AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆಗಳನ್ನು ಫ್ರಿಡ್ಜ್ ನಲ್ಲಿಡುತ್ತೀರಾ? ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ ಈ ಸ್ಟೋರಿ ಮೂಲಕ ತಿಳಿಯಿರಿ

ಮೊಟ್ಟೆಗಳು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಆದರೆ ಅದನ್ನು ತಂದು ಫ್ರಿಡ್ಜ್ ನಲ್ಲಿ ಇಡುತ್ತಾರೆ. ಮೊಟ್ಟೆಗಳು ಬೇಗ ಹಾಳಾಗಬಾರದು ಜೊತೆಗೆ ಅವು ತುಂಬಾ ಸಮಯದ ವರೆಗೆ ಉಪಯೋಗಕ್ಕೆ ಬರಬೇಕು ಎಂಬುದು ಇದರ ಹಿಂದಿರುವ ಕಾರಣವಾಗಿದೆ. ಆದರೆ ನಾವು ಅನುಸರಿಸುತ್ತಿರುವ ಈ ಅಭ್ಯಾಸ ಆರೋಗ್ಯಕ್ಕೆ ಪ್ರಯೋಜನಕಾರಿಯೇ? ಈ ಬಗ್ಗೆ ನೀವು ಎಂದಾದರೂ ಯೋಚಿಸಿದ್ದೀರಾ? ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ನೀಡುವ ಮೊಟ್ಟೆ ವಿಷಕಾರಿ ಆಗುವ ಮೊದಲು ಅವುಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದನ್ನು ಅನುಸರಿಸಿ. ಅಧ್ಯಯನದಿಂದ ಬಹಿರಂಗಗೊಂಡ ವಿಷಯ ಮತ್ತು ತಜ್ಞರ ಅಭಿಪ್ರಾಯ ಎರಡೂ ಕೂಡ ಈ ಸ್ಟೋರಿಯಲ್ಲಿದೆ.

ಮೊಟ್ಟೆಗಳನ್ನು ಫ್ರಿಡ್ಜ್ ನಲ್ಲಿಡುತ್ತೀರಾ? ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ ಈ ಸ್ಟೋರಿ ಮೂಲಕ ತಿಳಿಯಿರಿ
Storing Eggs In The Refrigerator
ಪ್ರೀತಿ ಭಟ್​, ಗುಣವಂತೆ
|

Updated on: Oct 25, 2025 | 4:51 PM

Share

ಮೊಟ್ಟೆಗಳು ನಾವು ದಿನನಿತ್ಯ ಬಳಸುವ ಅತ್ಯಗತ್ಯ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಇವುಗಳ ನಿಯಮಿತ ಸೇವನೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಪ್ರತಿನಿತ್ಯ ಬೇಯಿಸಿದ ಮೊಟ್ಟೆಗಳನ್ನು ತಿನ್ನುವುದರಿಂದ ಆರೋಗ್ಯ (Health) ಬಹಳ ಚೆನ್ನಾಗಿರುತ್ತದೆ. ಮಾತ್ರವಲ್ಲ ಇವು ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಕೂಡ ಒದಗಿಸುತ್ತವೆ. ಆದರೆ ಅನೇಕರು ಮಾರುಕಟ್ಟೆಗಳಿಂದ ಖರೀದಿಸಿ ತಂದ ಮೊಟ್ಟೆಗಳನ್ನು (eggs) ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಆದರೆ ಆಹಾರ ಪದಾರ್ಥಗಳನ್ನು ಅಥವಾ ಸೇವನೆ ಮಾಡುವ ವಸ್ತುಗಳನ್ನು ಫ್ರಿಜ್‌ನಲ್ಲಿ ಸಂಗ್ರಹಿಸಿ ಸೇವನೆ ಮಾಡುವುದು ಎಲ್ಲಾ ಸಮಯದಲ್ಲಿಯೂ ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೊಟ್ಟೆಗಳನ್ನು ಫ್ರಿಡ್ಜ್ ನಲ್ಲಿಡುವುದು ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ, ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೊಟ್ಟೆಗಳು ನಿಯಮಿತವಾಗಿ ಬಳಸುವ ದೈನಂದಿನ ಅಗತ್ಯ ವಸ್ತುಗಳಲ್ಲಿ ಒಂದಾಗಿದ್ದು ಇದರ ಸೇವನೆ ಆರೋಗ್ಯಕ್ಕೂ ಒಳ್ಳೆಯದು ಆದರೆ ಪೋಷಕಾಂಶಗಳ ಗಣಿಯಾಗಿರುವ ಮೊಟ್ಟೆಯನ್ನು ಫ್ರಿಜ್‌ನಲ್ಲಿ ಇಡುತ್ತಾರೆ. ಆದರೆ ಆರೋಗ್ಯ ತಜ್ಞರು ಎಲ್ಲಾ ಆಹಾರಗಳನ್ನು ಫ್ರಿಡ್ಜ್ ನಲ್ಲಿಟ್ಟು ತಿನ್ನುವುದು ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ. ಬದಲಾಗಿ ಅವು ಹಾಳಾಗುವ ಮುನ್ನ ಸೇವಿಸುವುದು ಉತ್ತಮ ಎನ್ನುತ್ತಾರೆ.

ಅಧ್ಯಯನ ಹೇಳುವುದೇನು?

ಆರೋಗ್ಯ ತಜ್ಞರ ಪ್ರಕಾರ, ಮೊಟ್ಟೆಗಳ ಶೆಲ್ಫ್ ಜೀವಿತಾವಧಿಯನ್ನು ಹೆಚ್ಚಿಸಿ ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚು. ಅಂದರೆ ಅವು ತುಂಬಾ ದಿನಗಳ ವರೆಗೆ ಇರಬೇಕು ಎಂದು ಫ್ರಿಡ್ಜ್ ನಲ್ಲಿಟ್ಟು ಸೇವನೆ ಮಾಡುವುದರಿಂದ ಅವುಗಳಿಂದ ಸಿಗುವ ಪ್ರಯೋಜನಕ್ಕಿಂತ ನಷ್ಟವೇ ಹೆಚ್ಚಾಗಿರುತ್ತದೆ. ಇದು ಹಲವಾರು ಅಧ್ಯಯನಗಳಿಂದಲೂ ಸಾಬೀತಾಗಿದ್ದು, ಮೊಟ್ಟೆಗಳನ್ನು ಫ್ರಿಡ್ಜ್‌ನಲ್ಲಿ ಹೆಚ್ಚು ದಿನಗಳ ವರೆಗೆ ಸಂಗ್ರಹಿಸುವುದು ಅವುಗಳಲ್ಲಿರುವ ಪೋಷಕಾಂಶಗಳ ನಷ್ಟಕ್ಕೆ ಕಾರಣವಾಗಬಹುದು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾಧ್ಯವಾದಷ್ಟು ಫ್ರಿಡ್ಜ್‌ನಲ್ಲಿ ಇಡಬೇಡಿ. ಅಷ್ಟು ಅಗತ್ಯವಿದ್ದಲ್ಲಿ, ಕಡಿಮೆ ಸಮಯದ ವರೆಗೆ ಅವುಗಳನ್ನು ಫ್ರಿಡ್ಜ್‌ನಲ್ಲಿ ಇಡುವುದು ಉತ್ತಮ.

ಇದನ್ನೂ ಓದಿ: Skin Care Tips : ಮೊಟ್ಟೆ ಚಿಪ್ಪನ್ನು ಈ ರೀತಿ ಬಳಸಿದ್ರೆ ತ್ವಚೆಯ ಹೊಳಪು ಹೆಚ್ಚುತ್ತೆ

ಮೊಟ್ಟೆಗಳನ್ನು ಯಾಕೆ ಫ್ರಿಡ್ಜ್‌ನಲ್ಲಿ ಇಡಬಾರದು?

ಸಾಮಾನ್ಯವಾಗಿ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮೊಟ್ಟೆಗಳಲ್ಲಿ ಸಾಲ್ಮೊನೆಲ್ಲಾ ಎಂಬ ಬ್ಯಾಕ್ಟೀರಿಯಾ ಇರುತ್ತದೆ. ಇದು ನಮ್ಮ ದೇಹವನ್ನು ಪ್ರವೇಶಿಸಿದರೆ, ಅದು ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. ಈ ಬ್ಯಾಕ್ಟೀರಿಯಾ ಅತಿಸಾರ ಮತ್ತು ವಾಂತಿಗೆ ಕಾರಣವಾಗುತ್ತದೆ. ರೆಫ್ರಿಜರೇಟರ್‌ನಲ್ಲಿ ಮೊಟ್ಟೆಗಳನ್ನು ಸಂಗ್ರಹಿಸುವುದರಿಂದ ಅದು ಇತರ ಆಹಾರ ಪದಾರ್ಥಗಳಿಗೂ ಹರಡಬಹುದು. ಹಾಗಾಗಿ ಮೊಟ್ಟೆಗಳನ್ನು 3 ರಿಂದ 5 ವಾರಗಳಿಗಿಂತ ಹೆಚ್ಚು ಕಾಲ ಫ್ರಿಡ್ಜ್‌ನಲ್ಲಿ ಇಡಬಾರದು. ಸಂಗ್ರಹಿಸಿದರೂ ಸಹ, ಅವುಗಳನ್ನು ಫ್ರಿಡ್ಜ್‌ನ ಕೆಳಗಿನ ಭಾಗದಲ್ಲಿರುವ ಪೆಟ್ಟಿಗೆಯಲ್ಲಿ ಇಡಬೇಕು. ಫ್ರಿಡ್ಜ್‌ನಲ್ಲಿ ಸಂಗ್ರಹಿಸುವ ಮೊದಲು, ಮೊಟ್ಟೆಗಳನ್ನು ನೀರಿನಿಂದ ಸ್ವಚ್ಛವಾಗಿ ತೊಳೆಯಬೇಕು. ಹೀಗೆ ಮಾಡುವುದರಿಂದ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ