Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

| Updated By: shruti hegde

Updated on: Oct 10, 2021 | 2:57 PM

ನಮ್ಮ ಕೆಲವು ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯವನ್ನು ಹಾಳುಮಾಡಬಹುದು. ಹಾಗಾಗಿ ಆರೋಗ್ಯ ಸುಧಾರಣೆಗೆ ಮತ್ತು ಮೂತ್ರಪಿಂಡದ ಆರೋಗ್ಯಕ್ಕಾಗಿ ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!
ಸಂಗ್ರಹ ಚಿತ್ರ
Follow us on

ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದು ಹಾಕಲು ಮೂತ್ರಪಿಂಡ ಸಹಾಯಕ. ಇದಲ್ಲದೇ, ನೀರು, ಉಪ್ಪು, ಖನಿಜಾಂಶಗಳನ್ನು ಸಮ ಪ್ರಮಾಣದಲ್ಲಿಡಲು ಸಹಾಯ ಮಾಡುತ್ತದೆ. ಇಲ್ಲದೇ ಹೋದರೆ ದೇಹದಲ್ಲಿ ನರಗಳು, ಜೀವಕೋಶಗಳು ಮತ್ತು ಸ್ನಾಯುಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ದೇಹವನ್ನು ಆರೋಗ್ಯವಾಗಿರಿಸಲು ಮೂತ್ರಪಿಂಡ ಆರೋಗ್ಯವಾಗಿರುವುದು ಬಹಳ ಮುಖ್ಯ. ನಮ್ಮ ಕೆಲವು ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯವನ್ನು ಹಾಳುಮಾಡಬಹುದು. ಹಾಗಾಗಿ ಆರೋಗ್ಯ ಸುಧಾರಣೆಗೆ ಮತ್ತು ಮೂತ್ರಪಿಂಡದ ಆರೋಗ್ಯಕ್ಕಾಗಿ ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

ನೋವು ನಿವಾರಕದ ಅತಿಯಾದ ಬಳಕೆ
ದೇಹದಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡರೆ ಸಾಕು ಜನರು ನೋವು ನಿವಾರಕ ಮಾತ್ರೆಗಳನ್ನು ನುಂಗುತ್ತಾರೆ. ಈ ನೋವು ನಿವಾರಕಗಳನ್ನು ಅತಿಯಾಗಿ ಸೇವಿಸುವುದರಿಂದ ಇದು ಮೂತ್ರಪಿಂಡಕ್ಕೆ ಹಾನಿಯುಂಟು ಮಾಡುತ್ತದೆ. ಮುಖ್ಯವಾಗಿ ಗಮನಿಸುವುದೆಂದರೆ, ಈಗಾಗಲೇ ನೀವು ಮೂತ್ರಪಿಂಡದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಯ ಮೇರೆಗೆ ಯಾವುದೇ ನೋವು ನಿವಾರಕ ಔಷಧಗಳನ್ನು ಪಡೆಯಿರಿ.

ಅತಿಯಾದ ಉಪ್ಪು ಬಳಕೆ
ನಿಮ್ಮ ಆಹಾರದಲ್ಲಿ ಅತಿಯಾದ ಉಪ್ಪು ಇದ್ದರೆ ಇದು ರಕ್ತದೊತ್ತಡ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಆಹಾರದಲ್ಲಿ ಉಪ್ಪನ್ನು ನಿಯಮಿತವಾಗಿ ಬಳಸಿ. ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗುತ್ತದೆ ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ನೆರವಾಗುತ್ತದೆ.

ಸಾಕಷ್ಟು ನಿದ್ರೆ ಮಾಡದಿರುವುದು
ಉತ್ತಮ ಆರೋಗ್ಯಕ್ಕಾಗಿ ಒಳ್ಳೆಯ ನಿದ್ರೆ ಬಹಳ ಮುಖ್ಯ. ಮೂತ್ರಪಿಂಡವನ್ನು ಆರೋಗ್ಯವಾಗಿಡಲು ಸಾಕಷ್ಟು ನಿದ್ರೆ ಮಾಡಿ. ಉತ್ತಮ ನಿದ್ರೆಯಿಂದ ಅದೆಷ್ಟೋ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

ಅಧಿಕ ಸಕ್ಕರೆಯ ಬಳಕೆ ಬೇಡ
ಅಧಿಕ ಪ್ರಮಾಣದಲ್ಲಿ ಸಕ್ಕರೆ ಪದಾರ್ಥಗಳನ್ನು ಸೇವಿಸುವುದರಿಂದ ಬೊಜ್ಜು ಹೆಚ್ಚುತ್ತದೆ. ಇದಲ್ಲದೇ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆ ಹೆಚ್ಚಾಗಬಹುದು. ಹಾಗಾಗಿ ನಿಯಮಿತವಾಗಿ ಸಕ್ಕರೆ ಅಂಶವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಧೂಮಪಾನದಿಂದ ದೂರವಿರಿ
ಧೂಮಪಾನ ಮತ್ತು ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಧೂಮಪಾನ ಮಾಡುವುದು ಮೂತ್ರಪಿಂಡದ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಧೂಮಪಾನ ಮತ್ತು ಮದ್ಯಪಾನ ಸೇವನೆ ರೂಢಿಯಲ್ಲಿದ್ದರೆ ಇಂದಿನಿಂದಲೇ ಬಿಟ್ಟುಬಿಡಿ.

ಇದನ್ನೂ ಓದಿ:

Health Tips: ತಲೆ ಕೂದಲು ನಿಮ್ಮ ಆರೋಗ್ಯದ ಬಗ್ಗೆ ಬಹಳಷ್ಟು ಹೇಳುತ್ತದೆ; ನಿರ್ಲಕ್ಷ್ಯ ವಹಿಸದಿರುವುದು ಒಳಿತು

Health Tips: ಮಧುಮೇಹಿಗಳು ಸೇವಿಸಬಹುದಾದ ಹಣ್ಣುಗಳಿವು

Published On - 2:57 pm, Sun, 10 October 21