Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

ತುಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಯಕವಾಗಿದೆ. ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ.

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Sep 18, 2021 | 9:43 AM

ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳಿಂದ ನಮಗೆ ಆರೋಗ್ಯ ಪ್ರಯೋಜನಗಳು ಸಾಕಷ್ಟು ಸಿಗುತ್ತವೆ. ಈ ಮಸಾಲೆಗಳಿಂದ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳವಾಗುತ್ತದೆ. ಆರೋಗ್ಯ ಮತ್ತು ರುಚಿಗೆ ಉತ್ತಮವಾದ ಕೆಲವು ಮಸಾಲೆ ಪದಾರ್ಥಗಳು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಅರಿಶಿಣ, ದಾಲ್ಚಿನ್ನಿ, ಜೀರಿಗೆ, ಮೆಂತೆ ಹೀಗೆ ನಾನಾ ಪದಾರ್ಥಗಳು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಇಂತಹ ಕೆಲವು ಪದಾರ್ಥಗಳ ಸೇವನೆಯು ಹೃದಯ ಸಂಬಂಧಿತ ಅಪಾಯವನ್ನು ಕಡಿಮೆ ಮಾಡುವುದರ ಜತೆಗೆ ಮಧುವೇಹವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅರಿಶಿಣದಲ್ಲಿರುವ ಕರ್ಕ್ಯುಮಿನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒಂದು ಲೋಟ ಹಾಲಿಗೆ ಅಥವಾ ನೀರಿಗೆ ಅರಿಶಿಣ ಸೇರಿಸಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಅಡುಗೆಯಲ್ಲಿ ಬಳಸುವ ಕರಿಮೆಣಸು ಕೂಡಾ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜತೆಗೆ ಲವಂಗದಿಂದಲೂ ಸಹ ಆರೋಗ್ಯ ಪ್ರಯೋಜನಗಳು ತುಂಬಾ ಇವೆ. ಇದು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ದೇಹವನ್ನು ಮಧುಮೇಹ ಸಮಸ್ಯೆಯಿಂದ ರಕ್ಷಿಸಲು ಸಹಾಯಕವಾಗಿದೆ.

ದಾಲ್ಚಿನ್ನಿ ಆ್ಯಂಟಿಮೈಕ್ರೋಬಿಯಲ್ ಮತ್ತು ಆ್ಯಂಟಿಆ್ಯಕ್ಸಿಡೆಂಟ್​ಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿನ ಉತ್ತಮ ಕೊಲೆಸ್ಟ್ರಾಲ್ ಸುಧಾರಿಸಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

ತುಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಯಕವಾಗಿದೆ. ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ. ಜತೆಗೆ ಇದು ಮಾನಸಿಕ ಆರೋಗ್ಯಕ್ಕೂ ಸಹ ಒಳ್ಳೆಯದು.

ಇದನ್ನೂ ಓದಿ:

Health Tips: ಸೂರ್ಯ ನಮಸ್ಕಾರದ ಜತೆಗೆ ಈ 5 ವ್ಯಾಯಾಮ; ಆರೋಗ್ಯಯುತ ಜೀವನಕ್ಕಾಗಿ ಈ ಅಭ್ಯಾಸ ಮುಂದುವರಿಸಿ

Health Tips: ಬಾಯಿಯಿಂದ ದುರ್ವಾಸನೆ ಬರುತ್ತಿದೆಯೇ? ಸಮಸ್ಯೆ ಪರಿಹಾರಕ್ಕಾಗಿ ಇಲ್ಲಿದೆ ಸರಳ ಸಲಹೆಗಳು

(These foods control your cholesterol and diabetes)

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !