Spices For Acidity: ಅಡುಗೆ ಮನೆಯಲ್ಲಿ ಲಭ್ಯವಿರುವ ಈ ಐದು ಮಸಾಲೆ ಪದಾರ್ಥಗಳು ಅಸಿಡಿಟಿ ಸಮಸ್ಯೆಗೆ ಪರಿಹಾರ 

ನೀವು ಅಸಿಡಿಟಿ, ಮಲಬದ್ಧತೆ, ಗ್ಯಾಸ್, ಅಜೀರ್ಣ, ಹೊಟ್ಟೆ ನೋವು ಇತ್ಯಾದಿ ಸಮಸ್ಯೆಗಳಿಂದ ತೊಂದರೆಗೀಡಾಗಿದ್ದೀರಾ? ಅಡುಗೆ ಮನೆಯಲ್ಲಿ ಸುಲಭವಾಗಿ ಲಭ್ಯವಿರುವಂತಹ ಈ ಕೆಲವು ಮಸಾಲೆ ಪದಾರ್ಥಗಳನ್ನು ಸೇವನೆ ಮಾಡುವ ಮೂಲಕ ಈ ರೀತಿಯ ಹೊಟ್ಟೆ ಸಂಬಂಧಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆದುಕೊಳ್ಳಬಹುದು.  

Spices For Acidity: ಅಡುಗೆ ಮನೆಯಲ್ಲಿ ಲಭ್ಯವಿರುವ ಈ ಐದು ಮಸಾಲೆ ಪದಾರ್ಥಗಳು ಅಸಿಡಿಟಿ ಸಮಸ್ಯೆಗೆ ಪರಿಹಾರ 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 28, 2023 | 6:32 PM

ಇತ್ತೀಚಿನ ದಿನಗಳಲ್ಲಿ  ಅನಾರೋಗ್ಯಕರ ಆಹಾರಗಳ ಸೇವನೆಯಿಂದ ಅಸಿಡಿಟಿ, ಅಜೀರ್ಣ, ಗ್ಯಾಸ್, ಮಲಬದ್ಧತೆ, ಹೊಟ್ಟೆನೋವು ಮುಂತಾದ ಹೊಟ್ಟೆ ಸಂಬಂಧಿ ಸಮಸ್ಯೆಗಳು ತುಂಬಾ ಸಾಮಾನ್ಯವಾಗಿದೆ. ಅದರಲ್ಲೂ ಮಸಾಲೆಯುಕ್ತ ಆಹಾರಗಳನ್ನು ಸೇವಿಸಿದ ತಕ್ಷಣ ಎದೆಯುರಿ,  ಮಲಬದ್ಧತೆ, ಅಜೀರ್ಣ ಇತ್ಯಾದಿ ಸಮಸ್ಯೆಗಳು ಕಾಡತೊಡಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ನಮ್ಮ ಅಡುಗೆ ಮನೆಯಲ್ಲಿರುವ ಮಸಾಲೆಗಳು ಈ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಭಾರತೀಯ   ಅಡುಗೆ ಮನೆಗಳಲ್ಲಿ  ಲಭ್ಯವಿರುವಂತಹ ಎಲ್ಲಾ ರೀತಿಯ ಮಸಾಲೆ ಪದಾರ್ಥಗಳು ಔಷಧೀಯ ಗುಣಗಳಿಂದ ಕೂಡಿದೆ.  ಈ ಮಸಾಲೆಗಳಲ್ಲಿ ಕಂಡುಬರುವ  ಔಷಧೀಯ ಗುಣಲಕ್ಷಣಗಳು ಜೀರ್ಣಾಂಗ ವ್ಯವಸ್ಥೆಯನ್ನು  ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗಾದರೆ ಅಸಿಡಿಟಿಯಂತಹ ಹೊಟ್ಟೆ ಸಂಬಂಧಿ ಸಮಸ್ಯೆಗಳಿಂದ ಪರಿಹಾರ ಪಡೆಯಲು ಸಹಕಾರಿಯಾದ  ಮಸಾಲೆ ಪದಾರ್ಥಗಳು ಯಾವುದೆಂದು ತಿಳಿಯೋಣ.

ಅಸಿಡಿಟಿ ಇತ್ಯಾದಿ ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ತೊಡೆದುಹಾಕಲು ಸಹಕಾರಿ ಈ ಮಸಾಲೆ ಪದಾರ್ಥಗಳು

ಜೀರಿಗೆ: ಜೀರಿಗೆಯಲ್ಲಿರುವ  ಔಷಧೀಯ ಗುಣಗಳಿರುವ ಸಂಯುಕ್ತಗಳು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಕಾರಿ.  ಇದು ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ  ಅಜೀರ್ಣದ ಸಮಸ್ಯೆಯನ್ನು  ತೊಡೆದುಹಾಕಲು ಸಹಾಯ ಮಾಡುತ್ತದೆ.  ಅಷ್ಟೇ ಅಲ್ಲ ಜೀರಿಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುವ ಕಿಣ್ವಗಳ ಸ್ರವಿಕೆಯನ್ನು ಹೆಚ್ಚಿಸುತ್ತದೆ.  ಮತ್ತು ಇದು ಆಮ್ಲೀಯತೆಯನ್ನು ಕಡಿಮೆ ಮಾಡುವ ಮೂಲಕ ಹೊಟ್ಟೆಯನ್ನು ತಂಪಾಗಿರಿಸುತ್ತದೆ.  ಹೀಗೆ ಜೀರಿಗೆ ಕಷಾಯವನ್ನು ಕುಡಿಯುವ ಮೂಲಕ  ಅಸಿಡಿಟಿಗೆ ಕಾರಣವಾಗುವ ಗ್ಯಾಸ್ ಸಮಸ್ಯೆಯಿಂದ ಪರಿಹಾರವನ್ನು ಪಡೆದುಕೊಳ್ಳಬಹುದು.

ಕೊತ್ತಂಬರಿ ಬೀಜಗಳು: ಕೊತ್ತಂಬರಿ ಬೀಜಗಳನ್ನು ಪ್ರತಿನಿತ್ಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಇದು ಅಡುಗೆಯ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಕೊತ್ತಂಬರಿ ಬೀಜವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಅದ್ಭುತ ಗುಣವನ್ನು ಹೊಂದಿವೆ. ಇದನ್ನು ತಿನ್ನುವುದರಿಂದ ಗ್ಯಾಸ್, ಅಸಿಡಿಟಿ ಅಥವಾ ಪದೇ ಪದೇ  ಕಾಣಿಸಿಕೊಳ್ಳುವ ಹೊಟ್ಟೆ ನೋವಿನ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು.

ಶುಂಠಿ: ಶುಂಠಿಯಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸಲು ಸಹಾಯ ಮಾಡುತ್ತದೆ ಮತ್ತು ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಶುಂಠಿಯ ಉರಿಯೂತ ವಿರೋಧಿ ಗುಣಲಕ್ಷಣಗಳು ಹೊಟ್ಟೆಯ  ಉರಿಯೂತವನ್ನು ಕಡಿಮೆ ಮಾಡುತ್ತದೆ. ಮತ್ತು ಇದು ಆಮ್ಲ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಶುಂಠಿ  ಚಹಾವನ್ನು ಕುಡಿಯುವ ಮೂಲಕ  ಜೀರ್ಣಕ್ರಿಯೆಯನ್ನು ಸರಾಗಗೊಳಿಸಬಹುದು ಮತ್ತು  ಇದು ಆಮ್ಲೀಯತೆಯನ್ನು ಉಂಟುಮಾಡುವ ಅನಿಲ ರಚನೆಯನ್ನು ಕಡಿಮೆ ಮಾಡುತ್ತದೆ. ನೀವು ಶುಂಠಿ ಕಷಾಯವನ್ನು ಸಹ ಸೇವನೆ ಮಾಡಬಹುದು.

ಇದನ್ನೂ ಓದಿ: ಆ್ಯಸಿಡಿಟಿ ಇರುವವರು ಹಾಲು ಕುಡಿಯಬಹುದೇ? ಯಾರ್ಯಾರಿಗೆ ಅಪಾಯ ಇಲ್ಲಿದೆ ಮಾಹಿತಿ

ಏಲಕ್ಕಿ: ಏಲಕ್ಕಿಯಲ್ಲಿ ಉರಿಯೂತ ನಿವಾರಕ ಗುಣವಿದ್ದು, ಇದು ಆಮ್ಲೀಯತೆ ಮತ್ತು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ. ಹಾಗಾಗಿ ಏಲಕ್ಕಿ ಚಹಾವನ್ನು ಕುಡಿಯುವ ಮೂಲಕ ಈ ರೀತಿಯ ಹೊಟ್ಟೆ ಸಂಬಂಧಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆದುಕೊಳ್ಳಬಹುದು.

ಇಂಗು: ಅಸಿಡಿಟಿ, ಅಜೀರ್ಣ ಮತ್ತು ಹೊಟ್ಟೆ ನೋವಿಗೆ ಇಂಗು ಪರಿಣಾಮಕಾರಿ ಮನೆಮದ್ದು ಎಂದು ಪರಿಗಣಿಸಲಾಗಿದೆ.  ಇದು ಹೊಟ್ಟೆಯಲ್ಲಿ ಆಮ್ಲದ ಪರಿಣಾವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ, ಇಂಗು ಜೀರ್ಣಾಂಗ ವ್ಯವಸ್ಥೆಯನ್ನು ಸರಾಗಗೊಳಿಸುತ್ತದೆ.  ಅಸಿಡಿಟಿಗೆ ಕಾರಣವಾಗುವ ಹೆಲಿಕೋಬ್ಯಾಕ್ಟರ್ ಪೈಲೋರಿಯಂತಹ ಬ್ಯಾಕ್ಟೀರಿಯಾಗಳ್ನು ನಾಶಪಡಿಸುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇದರಲ್ಲಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ