ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ: ಕೇಂದ್ರ ಆರೋಗ್ಯ ಇಲಾಖೆ
ಸಾಮಾನ್ಯವಾಗಿ ವ್ಯಕ್ತಿಯ ದೇಹದ ಉಷ್ಣತೆಯು 36.4 ಡಿಗ್ರಿ ಸೆಲ್ಸಿಯಸ್ ನಿಂದ 37.2ಡಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೆಚ್ಚಿನ ಹೊರಗಿನ ಅಥವಾ ಒಳಾಂಗಣ ತಾಪಮಾನಕ್ಕೆ ಒಡ್ಡಿಕೊಳ್ಳುವುದರಿಂದ ನೇರವಾಗಿ ಶಾಖದ ಒತ್ತಡವನ್ನು ಉಂಟುಮಾಡಬಹುದು.
ಬಿಸಿಲಿನ ತಾಪಮಾನವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಬುಧವಾರದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆಯನ್ನು ನೀಡಿದೆ. ನಿಮ್ಮ ಸುತ್ತಮುತ್ತಲಲ್ಲಿ ಯಾರಾದರೂ ಅಧಿಕ ಬಿಸಿಲಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದರೆ ತಕ್ಷಣ 108/102 ಗೆ ಕರೆ ಮಾಡಬೇಕು ಎಂದು ಸರ್ಕಾರ ಹೇಳಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದಲ್ಲಿ ಡಿಜಿಟಲ್ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ಜನರ ದೈನಂದಿನ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ, ಜಿಲ್ಲೆ ಮತ್ತು ನಗರ ಆರೋಗ್ಯ ಇಲಾಖೆಗಳೊಂದಿಗೆ ಮುಂದಿನ ಕೆಲವು ದಿನಗಳವರೆಗೆ ಶಾಖದ ಅಲೆಗಳ ಮುನ್ಸೂಚನೆಯನ್ನು ಸೂಚಿಸುವ ಕೇಂದ್ರ ಏಜೆನ್ಸಿಗಳಿಂದ ದೈನಂದಿನ ಶಾಖ ಎಚ್ಚರಿಕೆಗಳನ್ನು ತ್ವರಿತವಾಗಿ ಪ್ರಸಾರ ಮಾಡಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ.
ಇದನ್ನೂ ಓದಿ: ಶಾಖದ ಅಲೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ಆರೋಗ್ಯ ಮಾರ್ಗಸೂಚಿ ಬಿಡುಗಡೆ
ಸಾಮಾನ್ಯವಾಗಿ ವ್ಯಕ್ತಿಯ ದೇಹದ ಉಷ್ಣತೆಯು 36.4 ಡಿಗ್ರಿ ಸೆಲ್ಸಿಯಸ್ ನಿಂದ 37.2ಡಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೆಚ್ಚಿನ ಹೊರಗಿನ ಅಥವಾ ಒಳಾಂಗಣ ತಾಪಮಾನಕ್ಕೆ ಒಡ್ಡಿಕೊಳ್ಳುವುದರಿಂದ ನೇರವಾಗಿ ಶಾಖದ ಒತ್ತಡವನ್ನು ಉಂಟುಮಾಡಬಹುದು. ಇದು ಶಾಖದ ದದ್ದು, ಸ್ನಾಯು ಸೆಳೆತ, ಮೂರ್ಛೆ, ಶಾಖದ ಬಳಲಿಕೆ ಮತ್ತು ಶಾಖದ ಹೊಡೆತವನ್ನು ಒಳಗೊಂಡಿರುವ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಜೊತೆಗೆ ಹೃದಯಾಘಾತದಂತಹ ಸಮಸ್ಯೆಗಳು ಹೆಚ್ಚಾಗಲು ಕಾರಣವಾಗಬಹುದು. ಆದ್ದರಿಂದ ವಿಪರೀತ ಶಾಖದ ಏರಿಕೆಯಿಂದ ನಿಮ್ಮ ನೀವು ಜಾಗ್ರತೆ ವಹಿಸುವುದು ಅಗತ್ಯ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
Published On - 10:21 am, Wed, 1 March 23