AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಸರಿನೊಂದಿಗೆ ಸಕ್ಕರೆ ಬೆರೆಸಿ ತಿಂದ್ರೆ ಎಷ್ಟೋ ಸಮಸ್ಯೆಗಳು ಕಡಿಮೆಯಾಗುತ್ತೆ! ನೀವೂ ಟ್ರೈ ಮಾಡಿ

ಮೊಸರು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಆದರೆ ನೀವೆಂದಾದರೂ ಮೊಸರನ್ನು ಸಕ್ಕರೆಯ ಜೊತೆ ಬೆರೆಸಿಕೊಂಡು ತಿಂದಿದ್ದೀರಾ? ಕೆಲವು ಹೋಟೆಲ್ ಗಳಲ್ಲಿಯೂ ಕೊನೆಯಲ್ಲಿ ಮೊಸರು ಕೊಡುವಾಗ ಅದರ ಜೊತೆ ಸಕ್ಕರೆಯನ್ನು ಕೂಡ ಕೊಡುತ್ತಾರೆ. ಈ ರೀತಿ ಮೊಸರನ್ನು ಸೇವಿಸುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿ ಮೊಸರಿಗೆ ಸಕ್ಕರೆ ಬೆರೆಸಿ ತಿನ್ನುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಲಾಭಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಮೊಸರಿನೊಂದಿಗೆ ಸಕ್ಕರೆ ಬೆರೆಸಿ ತಿಂದ್ರೆ ಎಷ್ಟೋ ಸಮಸ್ಯೆಗಳು ಕಡಿಮೆಯಾಗುತ್ತೆ! ನೀವೂ ಟ್ರೈ ಮಾಡಿ
Curd And Sugar
ಪ್ರೀತಿ ಭಟ್​, ಗುಣವಂತೆ
|

Updated on:Jul 11, 2025 | 3:03 PM

Share

ಮೊಸರು (Curd) ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ತಿಳಿದಿರುವ ವಿಚಾರ. ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಮೂಳೆಗಳನ್ನು ಬಲಪಡಿಸುತ್ತದೆ. ಮೊಸರಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳು ಕರುಳನ್ನು ಆರೋಗ್ಯವಾಗಿಡುತ್ತವೆ. ಮಾತ್ರವಲ್ಲ ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ 12 (Cobalamin), ಪೊಟ್ಯಾಸಿಯಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಪ್ರೋಬಯಾಟಿಕ್‌ಗಳಂತಹ ಪೋಷಕಾಂಶಗಳು ಹೇರಳವಾಗಿವೆ. ಆದರೆ ಕೆಲವರು ಮೊಸರನ್ನು ಸಕ್ಕರೆಯೊಂದಿಗೆ (Curd and Sugar) ಸೇವಿಸುವುದನ್ನು ನೀವು ನೋಡಿರಬಹುದು. ಸಕ್ಕರೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಜನರು ರೀತಿಯ ಆಹಾರಗಳ ಸೇವನೆ ಮಾಡುವುದನ್ನೇ ನಿಲ್ಲಿಸುತ್ತಿದ್ದಾರೆ. ಆದರೆ ನಿಮಗೆ ತಿಳಿದಿರಲಿ, ಈ ರೀತಿಯಾಗಿ ಮೊಸರನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ (Health) ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿ ಮೊಸರಿಗೆ ಸಕ್ಕರೆ ಬೆರೆಸಿ ತಿನ್ನುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಲಾಭಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಮೊಸರಿಗೆ ಸಕ್ಕರೆ ಬೆರೆಸಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು:

  • ಮೊಸರಿಗೆ ಸಕ್ಕರೆ ಬೆರೆಸಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ರೀತಿ ಮೊಸರು ಸೇವಿಸುವುದರಿಂದ ಮಾನಸಿಕ ಆರೋಗ್ಯ ಮಾತ್ರವಲ್ಲದೆ ದೈಹಿಕ ಆರೋಗ್ಯವೂ ಸುಧಾರಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
  • ಮೊಸರಿನೊಂದಿಗೆ ಸಕ್ಕರೆ ಬೆರೆಸುವುದರಿಂದ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತವೆ. ಮಾತ್ರವಲ್ಲ ಮೊಸರು ಮತ್ತು ಸಕ್ಕರೆಯ ಮಿಶ್ರಣ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಕ್ಕೂ ಸಹಕಾರಿಯಾಗಿದೆ.
  • ಮೊಸರಿನೊಂದಿಗೆ ಸಕ್ಕರೆ ಬೆರೆಸಿ ಸೇವನೆ ಮಾಡುವುದರಿಂದ ಆ ಮಿಶ್ರಣ ನಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಾತ್ರವಲ್ಲ ನಮ್ಮ ದೇಹದಿಂದ ವಿಷವನ್ನು ಹೊರಹಾಕಲು ಕೂಡ ಸಹಾಯ ಮಾಡುತ್ತದೆ.
  • ಮೊಸರು ಮತ್ತು ಸಕ್ಕರೆಯ ಮಿಶ್ರಣವನ್ನು ಮಕ್ಕಳಿಗೆ ನೀಡುವುದರಿಂದ ಅವರ ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆಯಾಸ, ಒತ್ತಡದಂತಹ ಸಮಸ್ಯೆಗಳು ಕೂಡ ಕಡಿಮೆ ಮಾಡುತ್ತದೆ.
  • ಮೊಸರಿಗೆ ಸಕ್ಕರೆ ಬೆರೆಸಿ ಸೇವನೆ ಮಾಡುವುದರಿಂದ ಶೀತ, ಜ್ವರ ಮತ್ತು ಕೆಮ್ಮಿನಂತಹ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
  • ಊಟದ ನಂತರ ಒಂದು ಕಪ್ ಮೊಸರಿನಲ್ಲಿ ಅರ್ಧ ಟೀ ಚಮಚ ಸಕ್ಕರೆ ಬೆರೆಸಿ ಸೇವಿಸುವುದರಿಂದ ಅಸಿಡಿಟಿ ಸಮಸ್ಯೆ ಸುಲಭವಾಗಿ ನಿವಾರಣೆಯಾಗುತ್ತದೆ.
  • ಈ ರೀತಿ ಮೊಸರನ್ನು ಸೇವನೆ ಮಾಡುವುದರಿಂದ ಹೊಟ್ಟೆ ಉರಿಯುವ ಸಮಸ್ಯೆ ತಕ್ಷಣವೇ ಕಡಿಮೆಯಾಗುತ್ತದೆ.
  • ದೇಹದ ಉಷ್ಣತೆ ಹೆಚ್ಚಿದ್ದರೆ, ಮೊಸರನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ದೇಹವು ತಂಪಾಗುತ್ತದೆ, ಮನಸ್ಸು ಶಾಂತವಾಗಿರುತ್ತದೆ.
  • ಮೊಸರನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ದೈಹಿಕ ಶಕ್ತಿ ಹೆಚ್ಚಾಗುತ್ತದೆ.
  • ಮೂತ್ರನಾಳದ ಸೋಂಕಿನ ಸಮಸ್ಯೆಗಳಿಂದ ಬಳಲುತ್ತಿರುವವರು ಮೊಸರು ಸಕ್ಕರೆಯ ಮಿಶ್ರಣವನ್ನು ಸೇವಿಸುವುದರಿಂದ ಉತ್ತಮ ಔಷಧಿಯಂತೆ ಕಾರ್ಯನಿರ್ವಹಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಈ ಸಮಸ್ಯೆ ಬೇಗನೆ ನಿವಾರಣೆಯಾಗುತ್ತದೆ.
  • ಮೊಸರನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Fri, 11 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ