AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ನಿದ್ರೆಯಿಂದ ಆಗಾಗ ಎಚ್ಚರವಾಗುತ್ತಾ? ಇದು ಈ ಆರೋಗ್ಯ ಸಮಸ್ಯೆಯ ಮುನ್ಸೂಚನೆ

ರಾತ್ರಿ ನಿದ್ರೆ ಮಾಡುವಾಗ ಇದ್ದಕ್ಕಿದ್ದಂತೆ ಎಚ್ಚರಗೊಳ್ಳುವುದು ಸಾಮಾನ್ಯ. ಆದರೆ ಇದು ಆಗಾಗ ಕಂಡುಬರುತ್ತಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ಇದು ಕೆಲವು ಆರೋಗ್ಯ ಸಮಸ್ಯೆಗಳ ಮುನ್ಸೂಚನೆಯಾಗಿರಬಹುದು. ಈ ರೀತಿ ನಿಮ್ಮ ದೇಹವು ನೀಡುತ್ತಿರುವ ಎಚ್ಚರಿಕೆಗಳಿಗೆ ಗಮನ ಕೊಡುವುದು ಮತ್ತು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅದರ ಜೊತೆಗೆ ಈ ಸಮಸ್ಯೆಗಳ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅದಕ್ಕೆ ಸರಿಯಾದ ಪರಿಹಾರಗಳನ್ನು ಅನುಸರಿಸುವುದು ಕೂಡ ಅತ್ಯಗತ್ಯ.

ರಾತ್ರಿ ನಿದ್ರೆಯಿಂದ ಆಗಾಗ ಎಚ್ಚರವಾಗುತ್ತಾ? ಇದು ಈ ಆರೋಗ್ಯ ಸಮಸ್ಯೆಯ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
|

Updated on: Jun 13, 2025 | 5:32 PM

Share

ರಾತ್ರಿ ನಿದ್ರೆ (sleep) ಚೆನ್ನಾಗಿ ಬಂದರೆ ಮನುಷ್ಯ ಆರೋಗ್ಯವಾಗಿರುತ್ತಾನೆ. ಆದರೆ ಕೆಲವು ಬಾರಿ ರಾತ್ರಿ ನಿದ್ರೆಯಲ್ಲಿದ್ದಾಗ ಎಚ್ಚರವಾಗಿ ಮತ್ತೆ ನಿದ್ರೆ ಬರುತ್ತದೆ. ಇದು ತುಂಬಾ ಸಾಮಾನ್ಯ. ಆದರೆ ಈ ರೀತಿ ಪದೇ ಪದೇ ಎಚ್ಚರವಾಗಿ ನಿದ್ರೆ ಮಾಡುವವರಿದ್ದಾರೆ ಕೆಲವರಿಗೆ ಒಮ್ಮೆ ಎಚ್ಚರವಾದ ಮೇಲೆ ಸರಿಯಾಗಿ ನಿದ್ರೆ ಬರುವುದಿಲ್ಲ. ಈ ರೀತಿ ಗಾಢ ನಿದ್ದೆಯಲ್ಲಿದ್ದಾಗ ಎಚ್ಚರ ಆಗುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ. ಏಕೆಂದರೆ ಇದು ನೀವು ತಿಳಿದುಕೊಂಡಂತೆ ಸಾಮಾನ್ಯ ಸಮಸ್ಯೆಯಲ್ಲ. ಇದು ನಮ್ಮ ದೇಹ ತೊಂದರೆಯಲ್ಲಿದೆ ಎಂಬುದರ ಸೂಚನೆಯಾಗಿದೆ. ತಜ್ಞರು ಹೇಳುವ ಪ್ರಕಾರ ನಿದ್ರೆಯಲ್ಲಿ ನಡೆಯುವುದು, ಮಾತನಾಡುವುದು ಅಥವಾ ಪದೇ ಪದೇ ಎಚ್ಚರಗೊಳ್ಳುವುದು (interrupted sleep) ಇವೆಲ್ಲಾ ಆರೋಗ್ಯ (health) ಸಮಸ್ಯೆಗಳ ಸಂಕೇತವಾಗಿದೆ. ಹಾಗಾಗಿ ಈ ರೀತಿ ಆಗುವುದಕ್ಕೆ ನಮ್ಮ ಯಾವ ಅಭ್ಯಾಸಗಳು ಕಾರಣವಾಗಿರಬಹುದು ಎಂಬುದನ್ನು ತಿಳಿದುಕೊಳ್ಳಿ.

ರಾತ್ರಿ ನಿದ್ರೆಯಿಂದ ಎಚ್ಚರಗೊಳ್ಳುವುದಕ್ಕೆ ಕಾರಣವೇನು?

  • ಈ ರೀತಿ ಆಗುವುದಕ್ಕೆ ಹಲವಾರು ಕಾರಣಗಳಿದ್ದು, ಕೆಲವು ರೀತಿಯ ಔಷಧಿಗಳ ಅಡ್ಡಪರಿಣಾಮವೂ ಆಗಿರಬಹುದು. ನಾವು ಸೇವನೆ ಮಾಡುವ ಕೆಲವು ಮಾತ್ರೆಗಳು ಕೂಡ ನಿದ್ರೆಯನ್ನು ಅಡ್ಡಿಪಡಿಸುತ್ತವೆ.
  • ಇನ್ನು ಕೆಲವರಲ್ಲಿ ದೈಹಿಕ ಸಮಸ್ಯೆಗಳಿಂದ ಈ ರೀತಿಯಾಗಬಹುದು ಅಂದರೆ ಆಸಿಡ್ ರಿಫ್ಲಕ್ಸ್, ಅಸ್ತಮಾ ಮತ್ತು ಆಗಾಗ ಕಂಡು ಬರುವ ಮೂತ್ರ ವಿಸರ್ಜನೆಯಂತಹ ಆರೋಗ್ಯ ಸಮಸ್ಯೆಗಳು ಕೂಡ ರಾತ್ರಿ ನಿದ್ರೆಗೆ ಅಡ್ಡಿಯಾಗಬಹುದು.
  • ಮಹಿಳೆಯರಲ್ಲಿ, ಮುಟ್ಟಿನ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಇದು ಕೂಡ ನಿದ್ರೆಯ ಮೇಲೆ ಪರಿಣಾಮ ಬೀರುತ್ತವೆ.
  • ಇನ್ನು ಪ್ರತಿನಿತ್ಯ ಒಂದೇ ಸಮಯಕ್ಕೆ ಮಲಗದಿರುವುದು ಅಥವಾ ನಿದ್ರೆಯ ವೇಳಾಪಟ್ಟಿಯನ್ನು ಅನುಸರಿಸದಿರುವುದು. ಜೊತೆಗೆ ಮಲಗುವ ಮೊದಲು ಮೊಬೈಲ್ ಮತ್ತು ಟಿವಿಗಳಂತಹ ಎಲೆಕ್ಟ್ರಾನಿಕ್ ಸಾಧನಗಳ ಅತಿಯಾದ ಬಳಕೆ ಮಾಡುವುದು ಕೂಡ ಒಳ್ಳೆಯ ನಿದ್ರೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ ಆಯಾಸ, ಆಲಸ್ಯ, ದೌರ್ಬಲ್ಯದ ಜೊತೆಗೆ ಬೆಳಿಗ್ಗೆ ಕೋಪ ಮತ್ತು ನಿರುತ್ಸಾಹದ ಭಾವನೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ವೈದ್ಯರನ್ನು ಯಾವಾಗ ಸಂಪರ್ಕಿಸಬೇಕು?

ನೀವು ರಾತ್ರಿ ಸರಿಯಾಗಿ ನಿದ್ರೆ ಮಾಡದಿದ್ದರೆ, ನಿಮ್ಮ ದೇಹದಲ್ಲಿ ಕೆಲವು ಸಮಸ್ಯೆ ಇದೆ ಎಂದರ್ಥ. ಹಾಗಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಏಕೆಂದರೆ ತಜ್ಞರು ಹೇಳುವ ಪ್ರಕಾರ ಇದು ದೀರ್ಘಾವಧಿಯಲ್ಲಿ, ಹೆಚ್ಚಿನ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ರೀತಿಯ ನಿದ್ರೆ ಸಮಸ್ಯೆಗಳನ್ನು ಪರಿಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಒಳ್ಳೆಯದು. ರಾತ್ರಿ ಪದೇ ಪದೇ ಎಚ್ಚರವಾಗಿ ನಿದ್ರೆ ಸರಿಯಾಗದಿದ್ದರೆ ವೈದ್ಯರನ್ನು ಸಂಪರ್ಕಿಸಿ. ಇದರಿಂದ ನೀವು ನಿಮ್ಮ ಆರೋಗ್ಯದ ಸ್ಥಿತಿ ಹೇಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಜೊತೆಗೆ ಸೂಕ್ತವಾದ ಚಿಕಿತ್ಸೆ ತೆಗೆದುಕೊಳ್ಳಬಹುದು. ಇದೆಲ್ಲದರ ಜೊತೆಗೆ ಪ್ರತಿದಿನ ಒಂದೇ ಸಮಯಕ್ಕೆ ಮಲಗಿ ಮತ್ತು ಎಚ್ಚರಗೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ. ಸಂಜೆ ಮತ್ತು ರಾತ್ರಿ ಸಮಯದಲ್ಲಿ ಕೆಫೀನ್ ಅಂಶವಿರುವ ಪಾನೀಯಗಳನ್ನು ಸೇವನೆ ಮಾಡುವುದನ್ನು ತಪ್ಪಿಸಿ.

ಇದನ್ನೂ ಓದಿ: ನಿದ್ರಾಹೀನತೆ ಸಮಸ್ಯೆಗೆ ಹೊಸ ಪರಿಹಾರ ಕಂಡುಕೊಂಡ ಚೀನಾ, ಇಲ್ಲಿದೆ ನೋಡಿ

ಇದನ್ನೂ ಓದಿ
Image
ಮಲಬದ್ಧತೆಯಿಂದ ಮುಕ್ತಿ ಪಡೆಯಲು ಈ ಎಲೆಯ ರಸ ಸೇವನೆ ಮಾಡಿ ಸಾಕು!
Image
ಇದಕ್ಕೆ ಹೇಳೋದು ವಾರದಲ್ಲಿ ಒಮ್ಮೆಯಾದರೂ ಮಶ್ರೂಮ್ ತಿನ್ನಿ ಅಂತ
Image
ಪಾಪ್‌ಕಾರ್ನ್ vs ಬಾಳೆಹಣ್ಣಿನ ಚಿಪ್ಸ್ ಯಾವುದು ಆರೋಗ್ಯಕರ?
Image
ಮಧುಮೇಹದಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗೂ ಈ ಬಳ್ಳಿಯೇ ಅಮೃತ

ನಮ್ಮ ಆರೋಗ್ಯಕರ ಅಭ್ಯಾಸ ಹೇಗಿರಬೇಕು?

ಯೋಗ, ಧ್ಯಾನ ಮತ್ತು ಉಸಿರಾಟದ ವ್ಯಾಯಾಮ ಹೀಗೆ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಿ ಆ ಮೂಲಕ ಒತ್ತಡವನ್ನು ಕಡಿಮೆ ಮಾಡಿ. ಒಳ್ಳೆಯ ಸಮತೋಲಿತ ಆಹಾರವನ್ನು ಸೇವನೆ ಮಾಡಿ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೆಚ್ಚಿಸಕೊಳ್ಳುವ ಮೂಲಕ ನಿದ್ರೆಯ ಗುಣಮಟ್ಟವನ್ನು ಸುಧಾರಿಸಿಕೊಳ್ಳಿ. ಈ ರೀತಿಯ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತವೆ ಜೊತೆಗೆ ನಿಮ್ಮ ಆರೋಗ್ಯ ಕೂಡ ಸುಧಾರಿಸುತ್ತದೆ. ಹಾಗಾಗಿ ರಾತ್ರಿ ಸಮಯದಲ್ಲಿ ಪದೇ ಪದೇ ಎಚ್ಚರವಾಗುವುದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ನಿಮ್ಮ ದೇಹವು ಕಳುಹಿಸುತ್ತಿರುವ ಸಂಕೇತಗಳನ್ನು ಅರ್ಥಮಾಡಿಕೊಳ್ಳಿ ಮತ್ತು ಸರಿಯಾದ ಆರೋಗ್ಯಕರ ಅಭ್ಯಾಸಗಳ ಮೂಲಕ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ