AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ಲಕ್ಷಣಗಳೇನು? ಇಲ್ಲಿದೆ ಮಾಹಿತಿ

ಇತ್ತೀಚಿಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಅಂಕಿ ಅಂಶಗಳು ಭಾರತದಲ್ಲಿ ಪುರುಷರಿಗೆ ಮಾರಣಾಂತಿಕ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯ ಹೆಚ್ಚುತ್ತಿದೆ ಎಂದು ಎಚ್ಚರಿಸಿದೆ. ಅದಕ್ಕಾಗಿಯೇ ಸೆಪ್ಟೆಂಬರ್ ತಿಂಗಳನ್ನು ಪ್ರಾಸ್ಟೇಟ್ ಕ್ಯಾನ್ಸರ್ ಜಾಗೃತಿ ತಿಂಗಳಾಗಿ ಆಚರಣೆ ಮಾಡಲಾಗುತ್ತದೆ. ಡಬ್ಲ್ಯುಎಚ್ಒ ಅಂಕಿ ಅಂಶಗಳ ಪ್ರಕಾರ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನವರು ಈ ಕ್ಯಾನ್ಸರ್ ಗೆ ಒಳಗಾಗುತ್ತಾರೆ. ಇದರ ತೀವ್ರತೆ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಇತರರಿಗೆ ಹೋಲಿಸಿದರೆ ಪ್ರಾಸ್ಟೇಟ್ ಕ್ಯಾನ್ಸರ್ ನಿಧಾನವಾಗಿ ಹರಡುತ್ತಿದೆ. ಸಮಸ್ಯೆಯನ್ನು ಮೊದಲೇ ಪತ್ತೆ ಹಚ್ಚಿದರೆ, ಅದನ್ನು ತಪ್ಪಿಸಬಹುದು ಎಂದು ತಜ್ಞರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಪುರುಷರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ಲಕ್ಷಣಗಳೇನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 09, 2024 | 9:25 AM

Share

ಪ್ರಾಸ್ಟೇಟ್ (Prostate) ಕ್ಯಾನ್ಸರ್ ಬಗ್ಗೆ ನೀವು ಕೇಳಿರಬಹುದು. ಇತ್ತೀಚಿಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಅಂಕಿ ಅಂಶಗಳು ಭಾರತದಲ್ಲಿ ಪುರುಷರಿಗೆ ಮಾರಣಾಂತಿಕ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯ ಹೆಚ್ಚುತ್ತಿದೆ ಎಂದು ಎಚ್ಚರಿಸಿದೆ. ಅದಕ್ಕಾಗಿಯೇ ಸೆಪ್ಟೆಂಬರ್ ತಿಂಗಳನ್ನು ಪ್ರಾಸ್ಟೇಟ್ ಕ್ಯಾನ್ಸರ್ ಜಾಗೃತಿ ತಿಂಗಳಾಗಿ ಆಚರಣೆ ಮಾಡಲಾಗುತ್ತದೆ. ಡಬ್ಲ್ಯುಎಚ್ಒ ಅಂಕಿ ಅಂಶಗಳ ಪ್ರಕಾರ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನವರು ಈ ಕ್ಯಾನ್ಸರ್ ಗೆ ಒಳಗಾಗುತ್ತಾರೆ. ಇದರ ತೀವ್ರತೆ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಇತರರಿಗೆ ಹೋಲಿಸಿದರೆ ಪ್ರಾಸ್ಟೇಟ್ ಕ್ಯಾನ್ಸರ್ ನಿಧಾನವಾಗಿ ಹರಡುತ್ತಿದೆ. ಸಮಸ್ಯೆಯನ್ನು ಮೊದಲೇ ಪತ್ತೆ ಹಚ್ಚಿದರೆ, ಅದನ್ನು ತಪ್ಪಿಸಬಹುದು ಎಂದು ತಜ್ಞರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಾಸ್ಟೇಟ್ (Prostate) ಎಂಬುದು ವೀರ್ಯವನ್ನು ಪೋಷಿಸುವ ಮತ್ತು ಸಾಗಿಸುವ ಸೆಮಿನಲ್ ದ್ರವವನ್ನು ಉತ್ಪಾದಿಸುವ ಒಂದು ಗ್ರಂಥಿಯಾಗಿದೆ. ಇದರಲ್ಲಿ ಜೀವಕೋಶಗಳು ನಿಯಂತ್ರಣ ಮೀರಿ ಬೆಳೆದಾಗ ಪ್ರಾಸ್ಟೇಟ್ ಕ್ಯಾನ್ಸರ್ ಪ್ರಾರಂಭವಾಗುತ್ತದೆ. ಇದನ್ನು ಆರಂಭಿಕ ಹಂತದಲ್ಲಿ ಪತ್ತೆ ಮಾಡಿದರೆ ಗುಣಪಡಿಸಬಹುದು. ಮೊದಲು ಈ ರೋಗ ಸಾಮಾನ್ಯವಾಗಿ ವಯಸ್ಸಾದವರಲ್ಲಿ ಮಾತ್ರ ಕಂಡು ಬರುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಯುವಕರು ಮತ್ತು ಮಧ್ಯವಯಸ್ಕರು ಈ ಕ್ಯಾನ್ಸರ್ಗೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ತಜ್ಞರು ಹೇಳುತ್ತಾರೆ. ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ವಿಷಯವಾಗಿದೆ, ಅದರಲ್ಲಿಯೂ ಮೆಟ್ರೋಪಾಲಿಟನ್ ನಗರಗಳಲ್ಲಿ ವಾಸಿಸುವ 35 ರಿಂದ 44 ವರ್ಷದೊಳಗಿನವರಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತಿದೆ. 2022 ರಲ್ಲಿ ಭಾರತದಲ್ಲಿ 14 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 37,948 ಪ್ರಕರಣಗಳು ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳಾಗಿದ್ದು, ಇದು ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇಕಡಾ 3 ರಷ್ಟಿದೆ.

ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ

ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ಆದಷ್ಟು ಬೇಗ ಪತ್ತೆ ಹಚ್ಚಿದರೆ ಮತ್ತು ಅದಕ್ಕೆ ಚಿಕಿತ್ಸೆ ನೀಡಿದರೆ ಇದನ್ನು ಗುಣಪಡಿಸಬಹುದು ಎಂದು ತಜ್ಞರು ಹೇಳುತ್ತಾರೆ. ಇದನ್ನು ನಾವು ಎಷ್ಟು ಬೇಗ ಗುರುತಿಸುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಪ್ರಾಸ್ಟೇಟ್ ಕ್ಯಾನ್ಸರ್ ದೇಹದಲ್ಲಿ ಬಹಳ ನಿಧಾನವಾಗಿ ಹರಡುತ್ತದೆ. ಆದ್ದರಿಂದ ನೀವು ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ, ಯಾವುದೇ ಸಮಸ್ಯೆ ಇಲ್ಲ. ಯುಎಸ್ನಲ್ಲಿ, ಶೇಕಡಾ 80 ರಷ್ಟು ರೋಗಿಗಳು ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇವಲ 20 ಪ್ರತಿಶತದಷ್ಟು ಜನರು ಮಾತ್ರ ಕ್ಯಾನ್ಸರ್ ಮುಂದುವರಿದ ನಂತರ ವೈದ್ಯರ ಬಳಿಗೆ ಹೋಗುತ್ತಾರೆ. ಆದರೆ ನಮ್ಮ ದೇಶದಲ್ಲಿ ಇದು ತದ್ವಿರುದ್ಧವಾಗಿ ನಡೆಯುತ್ತಿದೆ.

ಇದನ್ನೂ ಓದಿ: ಹಚ್ಚೆ ಹಾಕಿಸಿಕೊಳ್ಳುವ ಮೊದಲು ಮತ್ತು ನಂತರ ತಿಳಿದುಕೊಳ್ಳಬೇಕಾದ ವಿಷಯಗಳು

ಪ್ರಾಸ್ಟೇಟ್ ಕ್ಯಾನ್ಸರ್ ನ ಕೆಲವು ಲಕ್ಷಣಗಳು;

ಮೂತ್ರ ವಿಸರ್ಜನೆಯ ಸಮಯದಲ್ಲಿ ಅಸ್ವಸ್ಥತೆ,

ರಾತ್ರಿಯಲ್ಲಿ ಪದೇ ಪದೇ ಎಚ್ಚರಗೊಳ್ಳುವುದು,

ಮೂತ್ರದಲ್ಲಿ ರಕ್ತಸ್ರಾವ,

ಸೊಂಟ ಅಥವಾ ಜನನಾಂಗಗಳಲ್ಲಿ ತೀವ್ರ ನೋವು

ಇದನ್ನು ತಡೆಯಲು ಪ್ರತಿದಿನ ವ್ಯಾಯಾಮ ಮಾಡುವುದರ ಜೊತೆಗೆ ನಿಮ್ಮ ಆಹಾರದಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಸೇರಿಸಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ