AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beetroot Juice Benefits: ಬೀಟ್ರೂಟ್ ಜ್ಯೂಸ್ ಕುಡಿದು ಈ ರೋಗಗಳಿಗೆ ಗುಡ್​ಬೈ ಹೇಳಿ

ನೈಸರ್ಗಿಕವಾಗಿ ದೊರೆಯುವ ತರಕಾರಿಗಳು ಹಾಗೂ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಸಹಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಎಲ್ಲಾ ಬಗೆಯ ಹಣ್ಣು, ಸೊಪ್ಪುಗಳು, ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ.

Beetroot Juice Benefits: ಬೀಟ್ರೂಟ್ ಜ್ಯೂಸ್ ಕುಡಿದು ಈ ರೋಗಗಳಿಗೆ ಗುಡ್​ಬೈ ಹೇಳಿ
Beetroot Juice
TV9 Web
| Edited By: |

Updated on: Jun 16, 2022 | 8:00 AM

Share

ನೈಸರ್ಗಿಕವಾಗಿ ದೊರೆಯುವ ತರಕಾರಿಗಳು ಹಾಗೂ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಸಹಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಎಲ್ಲಾ ಬಗೆಯ ಹಣ್ಣು, ಸೊಪ್ಪುಗಳು, ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡುವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ನಮಗೆ ಸಿಗುತ್ತವೆ. ಹಾಗೆಯೇ ಬೀಟ್ರೂಟ್(Beetroot) ಜ್ಯೂಸ್​ನಿಂದ ಹಲವು ಕಾಯಿಲೆಗಳು ಕೂಡ ಗುಣವಾಗಲಿದೆ.

ಪೋಷಕಾಂಶ ಹೆಚ್ಚು ಕ್ಯಾಲೊರಿ ಕಡಿಮೆ ಬೀಟ್ರೂಟ್​ನಲ್ಲಿ ಪೋಷಕಾಂಶ ಹೆಚ್ಚಿದ್ದು, ಕ್ಯಾಲೊರಿ ಕಡಿಮೆ ಇರಲಿದೆ. ವಿಟಮಿನ್ ಹಾಗೂ ಮಿನರಲ್ ಪ್ರಮಾಣ ಹೆಚ್ಚಿರಲಿದೆ. ಬೀಟ್ರೂಟ್​ನಲ್ಲಿರುವ ಅಂಶಗಳೇನು ಕ್ಯಾಲೊರಿ: 44 ಪ್ರೊಟೀನ್: 1.7 ಗ್ರಾಂ ಕೊಬ್ಬು: 0.2 ಗ್ರಾಂಗಳು ಫೈಬರ್: 2 ಗ್ರಾಂ ಕಾಪರ್: ಶೇ.8

ಬಿಪಿ ಸಮಸ್ಯೆ ರಕ್ತದಲ್ಲಿ ಎಂದೂ ಏರುಪೇರು ಉಂಟಾಗಬಾರದು, ಅದರಿಂದ ರಕ್ತದ ಒತ್ತಡದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ನಿರ್ಲಕ್ಷಿಸುತ್ತಾ ಹೋದರೆ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರಲಿದೆ. ಬಿಪಿ ಸಮಸ್ಯೆ ಇದ್ದವರು ವೈದ್ಯರು ನೀಡಿರುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ, ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಡಬಹುದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಪ್ರತಿದಿನ ಕೂಡ ಒಂದೊಂದು ಲೋಟ ಬೀಟ್‌ರೂಟ್ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಈ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಹುದು.

ಸಕ್ಕರೆ ಕಾಯಿಲೆ  ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆಯಾಗದಂತೆ, ನೋಡಿಕೊಳ್ಳುವ ಎಲ್ಲಾ ಲಕ್ಷಣಗಳು ಬೀಟ್ರೂಟ್‌ನಲ್ಲಿ ಅಡಗಿದೆ. ಬೀಟ್ರೂಟ್‌ನಲ್ಲಿ ಕಂಡು ಬರುವ ನೈಸರ್ಗಿಕ ಸಕ್ಕರೆ ಅಂಶ, ಈ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಸಕ್ಕರೆ ಕಾಯಿಲೆ ಎನ್ನುವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ, ಆದರೆ ಈ ಕಾಯಿಲೆ ಬಂದವರು, ಕಟ್ಟುನಿಟ್ಟಾದ ಆಹಾರ ಪದ್ಧತಿ, ವೈದ್ಯರ ಚಿಕಿತ್ಸೆ, ಮತ್ತು ವ್ಯಾಯಾಮ ಹಾಗೂ ಯೋಗಾಭ್ಯಾಸಗಳನ್ನು ಸರಿಯಾಗಿ ಅನುಸರಿಸಿ ಕೊಂಡು ಹೋದರೆ, ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

ರಕ್ತಹೀನತೆ ಸಮಸ್ಯೆಯಿರುವವರು ಕಬ್ಬಿಣದ ಅಂಶ ಎತೇಚ್ಚವಾಗಿರುವ ಬೀಟ್ರೂಟ್ ಅನ್ನು ದಿನನಿತ್ಯ ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರ ಜೊತೆಗೆ, ಬೀಟ್ರೂಟ್‌ ಜ್ಯೂಸ್ ಅನ್ನು ನಿಯಮಿತವಾಗಿ ದಿನಾ ಕುಡಿ ಯುತ್ತಾ ಬರುವುದರಿಂದ, ರಕ್ತಹೀನತೆ ಸಮಸ್ಯೆ ಕಡಿಮೆಯಾಗುತ್ತದೆ.

ನಮ್ಮ ದೇಹಕ್ಕೆ ಕಬ್ಬಿಣದ ಅಂಶದ ಕೊರತೆ ಉಂಟಾದಾಗ, ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಇರುತ್ತದೆ. ಈ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಿ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ ಸಾಮಾನ್ಯ ಮಾಹಿತಿ ಆಧರಿಸಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ