AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 02, 2021 | 8:41 AM

Share

ಪ್ರಸ್ತುತ ಪರಿಸ್ಥಿತಿಯಲ್ಲಿ ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ದೇಹದಲ್ಲಿನ ವೈರಸ್​ಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ. ಹಾಗಾಗಿ ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ನೀರು ಕುಡಿಯುವುದು ನೀರನ್ನು ಹೆಚ್ಚು ಸೇವಿಸುವುದು ಮತ್ತು ಹೈಡ್ರೇಟ್ ಆಗಿರುವುದು ಆರೋಗ್ಯಕರ ಜೀವನಕ್ಕೆ ಮುಖ್ಯವಾಗಿದೆ. ಇದು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಇದು ದೇಹದಲ್ಲಿನ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸಲು ಸಹಾಯಕವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಹಸಿರು ತರಕಾರಿಗಳು ಯಾವಾಗಲೂ ಹಸಿರು ತರಕಾರಿಗಳ ಸೇವನೆ ಆರೋಗ್ಯಕ್ಕೆ ಉತ್ತಮ. ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಜೀವಸತ್ವಗಳು, ಖನಿಜಗಳು, ಫೈಬರ್, ಪ್ರೊಟೀನ್​ಗಳನ್ನು ನೀಡುತ್ತದೆ. ನಮ್ಮನ್ನು ಶಕ್ತಿಯುತವಾಗಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ಸಹಾಯಕವಾಗಿದೆ.

ಹಣ್ಣಿನ ರಸ ಸೇವನೆ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಮ್ಮ ಆಹಾರದಲ್ಲಿ ಅಗತ್ಯವಾದ ಪೌಷ್ಟಿಕಾಂಶವನ್ನು ಪಡೆಯಲು ಹಣ್ಣುಗಳು ಉತ್ತಮ ಮಾರ್ಗ. ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲವೇ ರುಚಿಯಾದ ಜ್ಯೂಸ್ ಸೇವನೆಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಗಿಡಮೂಲಿಕೆ ಕಷಾಯ ದಾಲ್ಚಿನ್ನಿ, ಜೀರಿಗೆ, ಅರಿಶಿಣ ಮತ್ತು ಅಡಿಗೆ ಮಸಾಲೆಗಳು ಯಾವಾಗಲೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರುಚಿಯ ಜತೆಗೆ ಗಿಡಮೂಲಿಕೆಗಳನ್ನು ಹಾಗೂ ಮಸಾಲೆಗಳನ್ನು ಔಷಧಿಯಾಗಿ ಬಳಸಬಹುದಾಗಿದೆ. ಸಾಂಕ್ರಾಮಿಕ ರೋಗ ಹರಡುತ್ತಿರುವ ಇಂತಹ ಸಮಯದಲ್ಲಿ ಗಿಡಮೂಲಿಕೆಗಳಿಂದ ತಯಾರಿಸಿದ ಕಷಾಯ ಆರೋಗ್ಯಕ್ಕೆ ಒಳ್ಳೆಯದು. ದೇಹದಲ್ಲಿ ಉರಿಯೂತ, ಬ್ಯಾಕ್ಟೀರಿಯಾ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

Health Tips: ಅಂಜೂರ ಹಣ್ಣು ಮತ್ತು ಹಾಲು ಸೇವನೆಯ ಆರೋಗ್ಯ ಪ್ರಯೋಜನಗಳು

(These 5 easy ways to increase immunity power check in kannada)

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ