ಮಧುಮೇಹ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಕೆಲವು ಬದಲಾವಣೆ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಯ ಮೂಲಕ ಅರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಹೀಗಿರುವಾಗ ನೀವು ತರಕಾರಿಗಳು, ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಅಂದಹಾಗೆ ಮಧುಮೇಹ ಸಮಸ್ಯೆ ಇರುವವರು ಸೇವಿಸಬಹುದಾದ ಆಹಾರ ಪದಾರ್ಥಗಳು ಯಾವುವು ಎಂಬುದು ಈ ಕೆಳಗಿನಂತಿದೆ ತಿಳಿಯೋಣ. ಇವು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತವೆ.
ಮಧುಮೇಹವು ದೇಹದಲ್ಲಿ ಇನ್ಸುಲಿನ್ ನಿರೋಧಕವಾಗಿರುವ ಸ್ಥಿತಿಯನ್ನು ಸೂಚಿಸುತ್ತದೆ. ಮಧುಮೇಹ ಸಮಸ್ಯೆ ಇರುವವರಿಗೆ ಕಡಿಮೆ ಕಾರ್ಬೋಹೈಡ್ರೇಟ್, ಹೆಚ್ಚಿನ ಪ್ರೋಟೀನ್ ಮತ್ತು ಹೆಚ್ಚಿನ ಫೈಬರ್ ಆಹಾರವನ್ನು ಅನುಸರಿಸುವುದರ ಜೊತೆಗೆ ದೇಹದ ತೂಕವನ್ನು ನಿಯಂತ್ರಣದಲ್ಲಿಡಲು ಯೋಗ್ಯವಾದ ವ್ಯಾಯಾಮವನ್ನು ಮಾಡುವುದು ಒಳ್ಳೆಯದು. ಹಾಗಿರುವಾಗ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಸೇವಿಸಬಹುದಾದ ಕೆಲವು ಆಹಾರ ಪದಾರ್ಥಗಳು ಈ ಕೆಳಗಿನಂತಿದೆ.
ಎಲೆಕೋಸು
ಎಲೆಕೋಸು ಫೈಬರ್ ಅಂಶದಿಂದ ಸಮೃದ್ಧವಾಗಿರುತ್ತದೆ. ಜೊತೆಗೆ ವಿಟಮಿನ್ ಕೆ ಅಂಶದಿಂದ ಸಮೃದ್ಧವಾಗಿರುವ ಆಹಾರ ಪದಾರ್ಥವಾಗಿದೆ. ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ.
ಹೂಕೋಸು
ಇದು ಗ್ಲೊಕೋಸಿನೋಲೆಟ್ಗಳು ಮತ್ತು ಐಸೋಥಿಯೋಸೈನೇಟ್ಗಳಂಥಹ ಉತ್ಕರ್ಷಣ ನಿರೋಧಕಗಳ ಸಮೃದ್ಧ ಮೂಲವಾಗಿದೆ. ಇದು ಮೆದುಳಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಜೊತೆಗೆ ನರಗಳ ಆರೋಗ್ಯವನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗಾಗಿ ನಿಮ್ಮ ಅಡುಗೆಯಲ್ಲಿ ನೀವು ಹೂಕೋಸನ್ನು ಸೇರಿಸಿ.
ಟೊಮ್ಯಾಟೊ
ಫೈಬರ್ ಅಂಶದಿಂದ ಸಮೃದ್ಧವಾಗಿರುವ ಟೊಮ್ಯಾಟೊದಲ್ಲಿ ಲೈಕೋಪೀನ್ ಮತ್ತಿ ವಿಟಮಿನ್ ಸಿ ಅಂಶ ಕಂಡು ಬರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಟೊಮ್ಯಾಟೊ ಪೊಟ್ಯಾಶಿಯಮ್ ಅಂಶದ ಉತ್ತಮ ಮೂಲವಾಗಿದೆ. ಇದು ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಆದಾಗ್ಯೂ ಮೂತ್ರಪಿಂಡದ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ವೈದ್ಯರ ಸಮಹೆಯ ಬಳಿಕ ಟೊಮ್ಯಾಟೊ ಸೇವಿಸಿ.
ಬೆಂಡೆಕಾಯಿ
ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ಫೋಲಿಕ್ ಆಮ್ಲ, ಕ್ಯಾರೊಟಿನಾಯ್ಡ್ಗಳು ಮತ್ತು ಮೆಗ್ನೀಶಿಯಮ್ ಸಮೃದ್ಧ ಮೂಲವಾಗಿದೆ. ಬೆಂಡೆಕಾಯಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬೆಂಡೆಕಾಯಿಯನ್ನು ಸೇವಿಸಿ.
ಇದನ್ನೂ ಓದಿ:
Health Tips: ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತೇ?
Health Tips: ಕೈ ಸೆಳೆತ ಸಮಸ್ಯೆ ಕಾಡುತ್ತಿದೆಯಾ? ಕಾರಣಗಳೇನು ಗೊತ್ತಾ?