High Blood Pressure: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ

High Blood Pressure:ಈ ಬದಲಾದ ಜೀವನಶೈಲಿಯಲ್ಲಿ ಅಧಿಕ ರಕ್ತದೊತ್ತಡ(  High Blood Pressure)ಎಂಬುದು ಸರ್ವೇ ಸಾಮಾನ್ಯವಾಗಿದೆ. ಆದರೆ ಅವುಗಳನ್ನು ನಿಯಂತ್ರಿಸುವುದು ಹೇಗೆ ಎಂಬ ಚಿಂತೆ ಎಲ್ಲರನ್ನು ಕಾಡುತ್ತಿದೆ. ಕೆಲವೊಂದು ಆಹಾರಗಳನ್ನು ನಿತ್ಯ ಸೇವಿಸುವುದರಿಂದ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಬಹುದಾಗಿದೆ.

High Blood Pressure: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ
ಅಧಿಕ ರಕ್ತದೊತ್ತಡ
Follow us
TV9 Web
| Updated By: ನಯನಾ ರಾಜೀವ್

Updated on: Jun 03, 2022 | 4:28 PM

ಈ ಬದಲಾದ ಜೀವನಶೈಲಿಯಲ್ಲಿ ಅಧಿಕ ರಕ್ತದೊತ್ತಡ(  High Blood Pressure)ಎಂಬುದು ಸರ್ವೇ ಸಾಮಾನ್ಯವಾಗಿದೆ. ಆದರೆ ಅವುಗಳನ್ನು ನಿಯಂತ್ರಿಸುವುದು ಹೇಗೆ ಎಂಬ ಚಿಂತೆ ಎಲ್ಲರನ್ನು ಕಾಡುತ್ತಿದೆ. ಕೆಲವೊಂದು ಆಹಾರಗಳನ್ನು ನಿತ್ಯ ಸೇವಿಸುವುದರಿಂದ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಬಹುದಾಗಿದೆ.

ಅಧಿಕ ರಕ್ತದೊತ್ತಡ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳವು ಮುಖ್ಯವಾಗಿ ಅತಿಯಾದ ಕೆಲಸದ ಒತ್ತಡ, ದೈಹಿಕ ಚಟುವಟಿಕೆ ಇಲ್ಲದಿರುವುದು, ಅಸಮತೋಲಿತ ಜೀವನಶೈಲಿಯಿಂದಾಗಿ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಇಂದಿನಿಂದಲೇ ಈ ಎಲ್ಲಾ ಅಂಶಗಳನ್ನು ಅಳವಡಿಸಿಕೊಳ್ಳುತ್ತೇವೆ ಎಂಬ ಪ್ರತಿಜ್ಞೆಯನ್ನು ಮಾಡಿದರೆ ನಿಮ್ಮ ರಕ್ತದೊತ್ತಡವು ನಿಯಂತ್ರಣದಲ್ಲಿರುತ್ತದೆ.

ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳನ್ನು ಸೇವಿಸಬೇಕು. ಅಲ್ಲದೆ, ಸ್ಯಾಚುರೇಟೆಡ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಭರಿತ ಆಹಾರವನ್ನು ತಪ್ಪಿಸಿ.

ಈ ಆಹಾರಗಳನ್ನು ನಿತ್ಯವೂ ಸೇವಿಸಿ ಹಸಿರು ಸೊಪ್ಪು ಮತ್ತು ತರಕಾರಿಗಳು ಹಸಿರು ತರಕಾರಿಗಳು ಹಾಗೂ ಸೊಪ್ಪಿನಲ್ಲಿ ಪೊಟ್ಯಾಶಿಯಂ, ಕ್ಯಾಲ್ಶಿಯಂ, ಆಂಟಿ ಆಕ್ಸಿಡೆಂಟ್ಸ್​ಗಳಿದ್ದು, ಅವುಗಳನ್ನು ನಿತ್ಯ ಸೇವಿಸುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದಾಗಿದೆ.

ಪೊಟ್ಯಾಶಿಯಂ ಭರಿತ ಆಹಾರಗಳು ನಿಮ್ಮ ಆಹಾರದಲ್ಲಿ ನೀವು ಪೊಟ್ಯಾಷಿಯಂ ಅಂಶವನ್ನು ಹೆಚ್ಚಿಸಿದಾಗ, ಇದು ರಕ್ತದೊತ್ತಡದ ಮೇಲೆ ಸೋಡಿಯಂನ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಒಣಗಿದ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.ಬಾಳೆಹಣ್ಣು, ಒಣದ್ರಾಕ್ಷಿ, ಆಫ್ರಿಕಾಟ್, ಬೀನ್ಸ್, ಬೇಳೆ, ಆಲೂಗೆಡ್ಡೆ ಮತ್ತು ಅವಕಾಡೊ ಗಳಂತಹ ತಾಜಾ ಹಣ್ಣುಗಳು ಮತ್ತು ತರಕಾರಿಗಳು ಪ್ರಮಾಣವನ್ನು ಹೆಚ್ಚಿಸುವ ಸುಲಭ ಮೂಲವಾಗಿವೆ.ಆದ್ದರಿಂದ ಪೊಟ್ಯಾಶಿಯಂ ಭರಿತ ಆಹಾರಗಳನ್ನು ನೀವು ಸೇವಿಸುವುದರಿಂದ ಇದು ಸೋಡಿಯಂನ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಬೀಟ್ರೋಟ್: ಬೀಟ್ರೋಟ್​ನಲ್ಲಿ ನೈಟ್ರಿಕ್ ಆಕ್ಸೈಡ್ ಪ್ರಮಾಣ ಹೆಚ್ಚಿದ್ದು, ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಬಹುದಾಗಿದೆ.

ಸೋಡಿಯಂ ಸೇವನೆಯನ್ನು ಕಡಿಮೆ ಮಾಡಿ

ತಜ್ಞರ ಪ್ರಕಾರ, ವಯಸ್ಕರಿಗೆ ದಿನಕ್ಕೆ 1500 ಮೀ ಗ್ರಾಂ ಅಥವಾ ಅದಕ್ಕಿಂತ ಕಡಿಮೆ ಸೋಡಿಯಂ ಸೇವನೆಯನ್ನು ಸೂಚಿಸಲಾಗುತ್ತದೆ. ಆದ್ದರಿಂದ ಸೋಡಿಯಂ ಸೇವನೆಯನ್ನು ಆದಷ್ಟು ಕಡಿಮೆ ಸೇವಿಸಲು ಪ್ರಯತ್ನಿಸಿ. ಇಡೀ ನಮ್ಮ ದೇಹವನ್ನು ಅನಾರೋಗ್ಯಕರವಾಗಿ ಮಾಡುವುದು ಅತಿಯಾದ ಉಪ್ಪಿನ ಸೇವನೆ. ಆದ್ದರಿಂದ ಆದಷ್ಟು ನಿಮ್ಮ ಆಹಾರಗಳಲ್ಲಿ ಕಡಿಮೆ ಪ್ರಮಾಣದ ಸೋಡಿಯಂ ಹೊಂದಲು ಪ್ರಯತ್ನಿಸಿ.

ನಿಮ್ಮ ದೈನಂದಿನ ಆಹಾರದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಸೇವನೆ ಮಾಡಬೇಡಿ. ಸೋಡಿಯಂನ ಒಂದು ಸಣ್ಣ ಕಡಿತವು ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ರಕ್ತದೊತ್ತಡವನ್ನು ಸಹ ಕಡಿಮೆ ಮಾಡುತ್ತದೆ ಎಂಬುದು ಸಾಬೀತಾಗಿದೆ.

ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡಿ ಆಲ್ಕೋಹಾಲ್ ಸೇವನೆಯನ್ನು ಮಿತಗೊಳಿಸಿ. ಅವಶ್ಯಕತೆಗಿಂತ ಹೆಚ್ಚಿನದನ್ನು ಸೇವಿಸಬೇಡಿ. ಮಿತವಾಗಿ ಸೇವಿಸುವುದರಿಂದ ಯಾವುದೇ ಕೆಟ್ಟ ಪರಿಣಾಮಗಳು ಸಂಭವಿಸುವುದಿಲ್ಲ. ಮಹಿಳೆಯರಿಗೆ ದಿನಕ್ಕೆ ಒಂದು ಪಾನೀಯ ಮತ್ತು ಪುರುಷರಿಗೆ ಎರಡು ಪಾನಿಯಗಳು ಸೂಕ್ತವಾಗಿದೆ. ಆದ್ದರಿಂದ ಯಾವುದನ್ನೇ ಆಗಲಿ ಅತಿಯಾಗಿ ಸೇವಿಸುವುದನ್ನು ತಪ್ಪಿಸಿ. ಅತಿಯಾದರೆ ಅಮೃತವೂ ವಿಷ ಎನ್ನುವ ಮಾತಿದೆ. ರಕ್ತದೊತ್ತಡದ ಸಮಯದಲ್ಲಿ ಕಡಿಮೆ ಆಲ್ಕೋಹಾಲ್ ಸೇವಿಸಿ. ಇದರಿಂದ ನಿಮ್ಮ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.

ಸಂಸ್ಕರಿಸಿದ ಆಹಾರವನ್ನು ತಪ್ಪಿಸಿ ಸಂಸ್ಕರಿಸಿದ ಆಹಾರಗಳು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡುತ್ತದೆ. ಈ ರೀತಿ ಸಂಸ್ಕರಿಸಿದ ಆಹಾರಗಳಲ್ಲಿ ಸೋಡಿಯಂ ನ ಪ್ರಮಾಣ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಆದ್ದರಿಂದ ಇತ್ತೀಚಿಗೆ, ಡಬ್ಲ್ಯೂ ಎಚ್ ಓ ಪ್ಯಾಕ್ ಮಾಡಿದ ಅಥವಾ ಸಂಸ್ಕರಿಸಿದ ಆಹಾರದ ಸೋಡಿಯಂ ಮಟ್ಟವನ್ನು ಕಡಿಮೆ ಮಾಡಿದೆ.

ಪ್ಯಾಕೇಜ್ ಮಾಡಲಾದ ಆಹಾರಗಳ ಮೂಲಕ ಅತಿಯಾದ ಸೋಡಿಯಂ ಸೇವನೆಯಿಂದ ಅಧಿಕ ರಕ್ತದೊತ್ತಡದಿಂದ ಅನೇಕ ಸಾವುಗಳು ಸಂಭವಿಸುತ್ತಿವೆ ಎಂದು ಕಂಡುಬಂದಿದೆ. ಆದ್ದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪ್ಯಾಕೇಜ್ ಮಾಡಿದ ಆಹಾರವನ್ನು ಸೇವಿಸದೇ ಇರುವುದು ಬಹಳ ಮುಖ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ