AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Perfume: ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮಕ್ಕೆ ಬಳಸುವವರೇ, ಕ್ಯಾನ್ಸರ್ ಅಪಾಯ ಹೆಚ್ಚಾದೀತು ಹುಷಾರ್

ಸುಗಂಧ ದ್ರವ್ಯವನ್ನು ಇಷ್ಟ ಪಡುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹಲವರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ಇದರ ಒಂದೊಂದು ರೀತಿಯ ಪರಿಮಳ ಒಬ್ಬೊಬ್ಬರಿಗೆ ಇಷ್ಟವಾಗುತ್ತದೆ. ಕೆಲವರಿಗೆ ಇದನ್ನು ಬಳಸುವುದು ಅಭ್ಯಾಸವಾಗಿರುತ್ತದೆ. ಅದರಲ್ಲಿಯೂ ಇದರ ಪರಿಮಳ ಮನಸ್ಸಿಗೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಆದರೆ ವಾಸ್ತವದಲ್ಲಿ ಸುಗಂಧ ದ್ರವ್ಯದಲ್ಲಿ, ಆಲ್ಕೋಹಾಲ್ ಅನ್ನು ಮತ್ತು ವಿವಿಧ ರೀತಿಯ ರಾಸಾಯನಿಕಗಳನ್ನು ಬೆರೆಸುವ ಮೂಲಕ ತಯಾರಿಸಲಾಗುತ್ತದೆ. ಹೆಚ್ಚಾಗಿ ಜನ ಆ ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮದ ಮೇಲೆ ಹಚ್ಚುವುದರಿಂದ ಚರ್ಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ.

Perfume: ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮಕ್ಕೆ ಬಳಸುವವರೇ, ಕ್ಯಾನ್ಸರ್ ಅಪಾಯ ಹೆಚ್ಚಾದೀತು ಹುಷಾರ್
ಸಾಮದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 08, 2024 | 12:46 PM

Share

ಸಾಮಾನ್ಯವಾಗಿ ನಮ್ಮ ಸುತ್ತಮುತ್ತ, ಸುಗಂಧ ದ್ರವ್ಯವನ್ನು ಇಷ್ಟ ಪಡುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹಲವರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ಇದರ ಒಂದೊಂದು ರೀತಿಯ ಪರಿಮಳ ಒಬ್ಬೊಬ್ಬರಿಗೆ ಇಷ್ಟವಾಗುತ್ತದೆ. ಕೆಲವರಿಗೆ ಇದನ್ನು ಬಳಸುವುದು ಅಭ್ಯಾಸವಾಗಿರುತ್ತದೆ. ಅದರಲ್ಲಿಯೂ ಇದರ ಪರಿಮಳ ಮನಸ್ಸಿಗೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಆದರೆ ವಾಸ್ತವದಲ್ಲಿ ಸುಗಂಧ ದ್ರವ್ಯದಲ್ಲಿ, ಆಲ್ಕೋಹಾಲ್ ಅನ್ನು ಮತ್ತು ವಿವಿಧ ರೀತಿಯ ರಾಸಾಯನಿಕಗಳನ್ನು ಬೆರೆಸುವ ಮೂಲಕ ತಯಾರಿಸಲಾಗುತ್ತದೆ. ಹೆಚ್ಚಾಗಿ ಜನ ಆ ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮದ ಮೇಲೆ ಹಚ್ಚುವುದರಿಂದ ಚರ್ಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ? ಇಲ್ಲಿದೆ ತಜ್ಞರ ಅಭಿಪ್ರಾಯ.

ತಜ್ಞರು ಹೇಳುವ ಪ್ರಕಾರ, ಈ ರೀತಿ ಮಾಡುವುದು ಒಳ್ಳೆಯದಲ್ಲ. ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮದ ಮೇಲೆ ಹಚ್ಚುವುದರಿಂದ ವಿವಿಧ ರೀತಿಯ ಸೋಂಕುಗಳು ಉಂಟಾಗಬಹುದು. ಇದರಲ್ಲಿರುವ ಆಲ್ಕೋಹಾಲ್ ಅಂಶವು ಚರ್ಮದಲ್ಲಿನ ತೇವಾಂಶವನ್ನು ಹೀರಿಕೊಂಡು ಚರ್ಮವನ್ನು ಶುಷ್ಕವಾಗಿಸುತ್ತದೆ. ಸುಗಂಧ ದ್ರವ್ಯಗಳಲ್ಲಿರುವ ನ್ಯೂರೋಟಾಕ್ಸಿನ್ ಗಳು ನರಮಂಡಲದ ಮೇಲೂ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ.

ಚರ್ಮದ ಕ್ಯಾನ್ಸರ್ ಬರಬಹುದು;

ದಿನನಿತ್ಯ ಚರ್ಮದ ಮೇಲೆ ಸುಗಂಧ ದ್ರವ್ಯವನ್ನು ನೇರವಾಗಿ ಬಳಸುವುದರಿಂದ ಚರ್ಮದ ಕಿರಿಕಿರಿ ಉಂಟಾಗುತ್ತದೆ. ವಿಶೇಷವಾಗಿ ಸೂಕ್ಷ್ಮ ಚರ್ಮ ಹೊಂದಿರುವವರಿಗೆ ಹೆಚ್ಚು ಹಾನಿಕಾರಕ ಎಂದು ತಜ್ಞರು ಹೇಳುತ್ತಾರೆ. ಅದಲ್ಲದೆ ಇದರಿಂದ ಚರ್ಮದ ಮೇಲೆ ಬ್ಯಾಕ್ಟೀರಿಯಾ ಬೆಳೆಯಬಹುದು. ಸುಗಂಧ ದ್ರವ್ಯಗಳಲ್ಲಿರುವ ರಾಸಾಯನಿಕಗಳು ಹಾರ್ಮೋನುಗಳ ಸಮತೋಲನವನ್ನು ಕೂಡ ಭಂಗಗೊಳಿಸಬಹುದು. ಇದು ಚರ್ಮದ ಕ್ಯಾನ್ಸರ್ ಅಪಾಯವನ್ನು ಕೂಡ ಹೆಚ್ಚಿಸುತ್ತದೆ.

ಇದನ್ನೂ ಓದಿ: ಪುರುಷರೇ ಈ ಲಕ್ಷಣ ನಿಮಗೂ ಕಂಡುಬರುತ್ತಿದ್ದರೆ ನೀವು ಅಪಾಯದಲ್ಲಿದ್ದೀರಿ

ಹೆಚ್ಚಿನ ಸುಗಂಧ ದ್ರವ್ಯಗಳಲ್ಲಿ ಥಾಲೇಟ್ ಗಳು, ಸ್ಟೈರೀನ್, ಗ್ಯಾಲೋಕ್ಸೋಲೈಡ್ ಗಳು ಮತ್ತು ಗ್ಲೈಕಾಲ್ ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ. ಅವು ದೇಹವನ್ನು ಪ್ರವೇಶಿಸಿದರೆ, ಅದು ಉಸಿರಾಟದ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಜೊತೆಗೆ ಈ ಸಂಯುಕ್ತಗಳು ಕೆಲವರ ಚರ್ಮದ ಮೇಲೆ ಅನೇಕ ರೀತಿಯ ಪರಿಣಾಮಗಳಿಗೆ ಕಾರಣವಾಗುತ್ತದೆ. ಕೆಲವರಿಗೆ ಅಲರ್ಜಿಯಾಗುತ್ತದೆ. ಪರಿಣಾಮವಾಗಿ, ಉಸಿರಾಟದ ಸಮಸ್ಯೆಗಳು ಉದ್ಭವಿಸುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ