Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

ನಾವು ಪ್ರತಿನಿತ್ಯ ತೆಗೆದುಕೊಳ್ಳುವ ತರಕಾರಿ, ಹಣ್ಣು ಮತ್ತು ಇನ್ನಿತರ ಪದಾರ್ಥಗಳಲ್ಲಿ ರೋಗನಿರೋಧಕ ಶಕ್ತಿ ಮತ್ತು ಪೋಷಕಾಂಶಗಳು ಹೆಚ್ಚು ಇರುವಂತೆ ನೊಡಿಕೊಳ್ಳುವುದು ಅವಶ್ಯವಾಗಿದೆ. ಈ ರೀತಿಯ ಆಹಾರ ಸೇವನೆ ನಮ್ಮಲ್ಲಿ ಪ್ರತಿರಕ್ಷಣಾ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ.

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Jun 21, 2021 | 8:54 AM

ಆರೋಗ್ಯದ ಬಗ್ಗೆ ಎಷ್ಟು ಕಾಳಜಿವಹಿಸಿದರು ಪ್ರಸ್ತುತ ಕೊರೊನಾ ಕಾಲಗಟ್ಟದಲ್ಲಿ ಕಡಿಮೆಯೇ. ಹೀಗಾಗಿ ನಾವು ಸೇವಿಸುವ ಆಹಾರದ ಬಗೆಗೆ ಹೆಚ್ಚಿನ ಕಾಳಜಿ ಅಗತ್ಯ. ನಾವು ಪ್ರತಿನಿತ್ಯ ತೆಗೆದುಕೊಳ್ಳುವ ತರಕಾರಿ, ಹಣ್ಣು ಮತ್ತು ಇನ್ನಿತರ ಪದಾರ್ಥಗಳಲ್ಲಿ ರೋಗನಿರೋಧಕ ಶಕ್ತಿ ಮತ್ತು ಪೋಷಕಾಂಶಗಳು ಹೆಚ್ಚು ಇರುವಂತೆ ನೊಡಿಕೊಳ್ಳುವುದು ಅವಶ್ಯವಾಗಿದೆ. ಈ ರೀತಿಯ ಆಹಾರ ಸೇವನೆ ನಮ್ಮಲ್ಲಿ ಪ್ರತಿರಕ್ಷಣಾ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ ಪದಾರ್ಥಗಳು ಈ ಕೆಳಗಿನಂತಿವೆ.

1. ಮೊಟ್ಟೆ ಮೊಟ್ಟೆಗಳಲ್ಲಿ ವಿಟಮಿನ್ ಡಿ ಸಮೃದ್ಧವಾಗಿದೆ. ಇದು ನಿಮ್ಮ ಎಲುಬುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಕಾರಣಕ್ಕಾಗಿ ಮೊಟ್ಟೆಗಳನ್ನು ಅತ್ಯುತ್ತಮ ಆರೋಗ್ಯಕರ ಆಹಾರವೆಂದು ಪರಿಗಣಿಸಲಾಗುತ್ತದೆ. ಮೊಟ್ಟೆಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೋಲೇಟ್, ಕ್ಯಾಲ್ಸಿಯಂ, ರಂಜಕ, ಸೆಲೆನಿಯಮ್, ವಿಟಮಿನ್ ಎ, ವಿಟಮಿನ್ ಬಿ 5, ವಿಟಮಿನ್ ಬಿ 12, ವಿಟಮಿನ್ ಬಿ, ವಿಟಮಿನ್ ಇ, ವಿಟಮಿನ್ ಕೆ ಮತ್ತು ವಿಟಮಿನ್ ಬಿ 6 ಇರುತ್ತವೆ. ಮೊಟ್ಟೆಗಳು ದೇಹಕ್ಕೆ ಸ್ಯಾಚುರೇಟೆಡ್ ಪೋಷಕಾಂಶಗಳನ್ನು ಒದಗಿಸುತ್ತವೆ.

2. ಓಟ್ಸ್ ಪ್ರೋಟೀನ್‌ ಉತ್ತಮ ಮೂಲ ಓಟ್ಸ್​ ಆಗಿದೆ. ಇದು ನಿಮ್ಮ ದೇಹದಲ್ಲಿನ ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. 100 ಗ್ರಾಂ ಓಟ್ಸ್ 12 ಗ್ರಾಂ ಪ್ರೋಟೀನ್ ನೀಡುತ್ತದೆ. ಓಟ್ಸ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ತೂಕವನ್ನು ನಿಯಂತ್ರಿಸುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಓಟ್ಸ್ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಓಟ್ಸ್ ಗಿಂತ ಉತ್ತಮವಾದ ಉಪಹಾರವಿಲ್ಲ ಎಂಬ ಮಾತು ಕೂಡ ಇದೆ.

3. ಪಾಲಕ್ ಸೊಪ್ಪು ಬೆಳಗಿನ ಉಪಾಹಾರದ ಜತೆ ಪಾಲಕ್ ರಸವನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿ. ನಾವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಾಲಕ್ ರಸವನ್ನು ಕುಡಿಯಬಹುದು. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪಾಲಕ್​ನಲ್ಲಿ ಕ್ಯಾಲೋರಿಗಳು, ಪ್ರೋಟೀನ್, ಕಾರ್ಬೋಹೈಡ್ರೇಟ್‌ಗಳು ಮತ್ತು ಫೈಬರ್ ಇರುತ್ತದೆ. ಪಾಲಕ್​ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ರಂಜಕ, ಕ್ಲೋರಿನ್, ಕಬ್ಬಿಣ, ಜೀವಸತ್ವಗಳು ಎ, ಬಿ ಮತ್ತು ಸಿ ಸಮೃದ್ಧವಾಗಿದೆ. ವಿಶೇಷವೆಂದರೆ ಪಾಲಕ್ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

4. ಬ್ರೊಕೊಲಿ ಬ್ರೊಕೊಲಿ ಕಬ್ಬಿಣಾಂಶ, ವಿಟಮಿನ್ ಎ, ಸಿ, ಪೊಟ್ಯಾಸಿಯಮ್, ಪ್ರೋಟೀನ್, ಕ್ಯಾಲ್ಸಿಯಂ, ಕಾರ್ಬೋಹೈಡ್ರೇಟ್ಗಳು, ಕ್ರೋಮಿಯಂನ ಅತ್ಯುತ್ತಮ ಮೂಲವಾಗಿದೆ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳಿವೆ. ಇದು ಇಂಡೋಲ್ 3 ಕಾರ್ಬಿನಾಲ್ ಅನ್ನು ಸಹ ಒಳಗೊಂಡಿದೆ.

5.ಸೋಯಾಬೀನ್ ಸೋಯಾಬೀನ್​ನಲ್ಲಿ ಪ್ರೋಟೀನ್, ಟ್ರಿಪ್ಟೊಫಾನ್, ಮ್ಯಾಂಗನೀಸ್, ಕಬ್ಬಿಣ, ಒಮೆಗಾ -3, ಕೊಬ್ಬಿನಾಮ್ಲಗಳು, ರಂಜಕ, ಫೈಬರ್, ಮೆಗ್ನೀಸಿಯಮ್, ತಾಮ್ರ, ವಿಟಮಿನ್ ಬಿ, ಸಿ ಮತ್ತು ಪೊಟ್ಯಾಸಿಯಮ್ ಇರುತ್ತದೆ.

6. ವ್ಯಾಯಾಮ ವ್ಯಾಯಾಮ ಕೂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ ಇದು ದೇಹದಲ್ಲಿನ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಏರೋಬಿಕ್ ವ್ಯಾಯಾಮಗಳಾದ ಓಡುವುದು, ಈಜು ಮತ್ತು ತೂಕ ಎತ್ತುವುದು ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಕ್ರೀಡೆಗಳನ್ನು ಆಡುವುದು ದೇಹಕ್ಕೆ ತುಂಬಾ ಒಳ್ಳೆಯದು ಇದ್ದರಿಂದ ನಾವು ಸದೃಡವಾಗಿರಬಹುದು.

ಇದನ್ನೂ ಓದಿ:

Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಸೇವಿಸುವ ಸಮಯದ ಬಗ್ಗೆ ತಿಳಿಯವುದನ್ನು ಮರೆಯಬೇಡಿ

Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ