Health Benefits: ಈ ಕೆಲವು ಆಯುರ್ವೇದ ಗಿಡಮೂಲಿಕೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

| Updated By: shruti hegde

Updated on: Oct 14, 2021 | 9:29 AM

ಬೆನ್ನು ನೋವು, ತಲೆನೋವು, ಶೀತ, ಕೆಮ್ಮು, ಆಯಾಸದಂತಹ ಕೆಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಕೆಲವು ಗಿಡಮೂಲಿಕೆಗಳು ಸಹಾಯ ಮಾಡುತ್ತವೆ. ಅವು ಯಾವುವು ಎಂಬುದನ್ನು ತಿಳಿದುಕೊಳ್ಳಿ.

Health Benefits: ಈ ಕೆಲವು ಆಯುರ್ವೇದ ಗಿಡಮೂಲಿಕೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
ಸಂಗ್ರಹ ಚಿತ್ರ
Follow us on

ವರ್ಕ್​ ಫ್ರಂ ಹೋಮ್​ ವ್ಯವಸ್ಥೆಯಿಂದಾಗಿ ಒಂದೇ ಸ್ಥಳದಲ್ಲಿ ಕುಳಿತುಕೊಂಡಿರುವುದು, ಯಾವುದೇ ದೈಹಿಕ ಚಟುವಟಿಕೆಯಿಲ್ಲದಿರುವುದು, ಈ ಸಮಯದಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾನಿಗೊಳಗಾಗಬಹುದು. ಈ ಕಾರಣದಿಂದಾಗಿ ಬೆನ್ನು ನೋವು, ತಲೆನೋವು, ಶೀತ, ಕೆಮ್ಮು, ಆಯಾಸದಂತಹ ಕೆಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ನಾವು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಲೇ ಇರುತ್ತೇವೆ. ಹೀಗೆ ಮಾಡುವುದರಿಂದ ಕೆಲವು ಗಂಭೀರ ಸಮಸ್ಯೆಗಳು ಉಂಟಾಗಬಹುದು. ಹಾಗಿರುವಾಗ ಈ ಕೆಲವು ಗಿಡಮೂಲಿಕೆಗಳು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಅವು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ನೆಲ್ಲಿಕಾಯಿ
ಆಮ್ಲಾ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಜತೆಗೆ ನಿಮ್ಮ ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಮ್ಮ ದೃಷ್ಟಿ ಸುಧಾರಿಸಲು ಸಹಾಯಕವಾಗಿದೆ. ಆಮ್ಲಾ ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ. ಇದರಲ್ಲಿ ವಿಟಮಿನ್ ಸಿ ಇದ್ದು ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆಮ್ಲಾ ಲಿವರ್ ಆರೋಗ್ಯಕ್ಕೆ ತುಂಬಾ ಉತ್ತಮ. ಜತೆಗೆ ಜೀರ್ಣಕ್ರಿಯೆಗೆ ಸಹಾಯಕವಾಗಿದೆ.

ಏಲಕ್ಕಿ
ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲಾ ಪದಾರ್ಥವಾಗಿ ಏಲಕ್ಕಿಯನ್ನು ಬಳಸಲಾಗುತ್ತದೆ. ಇದು ಸಾಮಾನ್ಯ ಕೆಮ್ಮು, ನೆಗಡಿ ಸಮಸ್ಯೆ ನಿವಾರಿಸಲು ಸಹಾಯಕಾರಿ. ಏಲಕ್ಕಿ ಎಣ್ಣೆಯು ಬ್ಯಾಕ್ಟೀರಿಯಾ ನಾಶಪಡಿಸಲು ಸಹಾಯಕವಾಗಿದೆ. ದೈನಂದಿನ ಆಹಾರ ಪದ್ಧತಿಯಲ್ಲಿ ಏಲಕ್ಕಿ ಸೇವನೆಯು ನಿಮ್ಮ ಹೃದಯದ ಕಾರ್ಯವನ್ನು ಸುಧಾರಿಸಲು ಸಹಾಯಕವಾಗಿದೆ.

ಅರಿಶಿಣ
ಅರಿಶಿಣ ಉಪಯೋಗದಿಂದ ಕೀಲು ನೋವು, ಊತ, ತಲೆನೋವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ. ಜ್ವರ ಕಾಡುತ್ತಿರುವ ಸಂದರ್ಭದಲ್ಲಿ ಅರಿಶಿಣ ಹಾಲು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ. ಚರ್ಮದ ಅಲರ್ಜಿ ಅಥವಾ ಇನ್ನಿತರ ಸಮಸ್ಯೆಗಳಿದ್ದರೆ ಅರಿಶಿಣ ಬಳಸುವ ಮೂಲಕ ಬಹುಬೇಗ ಪರಿಹಾರ ಕಂಡುಕೊಳ್ಳಬಹುದಾಗಿದೆ.

ದಾಲ್ಚಿನ್ನಿ
ದಾಲ್ಚಿನ್ನಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚಯಾಪಚಯ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಕೆಲವು ಗಿಡಮೂಲಿಕೆಗಳನ್ನು ಸೇರಿಸುವ ಮೂಲಕ ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

Health Tips: ಬೆಳಿಗ್ಗೆ ವಾಕಿಂಗ್ ಮಾಡುವಾಗ ಮೊಬೈಲ್ ಬಳಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

Health Tips: ಪ್ರತಿನಿತ್ಯ ನೀವು ಮಾಡುವ ಈ ಕೆಲವು ತಪ್ಪುಗಳು ನಿಮ್ಮ ಆರೋಗ್ಯವನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ!