AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Food: ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸುವ 8 ಸೂಪರ್‌ಫುಡ್‌ಗಳಿವು

ಆರೋಗ್ಯಕರವಾದ ಆಹಾರವನ್ನು ತಿನ್ನುವುದು ನಮ್ಮ ಯೋಗಕ್ಷೇಮಕ್ಕೆ ಮುಖ್ಯವಾಗಿದೆ. ಅದರಲ್ಲೂ ಮೆದುಳು ಚುರುಕಾಗಿ ಕಾರ್ಯ ನಿರ್ವಹಿಸಲು ನಾವು ಸೇವಿಸುವ ಆಹಾರ ಕೂಡ ಕಾರಣವಾಗುತ್ತದೆ. ಜ್ಞಾಪಕಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

Brain Food: ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸುವ 8 ಸೂಪರ್‌ಫುಡ್‌ಗಳಿವು
ಮೆದುಳಿನ ಆರೋಗ್ಯ
ಸುಷ್ಮಾ ಚಕ್ರೆ
|

Updated on: Feb 19, 2024 | 6:50 PM

Share

ಕೆಲವು ಆಹಾರಗಳು ನಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚಿಸುತ್ತವೆ. ನಮ್ಮ ದೈನಂದಿನ ಆಹಾರದಲ್ಲಿ ವಾಲ್​ನಟ್ಸ್, ಬಾದಾಮಿ ಮತ್ತು ಶೇಂಗಾದಂತಹ ನಟ್ಸ್, ಹಾಗೆಯೇ ಸೂರ್ಯಕಾಂತಿ ಮತ್ತು ಕುಂಬಳಕಾಯಿ ಸೀಡ್ಸ್, ಪ್ರೋಟೀನ್ ಮತ್ತು ಒಮೆಗಾ ಕೊಬ್ಬಿನಾಮ್ಲಗಳನ್ನು ಹೆಚ್ಚಾಗಿ ಹೊಂದಿರುವ ಆಹಾರಗಳನ್ನು ಸೇರಿಸಿಕೊಳ್ಳುವುದರಿಂದ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಪ್ರೋಟೀನ್ ಮೆದುಳಿನಲ್ಲಿ ಎರಡನೇ ಅತಿದೊಡ್ಡ ವಸ್ತುವಾಗಿದೆ. ಆದ್ದರಿಂದ ಪ್ರೋಟೀನ್ ಭರಿತ ಆಹಾರಗಳನ್ನು ಸೇವಿಸುವುದರಿಂದ ನಮ್ಮ ಮೆದುಳನ್ನು ಪೋಷಿಸಬಹುದಾಗಿದೆ.

ಬೆರಿ ಹಣ್ಣುಗಳು:

ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಬೆರಿ ಹಣ್ಣುಗಳು ಮೆಮೊರಿ, ಅರಿವಿನ ಕಾರ್ಯವನ್ನು ಸುಧಾರಿಸಲು ಮತ್ತು ಆಕ್ಸಿಡೇಟಿವ್ ಒತ್ತಡದಿಂದ ಮೆದುಳನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ಸಾಲ್ಮನ್:

ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಸಾಲ್ಮನ್ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. ಅರಿವಿನ ಕಾರ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ನೆನಪಿನ ಶಕ್ತಿ ಕಡಿಮೆಯಾಗುತ್ತಿದೆಯಾ?; ಮೆದುಳಿನ ಆರೋಗ್ಯ ಹೆಚ್ಚಿಸುವ 5 ಆಹಾರಗಳಿವು

ಅವಕಾಡೊ:

ಆರೋಗ್ಯಕರ ಕೊಬ್ಬುಗಳು ಮತ್ತು ವಿಟಮಿನ್‌ಗಳಿಂದ ತುಂಬಿರುವ ಆವಕಾಡೊಗಳು ರಕ್ತದ ಹರಿವನ್ನು ಸುಧಾರಿಸುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತವೆ.

ವಾಲ್​ನಟ್ಸ್:

ಒಮೆಗಾ-3 ಕೊಬ್ಬಿನಾಮ್ಲಗಳು, ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್‌ಗಳ ಪ್ರಮಾಣ ಅಧಿಕವಾಗಿರುವ ವಾಲ್‌ನಟ್‌ಗಳು ನೆನಪಿನ ಶಕ್ತಿಯನ್ನು ಸುಧಾರಿಸುವ ಮೂಲಕ ಮೆದುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ.

ಬ್ರೊಕೊಲಿ:

ಉತ್ಕರ್ಷಣ ನಿರೋಧಕಗಳು, ವಿಟಮಿನ್​ಗಳು ಮತ್ತು ಖನಿಜಗಳಿಂದ ತುಂಬಿರುವ ಬ್ರೊಕೊಲಿಯು ಉರಿಯೂತವನ್ನು ಕಡಿಮೆ ಮಾಡುವ ಮೂಲಕ, ಅರಿವಿನ ಕಾರ್ಯವನ್ನು ಸುಧಾರಿಸುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ.

ಡಾರ್ಕ್ ಚಾಕೊಲೇಟ್:

ಡಾರ್ಕ್ ಚಾಕೊಲೇಟ್ ಮೆದುಳಿಗೆ ರಕ್ತದ ಹರಿವನ್ನು ಸುಧಾರಿಸುತ್ತದೆ, ಅರಿವಿನ ಕಾರ್ಯವನ್ನು ಹೆಚ್ಚಿಸುತ್ತದೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Brain Health: ಟೂತ್​ಪೇಸ್ಟ್, ಲಿಪ್​ಸ್ಟಿಕ್​ನಿಂದಲೂ ಮೆದುಳಿನ ಆರೋಗ್ಯಕ್ಕೆ ಅಪಾಯ!

ಸೊಪ್ಪು:

ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುವ ಪಾಲಕ್ ಮತ್ತಿತರ ಸಒಪ್ಪುಗಳು ಉರಿಯೂತವನ್ನು ಕಡಿಮೆ ಮಾಡುವ ಮೂಲಕ, ಅರಿವಿನ ಕಾರ್ಯವನ್ನು ಸುಧಾರಿಸುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ.

ಅರಿಶಿನ:

ಅರಿಶಿನವು ಮೆಮೊರಿ, ಅರಿವಿನ ಕಾರ್ಯವನ್ನು ಸುಧಾರಿಸುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ ಮತ್ತು ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ