Mental Health: ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಸಮಸ್ಯೆಗೆ ಪರಿಹಾರಗಳು ಇಲ್ಲಿವೆ

Health Care: ನೀವು ಮಾನಸಿಕ ಒತ್ತಡಕ್ಕೆ ಸಿಲುಕಿದ್ದರೆ, ಈ ಸಮಸ್ಯೆಯಿಂದ ಹೊರಬರಲು ಒದ್ದಾಡುತ್ತಿದ್ದರೆ ಈ ಕೆಲವು ಸಲಹೆಗಳು ನಿಮಗಾಗಿ. ಈ ಕೆಲವು ಸಲಹೆಗಳನ್ನು ಅನುಸರಿಸುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.

Mental Health: ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಸಮಸ್ಯೆಗೆ ಪರಿಹಾರಗಳು ಇಲ್ಲಿವೆ
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Oct 08, 2021 | 8:57 AM

ಇತ್ತಿಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೆಚ್ಚಿನ ಜನರು ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ತೊಂದರೆಗಳು, ಮಾನಸಿಕ ಒತ್ತಡ ಇತ್ಯಾದಿಗಳಿಂದ ಹೆಚ್ಚು ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜನರ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತಿವೆ. ಹಾಗಿರುವಾಗ ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದರೆ ಈ ಕೆಲವು ಸಲಹೆಗಳು ನಿಮಗಾಗಿ.

ಉತ್ತಮ ಆಹಾರ ಪದ್ಧತಿ ನಾವು ಪ್ರತಿನಿತ್ಯ ಪೌಷ್ಟಿಕಯುಕ್ತ ಆಹಾರವನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಹಿತಕರ. ಇದು ನಿಮ್ಮ ಆರೋಗ್ಯದ ಜತೆಗೆ ಮುಖ್ಯವಾಗಿ ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ. ಹಾಗೂ ಅನಗತ್ಯ ಆಲೋಚನೆಗಳಿಂದ ನಿಮ್ಮನ್ನು ದೂರವಿರಿಸುತ್ತದೆ. ಹಾಗಿರುವಾಗ ಖನಿಜಾಂಶಗಳು, ಪೋಷಕಾಂಶಗಳು ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ.

ಅತಿರೇಕವಾಗಿ ಯೋಚಿಸಬೇಡಿ ಕೆಲವು ವಿಷಯಗಳನ್ನು ಅತಿರೇಕವಾಗಿ ಯೋಚಿಸುವುದು ನಿಮ್ಮನ್ನು ಒತ್ತಡಕ್ಕೆ ಸಿಲುಕಿಸಬಹುದು. ಅನಗತ್ಯ ಯೋಚನೆಗಳಿಂದ ಆದಷ್ಟು ದೂರವಿರಿ. ಇದು ನಿಮ್ಮ ಮನಸ್ಸಿಗೆ ಹೆಚ್ಚು ಪರಿಣಾಮವನ್ನು ಬೀರುತ್ತವೆ. ಯಾವುದೇ ಒಂದು ವಿಷಯವನ್ನು ಅತಿಯಾಗಿ ಯೋಚಿಸುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚು ಕಾಡುತ್ತವೆ.

ಒಂಟಿತನದಿಂದ ದೂರವಿರಿ ಆದಷ್ಟು ಜನರೊಂದಿಗೆ ಬೆರೆಯುವ ಅಭ್ಯಾಸ ಮಾಡಿಕೊಳ್ಳಿ. ಒಂಟಿಯಾಗಿರುವುದರಿಂದ ನೀವು ಹೆಚ್ಚು ಯೋಚಿಸುತ್ತೀರಿ. ಜತೆಗೆ ಅನಗತ್ಯ ಯೋಚನೆಗಳು ನಿಮ್ಮನ್ನು ಹೆಚ್ಚು ಕಾಡುತ್ತವೆ. ಜನರೊಡನೆ ಹೆಚ್ಚು ಬೆರೆಯುವ ಅಭ್ಯಾಸ ಮಾಡಿಕೊಳ್ಳುವ ಮೂಲಕ ನೀವು ಅನಗತ್ಯ ಚಿಂತೆಗಳನ್ನು ದೂರಮಾಡಿಕೊಳ್ಳಬಹುದು. ಹೆಚ್ಚು ಖುಷಿಯಾಗಿರಬಹುದು. ಇದರಿಂದ ನಿಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ.

ಮದ್ಯಪಾನದಿಂದ ದೂರವಿರಿ ಮದ್ಯಪಾನ ಅಥವಾ ಧೂಮಪಾನ ಎಂದಿಗೂ ಆರೋಗ್ಯ ಒಳ್ಳೆಯದಲ್ಲ. ಇದು ನಿಮ್ಮ ಆರೋಗ್ಯವನ್ನು ಒತ್ತಡಕ್ಕೆ ಸಿಲುಕಿಸುತ್ತದೆ. ಜತೆಗೆ ಮಾನಸಿಕ ಒತ್ತಡವನ್ನು ಉಂಟು ಮಾಡುತ್ತದೆ. ಜತೆಗೆ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ಬಹುಬೇಗ ಕುಂಠಿತಗೊಳ್ಳುತ್ತದೆ. ಹಾಗಾಗಿ ಆದಷ್ಟು ಮದ್ಯಪಾನದಿಂದ ದೂರವಿರಿ.

ವ್ಯಾಯಾಮ ಅಭ್ಯಾಸವನ್ನು ಪ್ರತಿನಿತ್ಯ ಮಾಡಿ ಪ್ರತಿದಿನ ವ್ಯಾಯಾಮ ಅಭ್ಯಾಸಗಳನ್ನು ಮಾಡುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಬೆಳಿಗ್ಗೆ ಎದ್ದು ವಾಕಿಂಗ್, ಜಾಗಿಂಗ್ ಅಥವಾ ಧ್ಯಾನದಲ್ಲಿ ತೊಡಗಿಕೊಳ್ಳಿ. ಇಲ್ಲವೇ ಯೋಗಾಸನಗಳನ್ನು ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಮಧುಮೇಹಿಗಳು ಸೇವಿಸಬಹುದಾದ ಹಣ್ಣುಗಳಿವು

Health Tips: ಈ 5 ರೋಗ ಲಕ್ಷಣಗಳು ಶ್ವಾಸಕೋಶ ಕಾಯಿಲೆಯ ಎಚ್ಚರದ ಗಂಟೆ, ಎಂದಿಗೂ ನಿರ್ಲಕ್ಷಿಸಬೇಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್