AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿಗೆ ಈ ಒಂದು ಮಸಾಲೆ ಬೆರೆಸಿ ಕುಡಿದರೆ ಪುರುಷರಲ್ಲಿ ಫಲವತ್ತತೆ ಸಮಸ್ಯೆ ಮಾಯವಾಗುತ್ತೆ

ಪ್ರತಿದಿನ ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲು ಕುಡಿಯುವ ಅಭ್ಯಾಸ ಹಲವರಿಗಿರಬಹುದು. ಇದು ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಆದರೆ ನಿಮಗೆ ಗೊತ್ತೇ? ಅಡುಗೆ ಮನೆಯಲ್ಲಿ ಲಭ್ಯವಿರುವ ಒಂದು ವಿಶಿಷ್ಟ ಮಸಾಲೆಯಾದ ಲವಂಗವನ್ನು ಹಾಲಿಗೆ ಸೇರಿಸಿ ಕುಡಿಯುವುದರಿಂದ ಮತ್ತಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಯಾಕೆ ಇದು ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಾಲಿಗೆ ಈ ಒಂದು ಮಸಾಲೆ ಬೆರೆಸಿ ಕುಡಿದರೆ ಪುರುಷರಲ್ಲಿ ಫಲವತ್ತತೆ ಸಮಸ್ಯೆ ಮಾಯವಾಗುತ್ತೆ
Clove Milk
ಪ್ರೀತಿ ಭಟ್​, ಗುಣವಂತೆ
|

Updated on: Oct 04, 2025 | 3:30 PM

Share

ಆಹಾರ ಪದ್ಧತಿಯಲ್ಲಿ ಮಾಡಿಕೊಂಡಂತಹ ಅನೇಕ ಬದಲಾವಣೆಗಳಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಮಾತ್ರವಲ್ಲ ಈ ರೀತಿಯ ಅಭ್ಯಾಸ ಕೆಲವರಲ್ಲಿ ಹೊಟ್ಟೆ ನೋವಿಗೂ ಕೂಡ ಕಾರಣವಾಗುತ್ತದೆ. ಬೆಳಿಗ್ಗೆ ಹೊಟ್ಟೆ ಸ್ವಚ್ಛವಾಗದಿದ್ದರೆ ದಿನವಿಡೀ ಒಂದು ರೀತಿಯ ಅಸ್ವಸ್ಥತೆ ಕಾಡುತ್ತದೆ. ಇದೆಲ್ಲದಕ್ಕೂ ನಾವು ಸೇವನೆ ಮಾಡುವಂತಹ ಆಹಾರಗಳೇ ಕಾರಣವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ, ಕೆಲವು ನೈಸರ್ಗಿಕ ಮನೆಮದ್ದುಗಳು ಹೊಟ್ಟೆಯನ್ನು ಶುದ್ಧೀಕರಿಸಲು ಅದ್ಭುತವಾಗಿ ಕೆಲಸ ಮಾಡುತ್ತವೆ. ಆರೋಗ್ಯ ತಜ್ಞರು ಈ ರೀತಿ ಸಮಸ್ಯೆ ಕಂಡು ಬಂದಾಗ ಪ್ರತಿದಿನ ರಾತ್ರಿ ಒಂದು ಲೋಟ ಬೆಚ್ಚಗಿನ ಹಾಲು (milk) ಕುಡಿಯುವುದು ಪ್ರಯೋಜನಕಾರಿ ಎಂದು ಹೇಳುತ್ತಾರೆ. ಮಾತ್ರವಲ್ಲ ಇದು ಮಲಬದ್ಧತೆ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಅಡುಗೆ ಮನೆಯಲ್ಲಿ ಲಭ್ಯವಿರುವ ಒಂದು ವಿಶಿಷ್ಟ ಮಸಾಲೆಯಾದ ಲವಂಗವನ್ನು ಹಾಲಿಗೆ (Clove milk) ಸೇರಿಸಿ ಕುಡಿಯುವುದರಿಂದ ಮತ್ತಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಯಾಕೆ ಇದು ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಲವಂಗದ ಹಾಲು ಅಂದರೆ ಹಾಲಿಗೆ ಕುಟ್ಟಿ ಪುಡಿ ಮಾಡಿಟ್ಟುಕೊಂಡ ಲವಂಗದ ಹುಡಿಯನ್ನು ಅಥವಾ ಅದರ ಪೌಡರ್ ಅನ್ನು ಹಾಕಿ ಕುಡಿಯುವುದರಿಂದ ದೇಹದಲ್ಲಿ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಲವಂಗವು ರಕ್ತದೊತ್ತಡವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ. ಆದ್ದರಿಂದ, ಅಧಿಕ ರಕ್ತದೊತ್ತಡ ಇರುವವರು ಲವಂಗ ಹಾಲು ಕುಡಿಯುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
  • ಲವಂಗದ ಹಾಲು ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. ಈ ಹಾಲನ್ನು ಸೇವಿಸುವುದರಿಂದ ದೊಡ್ಡ ಕರುಳು ಶುದ್ಧವಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಚಯಾಪಚಯ ಕ್ರಿಯೆ ವೇಗಗೊಳ್ಳುತ್ತದೆ.
  • ಲವಂಗದ ಹಾಲು ಹಲ್ಲು ಮತ್ತು ಮೂಳೆಗಳಿಗೆ ಬಲ ನೀಡುತ್ತದೆ. ಒಸಡು ಉರಿಯೂತದಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
  • ಬೆಳಿಗ್ಗೆ ನಿಮ್ಮ ಹೊಟ್ಟೆ ಸರಿಯಾಗಿ ಸ್ವಚ್ಛವಾಗದಿದ್ದರೆ, ರಾತ್ರಿ ಮಲಗುವ ಮೊದಲು ಲವಂಗದೊಂದಿಗೆ ಬೆರೆಸಿದ ಹಾಲು ಕುಡಿಯಿರಿ. ಇದು ನಿಮ್ಮ ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಇದಕ್ಕಾಗಿ, ಒಂದು ಲವಂಗ ಅಥವಾ ಅದರ ಪುಡಿಯನ್ನು ಒಂದು ಲೋಟ ಬೆಚ್ಚಗಿನ ಹಾಲಿನಲ್ಲಿ ಕುದಿಸಿ ಕುಡಿಯಿರಿ, ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರಯೋಜನಕಾರಿಯಾಗಿದೆ.
  • ಲವಂಗದ ಪುಡಿಯೊಂದಿಗೆ ಬೆರೆಸಿದ ಹಾಲು ಕಾರ್ಮಿನೇಟಿವ್ ಮತ್ತು ಉತ್ತೇಜಕ ವಸ್ತುಗಳನ್ನು ಹೊಂದಿರುತ್ತದೆ. ಇವು ವಾಯು ನಿಯಂತ್ರಣಕ್ಕೆ ಸಹಾಯ ಮಾಡುತ್ತವೆ. ಸುಸ್ತು ಅನಿಸಿದಾಗ, ಒಂದು ಕಪ್ ಹಾಲಿಗೆ ಲವಂಗ ಪುಡಿಯೊಂದಿಗೆ ಬೆರೆಸಿ ಕುಡಿಯುವುದರಿಂದ ಸೋಮಾರಿತನ, ಆಯಾಸ ಮತ್ತು ಬೇಸರ ತಕ್ಷಣವೇ ನಿವಾರಣೆಯಾಗುತ್ತದೆ.
  • ಲವಂಗದಲ್ಲಿರುವ ಕ್ಯಾಲ್ಸಿಯಂ ಹಲ್ಲುನೋವು, ಬಾಯಿಯ ದುರ್ವಾಸನೆ ಮತ್ತು ಊತವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲವಂಗ ಪುಡಿಯೊಂದಿಗೆ ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಲವಂಗವು ಹೊಟ್ಟೆಯನ್ನು ಶುದ್ಧೀಕರಿಸುವಲ್ಲಿಯೂ ಸಹಾಯ ಮಾಡುತ್ತದೆ. ಪುರುಷರಲ್ಲಿ ಫಲವತ್ತತೆಗೆ ಲವಂಗ ಹಾಲು ತ್ರಾಣ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ