ಉಸಿರಾಟದ ತೊಂದರೆ ಅನುಭವಿಸುತ್ತಿದ್ದರೆ ಈ ಕೆಳಗಿನ ಆಹಾರ ಪದ್ಧತಿಯನ್ನು ನಿತ್ಯವು ಅನುಸರಿಸಿ

ಕೊರೊನಾ ಎರಡನೇ ಅಲೆಯ ಈ ಕಾಲಘಟ್ಟದಲ್ಲಿ 60 ರಿಂದ 65 ಪ್ರತಿಶತದಷ್ಟು ರೋಗಿಗಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. 2 ರಿಂದ 3 ದಿನಗಳಲ್ಲಿ ಸೋಂಕಿತರ ಆಮ್ಲಜನಕದ ಮಟ್ಟ 80 ಕ್ಕಿಂತ ಕಡಿಮೆ ತಲುಪುತ್ತದೆ ಮತ್ತು ಅಂತಹ ಪರಿಸ್ಥಿತಿಯಲ್ಲಿ, ತಕ್ಷಣವೇ ಆಮ್ಲಜನಕದ ಅಗತ್ಯವಿದೆ.

ಉಸಿರಾಟದ ತೊಂದರೆ ಅನುಭವಿಸುತ್ತಿದ್ದರೆ ಈ ಕೆಳಗಿನ ಆಹಾರ ಪದ್ಧತಿಯನ್ನು ನಿತ್ಯವು ಅನುಸರಿಸಿ
ಪ್ರಾತಿನಿಧಿಕ ಚಿತ್ರ
Follow us
preethi shettigar
| Updated By: ಆಯೇಷಾ ಬಾನು

Updated on: Apr 30, 2021 | 7:18 AM

ದೇಹವು ಯಾವಾಗಲೂ ಆರೋಗ್ಯವಾಗಿರಲು ಶ್ವಾಸಕೋಶ ಉತ್ತಮವಾಗಿ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಶ್ವಾಸಕೋಶದ ಮೂಲಕವೇ ಆಮ್ಲಜನಕವು ದೇಹದ ಪ್ರತಿಯೊಂದು ಭಾಗವನ್ನು ತಲುಪುತ್ತದೆ. ಶ್ವಾಸಕೋಶವು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಸ್ತಮಾ, ಬ್ರಾಂಕೈಟಿಸ್, ನ್ಯುಮೋನಿಯಾ, ಕ್ಷಯ ರೋಗ, ಕ್ಯಾನ್ಸರ್ ಮುಂತಾದ ಮಾರಕ ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಹೀಗಾಗಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಇಂತಹ ಪರಿಸ್ಥಿತಿಯಲ್ಲಿ ಶ್ವಾಸಕೋಶದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಕೋವಿಡ್ 19 ನಂತಹ ಸಾಂಕ್ರಾಮಿಕ ರೋಗವನ್ನು ತಪ್ಪಿಸಲು ಶ್ವಾಸಕೋಶವನ್ನು ಬಲಪಡಿಸುವುದು ಅತ್ಯಗತ್ಯ. ಅದರಲ್ಲೂ ಕೊರೊನಾ ಸೊಂಕು ನೇರವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ಆಮ್ಲಜನಕದ ಮಟ್ಟ ಕಡಿಮೆಯಾಗುತ್ತದೆ ಮತ್ತು ಉಸಿರಾಟದ ತೊಂದರೆ ಉಂಟಾಗುತ್ತದೆ ಎಂದು ಆರೋಗ್ಯ ತಜ್ಞರು ವರದಿ ಮಾಡಿದ್ದಾರೆ.

ಕೊರೊನಾ ಎರಡನೇ ಅಲೆಯ ಈ ಕಾಲಘಟ್ಟದಲ್ಲಿ 60 ರಿಂದ 65 ಪ್ರತಿಶತದಷ್ಟು ರೋಗಿಗಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. 2 ರಿಂದ 3 ದಿನಗಳಲ್ಲಿ ಸೋಂಕಿತರ ಆಮ್ಲಜನಕದ ಮಟ್ಟ 80 ಕ್ಕಿಂತ ಕಡಿಮೆ ತಲುಪುತ್ತದೆ ಮತ್ತು ಅಂತಹ ಪರಿಸ್ಥಿತಿಯಲ್ಲಿ, ತಕ್ಷಣವೇ ಆಮ್ಲಜನಕದ ಅಗತ್ಯವಿದೆ. ಈ ಅವಧಿಯಲ್ಲಿ ಆಮ್ಲಜನಕ ಲಭ್ಯವಿಲ್ಲದಿದ್ದರೆ, ಪರಿಸ್ಥಿತಿ ತುಂಬಾ ಗಂಭೀರವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಶ್ವಾಸಕೋಶದ ಕಾಳಜಿಯನ್ನು ಮೊದಲೇ ವಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಶ್ವಾಸಕೋಶವನ್ನು ಆರೋಗ್ಯಯುತವಾಗಿ ನೋಡಿಕೊಳ್ಳುವ ಕೆಲವು ಆಹಾರ ಪದ್ಧತಿಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.

ಅರಿಶಿಣ ಅರಿಶಿಣದಲ್ಲಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದಂತಹ ಸಮಸ್ಯೆಗಳನ್ನು ಗುಣ ಪಡಿಸುವ ಅಂಶಗಳಿದೆ. ಇದು ಎಲ್ಲಾ ರೀತಿಯ ಸೋಂಕುಗಳಿಂದ ರಕ್ಷಣೆ ನೀಡುತ್ತದೆ. ಪ್ರತಿದಿನ ಮಲಗುವ ಮುನ್ನ ಅರಿಶಿಣವನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದು ಉತ್ತಮ. ಇದರೊಂದಿಗೆ ಅರಿಶಿಣ, ಅಮೃತ ಬಳ್ಳಿ, ದಾಲ್ಚಿನಿ, ಲವಂಗ, ಶುಂಠಿ ಮತ್ತು ತುಳಸಿ ಸೇರಿಸಿ ಕಷಾಯ ತಯಾರಿಸಬಹುದು. ಇದು ಶ್ವಾಸಕೋಶವನ್ನು ಸದೃಢವಾಗಿರಿಸುವುದರ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಜೇನುತುಪ್ಪ ಆಯುರ್ವೇದದಲ್ಲಿ ಜೇನುತುಪ್ಪಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಏಕೆಂದರೆ ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಶ್ವಾಸಕೋಶವು ಬಲಗೊಳ್ಳುತ್ತದೆ. ಇದಲ್ಲದೆ, ದೇಹದಿಂದ ವಿಷವನ್ನು ತೆಗೆದುಹಾಕಲು ಬೆಳಿಗ್ಗೆ ಹೊತ್ತಿಗೆ ಬೆಚ್ಚಗಿನ ನಿಂಬೆ ರಸ ಮಿಶ್ರಿತ ನೀರಿಗೆ ಜೇನುತುಪ್ಪ ಬೆರೆಸಿ ಕುಡಿಯುವುದು ಉತ್ತಮ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಇನ್ನು ಕಷಾಯಕ್ಕೆ ಕೂಡ ಜೇನುತುಪ್ಪವನ್ನು ಸೇರಿಸಬಹುದು.

ತುಳಸಿ ತುಳಸಿ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್, ಕಬ್ಬಿಣ, ಕ್ಲೋರೊಫಿಲ್ ಮೆಗ್ನೀಸಿಯಮ್, ಕ್ಯಾರೋಟಿನ್ ಮತ್ತು ವಿಟಮಿನ್ಸಿ ಇರುತ್ತವೆ. ಇದು ಶ್ವಾಸಕೋಶವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಪ್ರತಿದಿನ 4ರಿಂದ5 ಎಲೆಗಳನ್ನು ಅಗೆಯುವುದರಿಂದ ಶ್ವಾಸಕೋಶದ ಆರೋಗ್ಯ ಹೆಚ್ಚುತ್ತದೆ. ತುಳಸಿ ಜೊತೆಗೆ ಅಮೃತ ಬಳ್ಳಿ ಸೇರಿಸಿ ಆಯುರ್ವೇದ ಕಷಾಯವನ್ನು ತಯಾರಿಸಬಹುದು.

ಅಂಜೂರ ಅಂಜೂರದಲ್ಲಿ ಬಹಳಷ್ಟು ಪವಾಡದ ಅಂಶಗಳು ಕಂಡುಬರುತ್ತವೆ. ಇದರಲ್ಲಿ ಅಗತ್ಯವಾದ ಪೋಷಕಾಂಶಗಳಾದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ತಾಮ್ರ ಮತ್ತು ಕಬ್ಬಿಣದ ಅಂಶಗಳಿವೆ. ಇದನ್ನು ಸೇವಿಸುವುದರಿಂದ ಶ್ವಾಸಕೋಶವು ಬಲಗೊಳ್ಳುತ್ತದೆ. ಇದರೊಂದಿಗೆ ಹೃದಯವು ಆರೋಗ್ಯವಾಗಿ ಇರುತ್ತದೆ.

ಬೆಳ್ಳುಳ್ಳಿ ಬೆಳ್ಳುಳ್ಳಿ ಪ್ರತಿಜೀವಕ, ಆಂಟಿಫಂಗಲ್, ಆಂಟಿವೈರಲ್ ಗುಣಲಕ್ಷಣಗಳು ಮತ್ತು ಕ್ಯಾಲ್ಸಿಯಂ, ಫಾಸ್ಫರಸ್, ಕಬ್ಬಿಣ, ಜೀವಸತ್ವಗಳಂತಹ ಅಂಶಗಳನ್ನು ಒಳಗೊಂಡಿದೆ. ಇದು ಶ್ವಾಸಕೋಶವನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 2ರಿಂದ3 ಬೆಳ್ಳುಳ್ಳಿ ಮೊಗ್ಗುಗಳನ್ನು ಸೇವಿಸಬಹುದು. ಇದಲ್ಲದೆ, ರಾತ್ರಿ ಹೊತ್ತಿಗೆ ನೀವು ಹೆಚ್ಚು ಒತ್ತಡದಲ್ಲಿದ್ದರೆ ಒಂದು ಬೆಳ್ಳುಳ್ಳಿ ಮೊಗ್ಗು ಮತ್ತು ಒಂದು ಲವಂಗವನ್ನು ನೆನೆಸಿ ಅದನ್ನು ಬೆಳಿಗ್ಗೆ ಸೇವಿಸುವುದು ಉತ್ತಮವಾಗಿದೆ.

ಇದನ್ನೂ ಓದಿ:

ಕೆಲವು ನೋವು ನಿವಾರಕ ಔಷಧಿಗಳು ಕೊವಿಡ್ ರೋಗ ಮತ್ತಷ್ಟು ಉಲ್ಬಣವಾಗುವಂತೆ ಮಾಡುತ್ತವೆ, ಎನ್‌ಎಸ್‌ಎಐಡಿ ಬಳಸಬೇಡಿ: ಐಸಿಎಂಆರ್ ಸಲಹೆ

(These food practices can help you over come breathing problems know here the details)

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್