AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನಿ, ಆ ಬಳಿಕ ಮ್ಯಾಜಿಕ್ ನೋಡಿ!

ಬೆಳ್ಳುಳ್ಳಿ ಇಲ್ಲದೆ ಯಾವುದೇ ಖಾದ್ಯವಾಗಲಿ ಅಪೂರ್ಣವಾಗುತ್ತದೆ. ಆಹಾರದಲ್ಲಿ ಬೆಳ್ಳುಳ್ಳಿ ಸೇರಿದಾಗಲೇ ಅದಕ್ಕೆ ವಿಶೇಷ ರುಚಿ ಸಿಗುತ್ತದೆ. ಅಷ್ಟೇ ಅಲ್ಲ ಬೆಳ್ಳುಳ್ಳಿಯನ್ನು ತಿನ್ನುವುದು ಆರೋಗ್ಯಕ್ಕೂ ಕೂಡ ತುಂಬಾ ಪ್ರಯೋಜನಕಾರಿ. ನಿಯಮಿತವಾಗಿ ಬೆಳ್ಳುಳ್ಳಿ ಸೇವನೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಹಳ ಸಹಕಾರಿ. ಅದರಲ್ಲಿಯೂ ಹಸಿ ಬೆಳ್ಳುಳ್ಳಿ ಎಸಳುಗಳ ಸೇವನೆ ನೀವೂ ಊಹಿಸಲು ಸಾಧ್ಯವಾಗದಂತಹ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಅವು ಯಾವವು, ಯಾಕೆ ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನಿ, ಆ ಬಳಿಕ ಮ್ಯಾಜಿಕ್ ನೋಡಿ!
ಹಸಿ ಬೆಳ್ಳುಳ್ಳಿ ಸೇವನೆಯಿಂದ ಸಿಗುವ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Nov 27, 2025 | 8:26 PM

Share

ಆಹಾರದಲ್ಲಿ ಬೆಳ್ಳುಳ್ಳಿ (Garlic) ಸೇರಿಸುವುದರಿಂದ ಅದಕ್ಕೆ ವಿಶೇಷ ರುಚಿ ಸಿಗುತ್ತದೆ. ಅಷ್ಟೇ ಅಲ್ಲ, ಇದರ ನಿಯಮಿತ ಸೇವನೆ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿಯಾಗಿದ್ದು ಅನೇಕ ರೀತಿಯ ಆರೋಗ್ಯ ಸಮಸ್ಯೆಗನ್ನು ನಿವಾರಿಸುತ್ತದೆ. ವಿಶೇಷವಾಗಿ, ಹಸಿ ಬೆಳ್ಳುಳ್ಳಿ (Raw Garlic) ಎಸಳುಗಳನ್ನು ತಿನ್ನುವುದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಕೆಲವರಿಗೆ ಯಾವಾಗ, ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡಬೇಕು ಎಂಬ ಗೊಂದಲವಿರಬಹುದು. ಅಂತವರು ಈ ಸ್ಟೋರಿ ಓದಿ ತಿಳಿದುಕೊಳ್ಳಬಹುದು. ಸಾಮಾನ್ಯವಾಗಿ ನಿಯಮಿತವಾಗಿ ಹಸಿ ಬೆಳ್ಳುಳ್ಳಿ ಎಸಳುಗಳ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಯಾವವು, ಯಾಕೆ ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದು ತಿಳಿದುಕೊಳ್ಳಿ.

  • ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
  • ನೀವು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಬಯಸುತ್ತಿದ್ದರೆ ಪ್ರತಿದಿನ ಎರಡು ಎಸಳು ಹಸಿ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದು.
  • ಮಧುಮೇಹ ರೋಗಿಗಳಿಗೆ ಹಸಿ ಬೆಳ್ಳುಳ್ಳಿ ಸೇವನೆ ಒಳ್ಳೆಯದು. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.
  • ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲ, ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವೂ ಕೂಡ ಕಡಿಮೆಯಾಗುತ್ತದೆ.
  • ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ. ಇನ್ನು ಬೆಳ್ಳುಳ್ಳಿಯಲ್ಲಿರುವಂತಹ ಸೂಕ್ಷ್ಮಾಣು ವಿರೋಧಿ ಗುಣ ಸಾಲ್ಮೊನೆಲ್ಲಾ ಮತ್ತು ಇ ಕೊಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಆರೋಗ್ಯವನ್ನು ಕಾಪಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್