ಹಸಿ ಬೆಳ್ಳುಳ್ಳಿ ಸೇವನೆಯಿಂದ ಸಿಗುವ ಪ್ರಯೋಜನ
ಆಹಾರದಲ್ಲಿ ಬೆಳ್ಳುಳ್ಳಿ (Garlic) ಸೇರಿಸುವುದರಿಂದ ಅದಕ್ಕೆ ವಿಶೇಷ ರುಚಿ ಸಿಗುತ್ತದೆ. ಅಷ್ಟೇ ಅಲ್ಲ, ಇದರ ನಿಯಮಿತ ಸೇವನೆ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿಯಾಗಿದ್ದು ಅನೇಕ ರೀತಿಯ ಆರೋಗ್ಯ ಸಮಸ್ಯೆಗನ್ನು ನಿವಾರಿಸುತ್ತದೆ. ವಿಶೇಷವಾಗಿ, ಹಸಿ ಬೆಳ್ಳುಳ್ಳಿ (Raw Garlic) ಎಸಳುಗಳನ್ನು ತಿನ್ನುವುದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಕೆಲವರಿಗೆ ಯಾವಾಗ, ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡಬೇಕು ಎಂಬ ಗೊಂದಲವಿರಬಹುದು. ಅಂತವರು ಈ ಸ್ಟೋರಿ ಓದಿ ತಿಳಿದುಕೊಳ್ಳಬಹುದು. ಸಾಮಾನ್ಯವಾಗಿ ನಿಯಮಿತವಾಗಿ ಹಸಿ ಬೆಳ್ಳುಳ್ಳಿ ಎಸಳುಗಳ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಯಾವವು, ಯಾಕೆ ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದು ತಿಳಿದುಕೊಳ್ಳಿ.
- ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
- ನೀವು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಬಯಸುತ್ತಿದ್ದರೆ ಪ್ರತಿದಿನ ಎರಡು ಎಸಳು ಹಸಿ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದು.
- ಮಧುಮೇಹ ರೋಗಿಗಳಿಗೆ ಹಸಿ ಬೆಳ್ಳುಳ್ಳಿ ಸೇವನೆ ಒಳ್ಳೆಯದು. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.
- ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲ, ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವೂ ಕೂಡ ಕಡಿಮೆಯಾಗುತ್ತದೆ.
- ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ. ಇನ್ನು ಬೆಳ್ಳುಳ್ಳಿಯಲ್ಲಿರುವಂತಹ ಸೂಕ್ಷ್ಮಾಣು ವಿರೋಧಿ ಗುಣ ಸಾಲ್ಮೊನೆಲ್ಲಾ ಮತ್ತು ಇ ಕೊಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಆರೋಗ್ಯವನ್ನು ಕಾಪಾಡುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ