಿರಿ, ದೇಹ ನೀವು ಹೇಳಿದಂತೆ ಕೇಳುತ್ತೆ

ಜೀರಿಗೆ ನೀರಿನಲ್ಲಿ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಹಾಗಾಗಿಯೇ ಇದನ್ನು ಆಯುರ್ವೇದದಲ್ಲಿ ದೈವಿಕ ಔಷಧವೆಂದು ಪರಿಗಣಿಸಲಾಗಿದೆ. ಹಾಗಾಗಿ ಈ ನೀರಿನಲ್ಲಿರುವ ಔಷಧೀಯ ಗುಣಗಳನ್ನು ಪಡೆದುಕೊಳ್ಳಲು ಇದನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಬೇಕು. ಮಾತ್ರವಲ್ಲ, ಪ್ರತಿದಿನ ಬೆಳಿಗ್ಗೆ ಒಂದು ತಿಂಗಳ ಕಾಲ ತಪ್ಪದೆಯೇ ಜೀರಿಗೆ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳು ದೊರೆಯುತ್ತವೆ. ಹಾಗಾದರೆ ಇದರಿಂದ ಯಾವ ರೀತಿಯ ಲಾಭಗಳಿವೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಒಂದು ತಿಂಗಳು ಬೆಳಿಗ್ಗೆ ಎದ್ದ ತಕ್ಷಣ ಇದರ ನೀರನ್ನು ತಪ್ಪದೆ ಕುಡಿಯಿರಿ, ದೇಹ ನೀವು ಹೇಳಿದಂತೆ ಕೇಳುತ್ತೆ
Jeera Water
Updated By: ಅಕ್ಷಯ್​ ಪಲ್ಲಮಜಲು​​

Updated on: Aug 01, 2025 | 7:00 AM

ಜೀರಿಗೆ (Jeera) ನೀರಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಆಯುರ್ವೇದದಲ್ಲಿ ಇದನ್ನು ದೈವಿಕ ಔಷಧವೆಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಇದನ್ನು ಪ್ರತಿನಿತ್ಯ ಸೇವನೆ ಮಾಡುವುದು ಒಳ್ಳೆಯದು. ಮಾತ್ರವಲ್ಲ ಈ ನೀರಿನಲ್ಲಿರುವ ಔಷಧೀಯ ಗುಣಗಳು ನಮ್ಮ ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡುವುದಕ್ಕೆ ಸಹಕಾರಿಯಾಗಿದೆ. ಹಾಗಾಗಿ ಪ್ರತಿದಿನ ಬೆಳಿಗ್ಗೆ ಒಂದು ತಿಂಗಳ ಕಾಲ ತಪ್ಪದೆಯೇ ಜೀರಿಗೆ ನೀರು (cumin water) ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳು ದೊರೆಯುತ್ತವೆ ಇದನ್ನು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ನೀವು ಈ ಅಭ್ಯಾಸವನ್ನು (Mourning Routine) ಕಟ್ಟುನಿಟ್ಟಾಗಿ ಪಾಲಿಸಿದರೆ ವ್ಯತ್ಯಾಸ ನೀವೇ ನೋಡಬಹುದು. ಪ್ರತಿನಿತ್ಯ ಬೆಳಿಗ್ಗೆ ಜೀರಿಗೆ ನೀರು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಲಾಭಗಳಿವೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಜೀರಿಗೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಾತ್ರವಲ್ಲ ಇದು ಗ್ಯಾಸ್, ಉಬ್ಬರ ಮತ್ತು ಕರುಳಿನ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
  • ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಿಸುವುದಕ್ಕೆ ಜೀರಿಗೆ ನೀರು ಅಮೃತವಾಗಿ ಕೆಲಸ ಮಾಡುತ್ತದೆ. ಜೊತೆಗೆ ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಹೆಚ್ಚುತ್ತಿರುವ ತೂಕ ಕಡಿಮೆ ಮಾಡಲು ಕೂಡ ಜೀರಿಗೆ ನೀರು ತುಂಬಾ ಪ್ರಯೋಜನಕಾರಿಯಾಗಿದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಒಂದು ತಿಂಗಳು ತಪ್ಪದೆ ಸೇವನೆ ಮಾಡಬೇಕು.
  • ಜೀರಿಗೆ ನೀರು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಆಗಾಗ ಕುಡಿಯುವುದರಿಂದ ಹಸಿವನ್ನು ನಿಯಂತ್ರಿಸುತ್ತದೆ.
  • ಜೀರಿಗೆ ನೀರನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ.
  • ಜೀರಿಗೆ ನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಜೊತೆಗೆ ಒತ್ತಡ ಕಡಿಮೆ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ.
  • ಜೀರಿಗೆ ನೀರಿನಲ್ಲಿ ಹೇರಳವಾದ ಉತ್ಕರ್ಷಣ ನಿರೋಧಕಗಳಳಿದ್ದು ಚರ್ಮವನ್ನು ಸ್ವತಂತ್ರ ರಾಡಿಕಲ್ ಕೋಶಗಳಿಂದ ರಕ್ಷಿಸಿ ಚರ್ಮದ ಹೊಳಪನ್ನು ಹೆಚ್ಚಿಸುತ್ತವೆ. ಅವು ಮೊಡವೆ ಮತ್ತು ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತವೆ.
  • ಜೀರಿಗೆ ನೀರು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಿ, ಅವು ಸೊಂಪಾಗಿ ಬೆಳೆಯುವುದಕ್ಕೆ ಸಹಾಯ ಮಾಡುತ್ತದೆ.
  • ಜೀರಿಗೆ ನೀರು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕುತ್ತದೆ. ಉರಿಯೂತ ಅಥವಾ ಕಡಿಮೆ ರಕ್ತದೊತ್ತಡ ಇರುವವರು ಜೀರಿಗೆ ನೀರನ್ನು ಕುಡಿಯಬೇಕೆಂದು ತಜ್ಞರು ಹೇಳುತ್ತಾರೆ.
  • ಜೀರಿಗೆ ನೀರು ಮುಟ್ಟಿನ ಸಮಯದಲ್ಲಿ ನೋವು ಮತ್ತು ಅಸ್ವಸ್ಥತೆಯನ್ನು ಕಡಿಮೆ ಮಾಡುತ್ತದೆ. ನಿಯಮಿತವಾಗಿ ಒಂದು ತಿಂಗಳು ಜೀರಿಗೆ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಮ್ಯಾಜಿಕ್ ತರನಾದ ಪ್ರಯೋಜನಗಳು ಕಂಡುಬರುತ್ತವೆ.

ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ, ಎಷ್ಟು ದಪ್ಪವಿದ್ದರೂ ತೆಳ್ಳ ಆಗಬಹುದು

ಹೇಗೆ ತಯಾರಿಸುವುದು?

ಮೊದಲು, 1- 2 ಚಮಚ ಜೀರಿಗೆಯನ್ನು ರಾತ್ರಿಯಿಡೀ 1 ಗ್ಲಾಸ್ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ, ಆ ನೀರನ್ನು ಕುದಿಸಿ, ತಣ್ಣಗಾಗಲು ಬಿಡಿ, ನಂತರ ಅದನ್ನು ಸೋಸಿ ಕುಡಿಯಿರಿ. ನಿಮಗೆ ಬೇಕಾದಲ್ಲಿ ರುಚಿಗೆ ಸ್ವಲ್ಪ ಜೇನುತುಪ್ಪವನ್ನು ಸೇರಿಸಬಹುದು. ಪ್ರತಿದಿನ ಬೆಳಿಗ್ಗೆ ಒಂದು ತಿಂಗಳ ಕಾಲ ಜೀರಿಗೆ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳು ದೊರೆಯುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಕೂಡ ಟ್ರೈ ಮಾಡಿ ನೋಡಿ.

ಇದನ್ನೂ ಓದಿ
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ
ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡಿದ್ರೆ ರೋಗಗಳಿಂದ ದೂರವಿರಬಹುದು
ಪ್ರತಿನಿತ್ಯ ಬೆಳಿಗ್ಗೆ ಒಂದು ಕಪ್ ಈ ಶಂಖಪುಷ್ಪ ಟೀ ಕುಡಿಯಿರಿ
ಪ್ರತಿದಿನ ಬೆಳಗ್ಗೆ 5 ಗಂಟೆಗೆ ಏಳುವುದರಿಂದ ಏನಾಗುತ್ತೆ ಗೊತ್ತಾ?

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 am, Fri, 1 August 25