ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸಲು ಈ ಆಹಾರ ಪದಾರ್ಥಗಳನ್ನು ಸೇವಿಸಿ

ನೀವು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಹೊಂದಲು ನಿಯಮಿತವಾದ ಆಹಾರ ಸೇವಿಸಿ ಮತ್ತು ಈ ಕೆಲವು ಆಹಾರ ಪದಾರ್ಥಗಳ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಬಹುದಾಗಿದೆ.

ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸಲು ಈ ಆಹಾರ ಪದಾರ್ಥಗಳನ್ನು ಸೇವಿಸಿ
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Nov 29, 2021 | 8:14 AM

ಮದುವೆ ಸಮಯದಲ್ಲಿ ಜನರು ತಮ್ಮ ಆಹಾರವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಒಂದೇ ದಿನ ಅತಿಯಾಗಿ ಸೇವಿಸುವುದು ಮತ್ತು ಅತಿಯಾಗಿ ಸಿಹಿ ತಿನ್ನುವುದು ಆರೋಗ್ಯವನ್ನು ಹಾನಿಗೊಳಿಸುತ್ತದೆ. ಹೀಗಿರುವಾಗ ನೀವು ಜೀರ್ಣಾಂಗ ವ್ಯವಸ್ಥೆಯನ್ನು ಯಾವಾಗಲೂ ಆರೋಗ್ಯಕರವಾಗಿರಿಸಿಕೊಳ್ಳಿ. ನೀವು ನಿಯಮಿತವಾದ ಆಹಾರ ಸೇವನೆಯಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಕಡುಬು ಕಜ್ಜಾಯ ಎನ್ನುತ್ತಾ ಹಬ್ಬ ಹರಿದಿನಗಳಲ್ಲಿ- ಮದುವೆ ಸಮಾರಂಭಗಳಲ್ಲಿ ಆಹಾರವನ್ನು ಹೆಚ್ಚು ಸೇವಿಸುತ್ತೇವೆ. ಅದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಬಹುದು. ಹೀಗಿರುವಾಗ ನೀವು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಹೊಂದಲು ನಿಯಮಿತವಾದ ಆಹಾರ ಸೇವಿಸಿ ಮತ್ತು ಈ ಕೆಲವು ಆಹಾರ ಪದಾರ್ಥಗಳ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸಲು ಈ ಆಹಾರ ಪದಾರ್ಥಗಳನ್ನು ಸೇವಿಸಿ: ಮದುವೆಯ ಸೀಸನ್​ಗಳಲ್ಲಿ ಅತಿಯಾದ ಆಹಾರ ವ್ಯವಸ್ಥೆ ಮತ್ತು ಹೆಚ್ಚು ಸಿಹಿ ಸೇವಿಸುವುದು ಹೆಚ್ಚು ಕ್ಯಾಲೊರಿಯನ್ನು ಮತ್ತು ಜೀರ್ಣಕ್ರಿಯೆಯ ಮೇಲೆ ಒತ್ತಡವನ್ನು ಉಂಟು ಮಾಡುತ್ತದೆ. ಎಣ್ಣೆಯಲ್ಲಿ ಕರಿದ ಪದಾರ್ಥಗಳು ಮತ್ತು ಮಸಾಲೆಯುಕ್ತ ಆಹಾರದ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಹಾನಿಗೊಳಗಾಗಬಹುದು. ಹೀಗಿರುವಾಗ ನಿಮ್ಮ ಆಹಾರದಲ್ಲಿ ಈ 3 ಪದಾರ್ಥಗಳು ಸೇರಿರಲಿ.

ಮೆಂತ್ಯೆ ಮೆಂತ್ಯೆ ಬೀಜಗಳು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಿರುವಾಗ ಮೆಂತ್ಯೆ ಸೇವನೆಯ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ಮಲಬದ್ಧತೆ ಸಮಸ್ಯೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಜೊತೆಗೆ ಮೆಂತ್ಯೆ ಮಜ್ಜಿಗೆ ಸೇವಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಮಜ್ಜಿಗೆ ಊಟದ ನಂತರ ಮಜ್ಜಿಗೆ ಮತ್ತು ಉಪ್ಪು ಮಿಶ್ರಣ ಮಾಡಿ ಸೇವಿಸುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ. ಮಜ್ಜಿಗೆ ಮತ್ತು ಉಪ್ಪು ವಿಟಮಿನ್​ ಬಿ12 ಮತ್ತು ಪ್ರೋಬಯಾಟಿಕ್​ಗಳ ಉತ್ತಮ ಮೂಲವಾಗಿದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನೀವು ಇಂಗು, ಮಜ್ಜಿಗೆ ಮತ್ತು ಉಪ್ಪನ್ನು ಮಿಶ್ರಣ ಮಾಡಿ ಸೇವಿಸುವುದರಿಂದ ಆರೋಗ್ಯ ಸುಧಾರಣೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಬಿಸಿ ನೀರು ನೀವು ಆಗಾಗ ಬಿಸಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಚಳಿಗಾಲದ ಈ ಸಮಯದಲ್ಲಿ ನೀವು ಬೆಚ್ಚಗಿರುವಂತೆ ಮಾಡಲು ಬಿಸಿನೀರು ಸಹಾಯಕ ಜೊತೆಗೆ ನಿಮ್ಮ ಜೀರ್ಣಾಂಗ ವ್ಯವಸ್ಥೆ ಸುಧಾರಣೆಗೆ ಸಹಾಯ ಮಾಡುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ. ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ನಿಮ್ಮ ಆರೋಗ್ಯದಲ್ಲಿ ಏನೇ ವ್ಯತ್ಯಾಸ ಉಂಟಾದರೂ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಿ. ತಜ್ಞರ ಸಲಹೆಯ ಮೇರಗೆ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Care: ಮಕ್ಕಳಲ್ಲಿ ತಲೆನೋವಿನ ಸಮಸ್ಯೆ ಇದ್ದರೆ ಈ ಸಲಹೆಗಳನ್ನು ಪಾಲಿಸಿ

Health tips: ಚಳಿಗಾಲದಲ್ಲಿ ಶೀತದ ಸಮಸ್ಯೆಯಿಂದ ದೂರ ಇರಲು ಈ 5 ವಿಧಾನಗಳನ್ನು ಅನುಸರಿಸಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್