Turmeric Coffee: ನಿತ್ಯ ಅರಿಶಿನ ಕಾಫಿ ಕುಡಿಯಿರಿ ಈ ಅದ್ಭುತ ಆರೋಗ್ಯ ಪ್ರಯೋಜನಗಳ ಪಡೆಯಿರಿ

ಜಾಸ್ತಿ ಕಾಫಿ ಕುಡಿಬೇಡಿ ಆರೋಗ್ಯ ಹಾಳಾದೀತು, ದೇಹದಲ್ಲಿ ಉಷ್ಣ ಹೆಚ್ಚಾಗುತ್ತೆ ಅಂತೆಲ್ಲಾ ಹೇಳಿರೋದು ನೀವು ಕೇಳಿರ್ತೀರ. ಆದರೆ ಅರಿಶಿನ ಕಾಫಿ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ.

Turmeric Coffee: ನಿತ್ಯ ಅರಿಶಿನ ಕಾಫಿ ಕುಡಿಯಿರಿ ಈ ಅದ್ಭುತ ಆರೋಗ್ಯ ಪ್ರಯೋಜನಗಳ ಪಡೆಯಿರಿ
Turmeric Coffee
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 31, 2022 | 9:55 AM

ಜಾಸ್ತಿ ಕಾಫಿ ಕುಡಿಬೇಡಿ ಆರೋಗ್ಯ ಹಾಳಾದೀತು, ದೇಹದಲ್ಲಿ ಉಷ್ಣ ಹೆಚ್ಚಾಗುತ್ತೆ ಅಂತೆಲ್ಲಾ ಹೇಳಿರೋದು ನೀವು ಕೇಳಿರ್ತೀರ. ಆದರೆ ಅರಿಶಿನ ಕಾಫಿ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ.ಇದು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ನಿವಾರಕಗಳಿಂದ ಸಮೃದ್ಧವಾಗಿದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗುಣಗಳು ಯಕೃತ್ತನ್ನು ನಿರ್ವಿಷಗೊಳಿಸುವ ಕೆಲಸ ಮಾಡುತ್ತದೆ. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆ ಪ್ರಕ್ರಿಯೆ ಸುಧಾರಿಸುತ್ತದೆ. ಇದರೊಂದಿಗೆ ದೇಹವನ್ನು ಹಲವು ರೀತಿಯ ಸಮಸ್ಯೆಗಳಿಂದ ರಕ್ಷಿಸುತ್ತದೆ.

ಅರಿಶಿನ ಕಾಫಿ ಮಾಡುವುದು ಹೇಗೆ

ನೀವು ಅರಿಶಿನ ಕಾಫಿ ಮಾಡಲು ಬಯಸಿದರೆ, ಮೊದಲು ಕಾಫಿ ಪೌಡರ್​ಗೆ ಸ್ವಲ್ಪ ಹಾಲು ಸೇರಿಸಿ ಬಿಸಿ ಮಾಡಿಕೊಳ್ಳಿ ನಂತರ ಅದಕ್ಕೆ ಅರಿಶಿನವನ್ನು ಬೆರೆಸಿ. ಈಗ ನೀವು ಈ ಕಾಫಿಯನ್ನು ಆರಾಮವಾಗಿ ಕುಡಿಯಬಹುದು, ಇದು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

ಆ್ಯಸಿಡಿಟಿ ಸಮಸ್ಯೆ ಕಡಿಮೆಯಾಗುತ್ತದೆ

ಅರಿಶಿನ ಕಾಫಿ ಆಮ್ಲೀಯತೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡುತ್ತದೆ. ಇದು ಆಮ್ಲೀಯ pH ಅನ್ನು ದುರ್ಬಲಗೊಳಿಸುತ್ತದೆ ಮತ್ತು ಆಮ್ಲೀಯತೆಯ ಸಮಸ್ಯೆಯನ್ನು ಶಾಶ್ವತವಾಗಿ ತೆಗೆದುಹಾಕುತ್ತದೆ. ಅರಿಶಿನದಲ್ಲಿರುವ ಕರ್ಕ್ಯುಮಿನ್ ಅನ್ನು ನಿಯಂತ್ರಿಸುತ್ತದೆ. ಈ ಕಾರಣದಿಂದಾಗಿ, ದೇಹವು ಅರಿಶಿನದ ಪ್ರಯೋಜನಗಳನ್ನು ನೇರವಾಗಿ ಪಡೆಯಬಹುದು.

ಉರಿಯೂತವನ್ನು ಕಡಿಮೆ ಮಾಡುತ್ತದೆ

ಅರಿಶಿನದ ಕಾಫಿ ಕೂಡ ಹೊಟ್ಟೆಯ ಊತವನ್ನು ಕಡಿಮೆ ಮಾಡುತ್ತದೆ. ವಾಸ್ತವವಾಗಿ, ಕರ್ಕ್ಯುಮಿನ್ ಹೊಟ್ಟೆಯ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಜೀರ್ಣಕ್ರಿಯೆಯನ್ನು ಗುಣಪಡಿಸುತ್ತದೆ.ಇದರ ಜೊತೆಗೆ, ಇದು ಅನೇಕ ಇತರ ಕಾಯಿಲೆಗಳನ್ನು ಸಹ ತೊಡೆದುಹಾಕುತ್ತದೆ. ಕಾಫಿಯಲ್ಲಿರುವ ಉರಿಯೂತ ನಿವಾರಕ ಗುಣಗಳು ಮೂಳೆಗಳು ಮತ್ತು ಕೀಲುಗಳ ಸಮಸ್ಯೆಗಳನ್ನು ಕಡಿಮೆ ಮಾಡಲು ಬಹಳಷ್ಟು ಸಹಾಯ ಮಾಡುತ್ತದೆ. ಮೂಳೆ ಅಥವಾ ಕೀಲುಗಳಲ್ಲಿ ನೋವು ಇರುವವರು ಕಾಫಿ ಕುಡಿಯಬೇಕು.

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

ಅರಿಶಿನ ಕಾಫಿಯನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಅನೇಕ ರೀತಿಯ ಸೋಂಕುಗಳನ್ನು ತಡೆಯುತ್ತದೆ. ಈ ಎಲ್ಲಾ ಪ್ರಯೋಜನಗಳಿಗೆ ಅರಿಶಿನ ಕಾಫಿ ತುಂಬಾ ಸಹಾಯಕವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 am, Sat, 31 December 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ