AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits: ಈ ಕೆಲವು ಆಯುರ್ವೇದ ಗಿಡಮೂಲಿಕೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಬೆನ್ನು ನೋವು, ತಲೆನೋವು, ಶೀತ, ಕೆಮ್ಮು, ಆಯಾಸದಂತಹ ಕೆಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಕೆಲವು ಗಿಡಮೂಲಿಕೆಗಳು ಸಹಾಯ ಮಾಡುತ್ತವೆ. ಅವು ಯಾವುವು ಎಂಬುದನ್ನು ತಿಳಿದುಕೊಳ್ಳಿ.

Health Benefits: ಈ ಕೆಲವು ಆಯುರ್ವೇದ ಗಿಡಮೂಲಿಕೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Oct 14, 2021 | 9:29 AM

Share

ವರ್ಕ್​ ಫ್ರಂ ಹೋಮ್​ ವ್ಯವಸ್ಥೆಯಿಂದಾಗಿ ಒಂದೇ ಸ್ಥಳದಲ್ಲಿ ಕುಳಿತುಕೊಂಡಿರುವುದು, ಯಾವುದೇ ದೈಹಿಕ ಚಟುವಟಿಕೆಯಿಲ್ಲದಿರುವುದು, ಈ ಸಮಯದಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾನಿಗೊಳಗಾಗಬಹುದು. ಈ ಕಾರಣದಿಂದಾಗಿ ಬೆನ್ನು ನೋವು, ತಲೆನೋವು, ಶೀತ, ಕೆಮ್ಮು, ಆಯಾಸದಂತಹ ಕೆಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ನಾವು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಲೇ ಇರುತ್ತೇವೆ. ಹೀಗೆ ಮಾಡುವುದರಿಂದ ಕೆಲವು ಗಂಭೀರ ಸಮಸ್ಯೆಗಳು ಉಂಟಾಗಬಹುದು. ಹಾಗಿರುವಾಗ ಈ ಕೆಲವು ಗಿಡಮೂಲಿಕೆಗಳು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಅವು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ನೆಲ್ಲಿಕಾಯಿ ಆಮ್ಲಾ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಜತೆಗೆ ನಿಮ್ಮ ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಮ್ಮ ದೃಷ್ಟಿ ಸುಧಾರಿಸಲು ಸಹಾಯಕವಾಗಿದೆ. ಆಮ್ಲಾ ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ. ಇದರಲ್ಲಿ ವಿಟಮಿನ್ ಸಿ ಇದ್ದು ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆಮ್ಲಾ ಲಿವರ್ ಆರೋಗ್ಯಕ್ಕೆ ತುಂಬಾ ಉತ್ತಮ. ಜತೆಗೆ ಜೀರ್ಣಕ್ರಿಯೆಗೆ ಸಹಾಯಕವಾಗಿದೆ.

ಏಲಕ್ಕಿ ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲಾ ಪದಾರ್ಥವಾಗಿ ಏಲಕ್ಕಿಯನ್ನು ಬಳಸಲಾಗುತ್ತದೆ. ಇದು ಸಾಮಾನ್ಯ ಕೆಮ್ಮು, ನೆಗಡಿ ಸಮಸ್ಯೆ ನಿವಾರಿಸಲು ಸಹಾಯಕಾರಿ. ಏಲಕ್ಕಿ ಎಣ್ಣೆಯು ಬ್ಯಾಕ್ಟೀರಿಯಾ ನಾಶಪಡಿಸಲು ಸಹಾಯಕವಾಗಿದೆ. ದೈನಂದಿನ ಆಹಾರ ಪದ್ಧತಿಯಲ್ಲಿ ಏಲಕ್ಕಿ ಸೇವನೆಯು ನಿಮ್ಮ ಹೃದಯದ ಕಾರ್ಯವನ್ನು ಸುಧಾರಿಸಲು ಸಹಾಯಕವಾಗಿದೆ.

ಅರಿಶಿಣ ಅರಿಶಿಣ ಉಪಯೋಗದಿಂದ ಕೀಲು ನೋವು, ಊತ, ತಲೆನೋವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ. ಜ್ವರ ಕಾಡುತ್ತಿರುವ ಸಂದರ್ಭದಲ್ಲಿ ಅರಿಶಿಣ ಹಾಲು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ. ಚರ್ಮದ ಅಲರ್ಜಿ ಅಥವಾ ಇನ್ನಿತರ ಸಮಸ್ಯೆಗಳಿದ್ದರೆ ಅರಿಶಿಣ ಬಳಸುವ ಮೂಲಕ ಬಹುಬೇಗ ಪರಿಹಾರ ಕಂಡುಕೊಳ್ಳಬಹುದಾಗಿದೆ.

ದಾಲ್ಚಿನ್ನಿ ದಾಲ್ಚಿನ್ನಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚಯಾಪಚಯ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಕೆಲವು ಗಿಡಮೂಲಿಕೆಗಳನ್ನು ಸೇರಿಸುವ ಮೂಲಕ ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

Health Tips: ಬೆಳಿಗ್ಗೆ ವಾಕಿಂಗ್ ಮಾಡುವಾಗ ಮೊಬೈಲ್ ಬಳಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

Health Tips: ಪ್ರತಿನಿತ್ಯ ನೀವು ಮಾಡುವ ಈ ಕೆಲವು ತಪ್ಪುಗಳು ನಿಮ್ಮ ಆರೋಗ್ಯವನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?