ಮಳೆಗಾಲದಲ್ಲಿ ಕಂಡು ಬರುವ ಸೋಂಕಿನಿಂದ ಮುಕ್ತಿ ಪಡೆಯಬೇಕಾದರೆ ಹಾಲಿಗೆ ಈ ಪುಡಿ ಹಾಕಿ ಕುಡಿಯಿರಿ
ಅರಿಶಿನ ಹಾಲಿನ ಆರೋಗ್ಯ ಪ್ರಯೋಜನ: ಮಾನ್ಸೂನ್ ಆರಂಭವಾಗುತ್ತಿದ್ದಂತೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ಈ ಋತುವಿನಲ್ಲಿ ರೋಗನಿರೋಧಕ ಶಕ್ತಿಯೂ ತುಂಬಾ ಕಡಿಮೆ ಇರುತ್ತದೆ. ಅದಕ್ಕಾಗಿಯೇ ವೈದ್ಯರು ಈ ಸಮಯದಲ್ಲಿ ಉತ್ತಮ ಆಹಾರವನ್ನು ಸೇವಿಸುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ಬಹಳ ಜಾಗರೂಕರಾಗಿರಬೇಕು ಎಂದು ಹೇಳುತ್ತಾರೆ. ಮಳೆಗಾಲದ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಅರಿಶಿನ ಮಿಶ್ರಿತ ಹಾಲು ಕುಡಿಯಬಹುದು. ಇದು ನಾವು ಊಹಿಸಲು ಸಾಧ್ಯವಾಗಿರದಂತಹ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಮಳೆಗಾಲ (Monsoon Season) ಎಂದರೆ ಕೆಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಈ ಮಧ್ಯೆ, ಮಾನ್ಸೂನ್ ಆರಂಭವಾಗುತ್ತಿದ್ದಂತೆ ಬರುವ ಸಾಲು ಸಾಲು ಆರೋಗ್ಯ (Health) ಸಮಸ್ಯೆಗಳನ್ನು ನಿಯಂತ್ರಿಸುವುದೇ ದೊಡ್ಡ ಸಮಸ್ಯೆಯಾಗಿರುತ್ತದೆ. ಈ ಸಮಯದಲ್ಲಿ ನಮ್ಮ ದೇಹವನ್ನು ಸೋಂಕುಗಳಿಂದ ರಕ್ಷಿಸಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತದೆ. ಅದರಲ್ಲಿಯೂ ಈ ಋತುವಿನಲ್ಲಿ ನಮ್ಮ ದೇಹದ ರೋಗನಿರೋಧಕ ಶಕ್ತಿಯೂ (Immunity) ತುಂಬಾ ಕಡಿಮೆ ಇರುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಈ ಸಮಯದಲ್ಲಿ ಉತ್ತಮ ಆಹಾರವನ್ನು ಸೇವಿಸಬೇಕು ಎಂದು ಹೇಳುತ್ತಾರೆ. ಹಾಗಾದರೆ ಈ ಸಮಯದಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು? ಯಾವ ರೀತಿ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು? ಇಂತಹ ಸವಾಲಿಗೆ ತಲೆ ಕೆಡಿಸಿಕೊಳ್ಳಬೇಡಿ ಬದಲಾಗಿ ಅರಿಶಿನ ಮಿಶ್ರಿತ ಹಾಲು (Turmeric Milk) ಕುಡಿಯಿರಿ. ಇದು ನಾವು ಊಹಿಸಲು ಸಾಧ್ಯವಾಗಿರದಂತಹ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಈ ಲೇಖನದಲ್ಲಿದೆ.
ಅರಿಶಿನ ಹಾಲಿನಿಂದ ಸಿಗುತ್ತೆ ಸಾಕಷ್ಟು ಪ್ರಯೋಜನ:
ಕೆಲವರಿಗೆ ಹಾಲಿಗೆ ಅರಿಶಿನ ಬೆರೆಸಿ ಕುಡಿಯುವ ಅಭ್ಯಾಸವಿರುತ್ತದೆ. ಇದನ್ನು ಕುಡಿಯಲು ಕೆಲವರಿಗೆ ಇಷ್ಟವಾಗದಿದ್ದರೂ ಕೂಡ, ಇದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಹಾಗಾಗಿ ಈ ರೀತಿಯ ಸಮಯದಲ್ಲಿ ಅಂದರೆ ಮಳೆಗಾಲದಲ್ಲಿ ಅರಿಶಿನ ಮಿಶ್ರಿತ ಹಾಲನ್ನು ಕುಡಿಯುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅರಿಶಿನದಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿದ್ದು ವೈರಲ್ ಸೋಂಕುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಹಾಗಾಗಿ ಮಳೆಯಲ್ಲಿ ನೆನೆಯುವುದರಿಂದ ಬರುವ ವೈರಲ್ ಜ್ವರ, ಶೀತ ಮತ್ತು ಕೆಮ್ಮಿನಿಂದ ಮುಕ್ತಿ ಪಡೆಯಬಹುದು.
ಇದನ್ನೂ ಓದಿ: ಅತಿಸಾರ, ಮಲಬದ್ಧತೆಯಂತಹ ಸಮಸ್ಯೆಗೆ ಈ ಎಲೆಯ ರಸವೇ ಔಷಧ!
ಇದಲ್ಲದೆ, ನಿದ್ರಾಹೀನತೆಯಿಂದ ಬಳಲುತ್ತಿರುವವರು ಮಲಗುವ ಮುನ್ನ ಒಂದು ಲೋಟ ಹಾಲು ಅರಿಶಿನದೊಂದಿಗೆ ಬೆರೆಸಿ ಕುಡಿಯುವುದರಿಂದ ಬೇಗನೆ ನಿದ್ರೆ ಮಾಡಬಹುದು. ಅಲ್ಲದೆ ಇದು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಮಲಬದ್ಧತೆ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಜೀರ್ಣಕ್ರಿಯೆ ಸರಾಗವಾಗಿ ನಡೆಯಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಹೊಟ್ಟೆ ನೋವಿನಂತಹ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಇದು ಚರ್ಮ ರೋಗಗಳ ವಿರುದ್ಧವೂ ರಕ್ಷಣೆ ನೀಡುತ್ತದೆ. ಇನ್ನು ಅರಿಶಿನದೊಂದಿಗೆ ಬೆರೆಸಿದ ಹಾಲನ್ನು ಸೇವಿಸುವುದು ಶ್ವಾಸಕೋಶದ ಆರೋಗ್ಯಕ್ಕೂ ಕೂಡ ಒಳ್ಳೆಯದು. ಅಲ್ಲದೆ ಇದು ತಲೆನೋವು, ದೇಹದ ನೋವು ಮತ್ತು ಮೂಗಿನ ದಟ್ಟಣೆಯಂತಹ ಸಮಸ್ಯೆಗಳಿಗೂ ಪರಿಹಾರ ನೀಡುತ್ತದೆ. ಹಾಗಾಗಿ ಅರಿಶಿನದೊಂದಿಗೆ ಹಾಲನ್ನು ಸೇವನೆ ಮಾಡಬಹುದು. ಅದೇ ರೀತಿ, ಈ ಅರಿಶಿನದ ಹಾಲು ಮಹಿಳೆಯರು ಅನುಭವಿಸುವ ಮುಟ್ಟಿನ ನೋವಿಗೆ ಪರಿಹಾರ ನೀಡುತ್ತದೆ. ಹೆಚ್ಚುವರಿಯಾಗಿ, ಇದು ಅತಿಯಾದ ರಕ್ತಸ್ರಾವದ ಸಮಸ್ಯೆಯನ್ನು ನಿವಾರಿಸಲು ಕೂಡ ಸಹಾಯ ಮಾಡುತ್ತದೆ. ಇದಲ್ಲದೆ, ಇದು ದೇಹದಿಂದ ಕೆಟ್ಟ ಬ್ಯಾಕ್ಟೀರಿಯಾವನ್ನು ಸಹ ಹೊರಹಾಕುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ