Health Tips: ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಆರೋಗ್ಯ ಸುಧಾರಿಸಲು ಈ ಆಹಾರ ಪದಾರ್ಥಗಳು ಸಹಾಯಕ

ಕರುಳು ಅನಾರೋಗ್ಯವಾಗಿದ್ದರೆ ಹೊಟ್ಟೆ ಉಬ್ಬುವುದು, ಮಧುಮೇಹ, ಬೊಜ್ಜು, ಕಡಿಮೆ ಶಕ್ತಿ ಮತ್ತು ಮೊಡವೆಗಳಂಥಹ ಗಂಭೀರ ಸಮಸ್ಯೆಗಳು ಕಾಡುತ್ತವೆ. ಆರೊಗ್ಯಕರ ಸುಧಾರಣೆಗಾಗಿ ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳೊಂದಿಗೆ ಹೋರಾಡುವ ಸಾಮರ್ಥ್ಯ ನಿಮ್ಮ ದೇಹದಲ್ಲಿರಬೇಕು.

Health Tips: ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಆರೋಗ್ಯ ಸುಧಾರಿಸಲು ಈ ಆಹಾರ ಪದಾರ್ಥಗಳು ಸಹಾಯಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Jul 13, 2021 | 8:11 AM

ದೇಹದ ಎಲ್ಲಾ ಸಮಸ್ಯೆಗೆ ಮುಖ್ಯ ಕಾರಣ ಹೊಟ್ಟೆ. ನಿಮ್ಮ ಹೊಟ್ಟೆ ಆರೋಗ್ಯ ಚೆನ್ನಾಗಿದ್ದರೆ ಆರೋಗ್ಯ ಸುಧಾರಿಸುತ್ತದೆ. ಆಹಾರದಲ್ಲಿನ ಪೌಷ್ಟಿಕಾಂಶದ ಕೊರತೆ ನಿಮ್ಮ ಆರೋಗ್ಯವನ್ನು ಹದಗೆಡಸುತ್ತದೆ. ಅದರಲ್ಲಿಯೂ ಹೆಚ್ಚಿನ ಜನರು ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಾಗಿರುವಾಗ ನಿಮ್ಮ ಕರುಳಿನ ಸಮಸ್ಯೆಯನ್ನು ಸುಧಾರಿಸುವ ಕೆಲವು ಟಿಪ್ಸ್​ಗಳು ಇಲ್ಲಿವೆ. ಸಾಮಾನ್ಯವಾಗಿ ಕರುಳಿನ ಸಮಸ್ಯೆಯಿಂದಲೂ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಇದರಿಂದ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ. ಇದು ಹೊಟ್ಟೆ ನೋವಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯಿಂದ ದೇಹದ ತೂಕ ಕಳೆದುಕೊಳ್ಳುವುದು ಹೆಚ್ಚು. ಹಾಗಾಗಿ ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸುವತ್ತ ಹೆಚ್ಚು ಗಮನವಿರಲಿ.

ಕರುಳು ಅನಾರೋಗ್ಯವಾಗಿದ್ದರೆ ಹೊಟ್ಟೆ ಉಬ್ಬುವುದು, ಮಧುಮೇಹ, ಬೊಜ್ಜು, ಕಡಿಮೆ ಶಕ್ತಿ ಮತ್ತು ಮೊಡವೆಗಳಂಥಹ ಗಂಭೀರ ಸಮಸ್ಯೆಗಳು ಕಾಡುತ್ತವೆ. ಆರೊಗ್ಯಕರ ಸುಧಾರಣೆಗಾಗಿ ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳೊಂದಿಗೆ ಹೋರಾಡುವ ಸಾಮರ್ಥ್ಯ ನಿಮ್ಮ ದೇಹದಲ್ಲಿರಬೇಕು. ಇದು ಪೌಷ್ಟಿಕಯುಕ್ತ ಆಹಾರದೊಂದಿಗೆ ಸಿಗುತ್ತದೆ.

ಮೊಸರು ಮೊಸರು ಪ್ರೊಬಯಾಟ್ರಿಕ್​ ಆಹಾರವಾಗಿದೆ. ಇದು ನಿಮ್ಮ ದೇಹದಲ್ಲಿನ ಒಳ್ಳೆಯ ಬ್ಯಾಕ್ಟೀರಿಯಾದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜತೆಗೆ ದೇಹದಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಮಾವು ಮಾವಿನ ಹಣ್ಣು ಹೆಚ್ಚು ಫೈಬರ್​ ಅಂಶವನ್ನು ಹೊಂದಿದೆ. ಇದು ನಿಮ್ಮ ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳನ್ನು ಜೀವಂತವಾಗಿರಿಸುತ್ತದೆ. ನಿಮ್ಮ ಹೊಟ್ಟೆಯ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ದೇಹದಲ್ಲಿನ ಕೊಬ್ಬಿನ ನಿವಾರಣೆಗೆ ಸಹಾಯಕವಾಗಿದೆ. ಜತಗೆ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.

ತೆಂಗಿನ ಎಣ್ಣೆ ತೆಂಗಿನ ಎಣ್ಣೆಯಲ್ಲಿ ಕರುಳಿನ ಆರೋಗ್ಯವನ್ನು ಸುಧಾರಿಸುವ ಗುಣಗಳಿವೆ. ಇದು ಆಂಟಿ ಬ್ಯಾಕ್ಟೀರಿಯಾಗಳನ್ನು ಹೊಂದಿದೆ. ಇದು ನಿಮ್ಮಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ. ಕರುಳಿನ ಆರೋಗ್ಯವನ್ನು ಸುಧಾರಿಸಲು ನೆರವಾಗುತ್ತದೆ.

ಬೆಳ್ಳುಳ್ಳಿ ಬೆಳ್ಳುಳ್ಳಿ ಆಂಟಿಬ್ಯಾಕ್ಟೀರಿಯಲ್​ ಮತ್ತು ಆಂಟಿಮೈಕ್ರೊಬಿಯಲ್​ ಗುಣಗಳನ್ನು ಹೊಂದಿದೆ. ಇದು ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗಿದೆ. ನಿಮ್ಮ ಕರುಳಿನ ಆರೋಗ್ಯಕರ ಬ್ಯಾಕ್ಟೀರಿಯಾಗಳನ್ನು ಉತ್ಪಾದಿಸಲು ಸಹಾಯಕವಾಗಿದೆ. ಇದರಿಂದ ಜೀರ್ಣಕ್ರಿಯೆ ವ್ಯವಸ್ಥೆ ಸುದಾರಿಸುತ್ತದೆ.

ಇದನ್ನೂ ಓದಿ:

Health Benefits: ಗ್ಯಾಸ್ಟಿಕ್​ನಿಂದಲೇ ಎದೆ ನೋವು ಕಾಣಿಸಿಕೊಂಡಿದೆ ಎಂದು ನಿರ್ಲಕ್ಷ್ಯ ವಹಿಸುವ ಮುನ್ನ, ನೋವಿನ ಲಕ್ಷಣಗಳ ಬಗ್ಗೆ ತಿಳಿಯುವುದು ಸೂಕ್ತ

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ