AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ

ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅತ್ಯವಶ್ಯಕ.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 01, 2021 | 8:23 AM

Share

ಪ್ರಸ್ತುತದಲ್ಲಿ ಹೃದಯಾಘಾತ ಸಮಸ್ಯೆ ಹೆಚ್ಚು ಕಂಡು ಬರುತ್ತಿದೆ. ಹೃದಯಾಘಾತ ಸಂಭವಿಸಲು ಅಧಿಕ ರಕ್ತದೊತ್ತಡವೂ ಸಹ ಒಂದು ಕಾರಣ. ಹೀಗಿರುವ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅತ್ಯವಶ್ಯಕ. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೀವು ಈ ಕೆಲವು ಗಿಡಮೂಲಿಕೆಗಳನ್ನು ಬಳಸಬಹುದು.

ಆಮ್ಲಾ ರಕ್ತದೊತ್ತಡವನ್ನು ನಿಯಂತ್ರಿಸಲು ಆಮ್ಲಾ ಉತ್ತಮ ಔಷಧವಾಗಿದೆ. ಇದರಲ್ಲಿ ವಿಟಮಿನ್ ಸಿ ಅಂಶವಿರುತ್ತದೆ. ಇದು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಮ್ಲಾವನ್ನು ನಿಮ್ಮ ಅಹಾರ ಪದ್ಧತಿಯಲ್ಲಿ ಇಂದಿನಿಂದಲೇ ಸೇರಿಸಿಕೊಳ್ಳಿ.

ಅಶ್ವಗಂಧ ಅಶ್ವಗಂಧವು ನೈಸರ್ಗಿಕ ಔಷಧೀಯ ಸಸ್ಯವಾಗಿದೆ. ಸಂಜೆಯ ವೇಳೆ ಚಹಾ ತಯಾರಿಸಿಕೊಂಡು ಇದನ್ನು ಸೇವಿಸಬಹುದು. ಅಶ್ವಗಂಧವು ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ ಬೆಳ್ಳುಳ್ಳಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬೆಳ್ಳುಳ್ಳಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಜೇನು ತುಪ್ಪ ನೀವು ಪ್ರತಿನಿತ್ಯ ಬೆಳಿಗ್ಗೆ ಜೇನು ತುಪ್ಪ ಸೇವಿಸುವ ಅಭ್ಯಾಸ ಮಾಡಿಕೊಳ್ಳಬಹುದು. ಉಗುರು ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪ ಸವಿಯುವ ಮೂಲಕ ನೀವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜೇನುತುಪ್ಪ ರಕ್ತದೊತ್ತಡ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ತುಳಸಿ ತುಳಸಿಯಲ್ಲಿ ಅಧಿಕ ರಕ್ತದೊತ್ತಡ ನಿಯಂತ್ರಿಸುವ ಶಕ್ತಿಯಿದೆ. ಜತೆಗೆ ನೆಗಡಿ, ಜ್ವರ, ಸಂಧಿವಾತ ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ತುಳಸಿಯನ್ನು ಬಳಸುತ್ತಾರೆ. ತುಳಸಿ ಎಲೆಗಳಿಂದ ತಯಾರಿಸಿದ ಚಹಾ ಸವಿಯುವ ಮೂಲಕ ನೀವು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ:

Health Tips: ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸಲು ರಾಗಿಯಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹಾಯಕ

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ 3 ಬಗೆಯ ಆರೋಗ್ಯಕರ ಪಾನೀಯಗಳು ಸಹಾಯಕ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ