Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಚಿಕ್ಕ ವಯಸ್ಸಿನಲ್ಲೇ ಮಧುಮೇಹ, ಸಂಧಿವಾತ, ಬಿಪಿ, ಒತ್ತಡ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದಕ್ಕೆ ಅವರ ಆಹಾರ ಕ್ರಮವೂ ಒಂದು ಕಾರಣ. ದೇಹಕ್ಕೆ ಹಾಗೂ ಮಾನಸಿಕ ಆರೋಗ್ಯಕ್ಕೆ ತುಂಬಾ ಕೆಟ್ಟದ್ದು ಎಂದು ಪರಿಗಣಿಸಲಾದ 5 ವಿಷಯಗಳ ಬಗ್ಗೆ ಅಥವಾ ಆಹಾರ ಪದ್ಧತಿಯ ಬಗ್ಗೆ ತಿಳಿಯುವುದು ಸೂಕ್ತ.

Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ
ಸಂಗ್ರಹ ಚಿತ್ರ
Follow us
| Edited By: shruti hegde

Updated on: Oct 31, 2021 | 8:45 AM

ನಮ್ಮ ನೆನಪಿನ ಶಕ್ತಿಯು ವಯಸ್ಸಿನ ಮೇಲೆ ಅವಲಂಬಿತವಾಗಿದೆ ಎಂದು ಹೇಳಲಾಗುತ್ತದೆ. ವಯಸ್ಸಾಗುತ್ತಾ ಹೋದಂತೆ ಜ್ಞಾಪಕಶಕ್ತಿಯೇ ಹದಗೆಡುತ್ತದೆ ಎಂದು ಹೇಳಲಾಗುತ್ತದೆ. ಆದರೆ ಕೆಲವು ಹಿರಿಯರು ಇಂದಿಗೂ ಸಹ ಹೆಚ್ಚು ಚೈತನ್ಯದಿಂದ ಇರುತ್ತಾರೆ ಮತ್ತು ಜ್ಞಾಪಕ ಶಕ್ತಿಯು ವೃದ್ಧಾಪ್ಯದಲ್ಲಿಯೂ ತುಂಬಾ ಚೆನ್ನಾಗಿರುತ್ತದೆ. ವಾಸ್ತವವಾಗಿ ಇದೆಲ್ಲವೂ ಅವರ ಉತ್ತಮ ಆಹಾರ ಮತ್ತು ದಿನಚರಿಯ ಪರಿಣಾಮವಾಗಿದೆ. ಆಹಾರವು ನಮ್ಮ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲದೆ ನಮ್ಮ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಎಲ್ಲಾ ಸಂಶೋಧನೆಗಳು ತಿಳಿಸಿವೆ.

ನಿಮ್ಮ ಆಹಾರ ಕ್ರಮ ಸರಿಯಾಗಿಲ್ಲದಿದ್ದರೆ ದೈಹಿಕ ಮತ್ತು ಮಾನಸಿಕ ಎರಡೂ ಸಮಸ್ಯೆಗಳು ನಿಮ್ಮನ್ನು ಅಕಾಲಿಕವಾಗಿ ಸುತ್ತುವರಿಯುತ್ತವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಚಿಕ್ಕ ವಯಸ್ಸಿನಲ್ಲೇ ಮಧುಮೇಹ, ಸಂಧಿವಾತ, ಬಿಪಿ, ಒತ್ತಡ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದಕ್ಕೆ ಅವರ ಆಹಾರ ಕ್ರಮವೂ ಒಂದು ಕಾರಣ. ದೇಹಕ್ಕೆ ಹಾಗೂ ಮಾನಸಿಕ ಆರೋಗ್ಯಕ್ಕೆ ತುಂಬಾ ಕೆಟ್ಟದ್ದು ಎಂದು ಪರಿಗಣಿಸಲಾದ 5 ವಿಷಯಗಳ ಬಗ್ಗೆ ಅಥವಾ ಆಹಾರ ಪದ್ಧತಿಯ ಬಗ್ಗೆ ತಿಳಿಯುವುದು ಸೂಕ್ತ. ವಿವರ ಇಲ್ಲಿದೆ ನೋಡಿ.

ಜಿಡ್ಡಿನ ಪದಾರ್ಥ ಸಹಜವಾಗಿ, ಹೆಚ್ಚು ಜಿಡ್ಡಿನ ಆಹಾರವನ್ನು ತಿನ್ನುವುದು ರುಚಿಕರವಾಗಿರುತ್ತದೆ. ಆದರೆ ಇದು ನಿಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ಉತ್ತಮವೆಂದು ಪರಿಗಣಿಸಲಾಗುವುದಿಲ್ಲ. ಹೆಚ್ಚು ಕರಿದ ಆಹಾರವು ನಿಮ್ಮ ನರ ಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಮೆದುಳಿನ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮ ಜ್ಞಾಪಕಶಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಸಾಧ್ಯವಾದಷ್ಟು ಸರಳ ಮತ್ತು ಜೀರ್ಣವಾಗುವ ಆಹಾರವನ್ನು ಸೇವಿಸುವುದನ್ನು ರೂಢಿಸಿಕೊಳ್ಳಿ.

ಜಂಕ್ ಫುಡ್ ಜಂಕ್ ಫುಡ್‌ನಲ್ಲಿ ರುಚಿಯನ್ನು ಹೆಚ್ಚಿಸಲು, ಡೋಪಮೈನ್ ಹಾರ್ಮೋನ್ ನಂತಹ ಕೆಲವು ವಸ್ತುಗಳನ್ನು ಬಳಸಲಾಗುತ್ತದೆ. ಇದನ್ನು ಹೆಚ್ಚು ತಿನ್ನುವುದರಿಂದ, ವ್ಯಕ್ತಿಯಲ್ಲಿ ಒತ್ತಡದ ಮಟ್ಟವು ಹೆಚ್ಚಾಗುತ್ತದೆ ಮತ್ತು ನೆನಪಿನ ಶಕ್ತಿ ದುರ್ಬಲಗೊಳ್ಳಲು ಪ್ರಾರಂಭವಾಗುತ್ತದೆ.

ಮದ್ಯ ಮದ್ಯಪಾನ ಮಾಡುವ ಅಭ್ಯಾಸವು ನಿಮ್ಮ ಇಡೀ ಜೀವನವನ್ನು ಹಾಳುಮಾಡುತ್ತದೆ. ಇದು ನಿಮ್ಮ ದೇಹದಲ್ಲಿ ಅನೇಕ ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡುತ್ತದೆ. ಜೊತೆಗೆ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದನ್ನು ಕುಡಿಯುವುದರಿಂದ ವ್ಯಕ್ತಿಯ ಮಾನಸಿಕ ಸಮತೋಲನ ಹದಗೆಡುತ್ತದೆ. ಆ ಮೂಲಕ ಜ್ಞಾಪಕ ಶಕ್ತಿ ದುರ್ಬಲವಾಗುತ್ತದೆ.

ಸಿಹಿ ತಿಂಡಿ ಸಿಹಿ ತಿನ್ನಲು ಇಷ್ಟಪಡುವವರೂ ಜಾಗರೂಕರಾಗಿರಬೇಕು. ಆರೋಗ್ಯ ತಜ್ಞರ ಪ್ರಕಾರ ಹೆಚ್ಚು ಸಕ್ಕರೆ ತಿನ್ನುವುದರಿಂದ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಮನಸ್ಸು ಜಡವಾಗುತ್ತದೆ ಮತ್ತು ತನ್ನ ಕೆಲಸವನ್ನು ಸರಿಯಾಗಿ ಮಾಡಲಾರದು. ಈ ಕಾರಣದಿಂದಾಗಿ, ವ್ಯಕ್ತಿಯ ನೆನಪಿನ ಶಕ್ತಿ ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ.

ಕೊಬ್ಬಿನಿಂದ ಕೂಡಿದ ಆಹಾರ ಅಧಿಕ ಪ್ರಮಾಣದ ಟ್ರಾನ್ಸ್ ಕೊಬ್ಬು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದು ನೆನಪಿನ ಶಕ್ತಿ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ ಮತ್ತು ವ್ಯಕ್ತಿಯು ಮರೆವಿನ ಅಪಾಯವನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ:

ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

Health Tips: ಕಹಿಯಾಗಿದ್ದರೂ ಆರೋಗ್ಯಕರ ಗುಣಗಳನ್ನು ಹೊಂದಿರುವ ಈ 5 ಪದಾರ್ಥಗಳ ಬಗ್ಗೆ ತಿಳಿಯಿರಿ

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್