Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Pressure: ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುವವರು ಆಹಾರ ಕ್ರಮದ ಬಗ್ಗೆ ಕಾಳಜಿ ವಹಿಸಿ

ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಅಭ್ಯಾಸಗಳು, ಮಾನಸಿಕ ಆತಂಕ ಮತ್ತು ಅಧಿಕ ಒತ್ತಡದಿಂದಾಗಿ ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.

Blood Pressure: ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುವವರು ಆಹಾರ ಕ್ರಮದ ಬಗ್ಗೆ ಕಾಳಜಿ ವಹಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Sep 28, 2021 | 8:46 AM

ಅಧಿಕ ರಕ್ತದೊತ್ತಡವು ಪ್ರಸ್ತುತ ಹೆಚ್ಚಿನ ಜನರು ಅನುಭವಿಸುತ್ತಿರುವ ಸಮಸ್ಯೆಗಳಲ್ಲಿ ಒಂದಾಗಿದೆ. ಕನಿಷ್ಠ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರು ಅಧಿಕ ರಕ್ತದೊತ್ತಡವನ್ನು ಹೊಂದಿರುತ್ತಾರೆ. ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಅಭ್ಯಾಸಗಳು, ಮಾನಸಿಕ ಆತಂಕ ಮತ್ತು ಅಧಿಕ ಒತ್ತಡದಿಂದಾಗಿ ಜನರು ಅಧಿಕ ರಕ್ತದೊತ್ತಡದಿಂದ (BP) ಬಳಲುತ್ತಿದ್ದಾರೆ. ಈ ಅಧಿಕ ರಕ್ತದೊತ್ತಡದಿಂದಾಗಿ ಜೀವ ಕಳೆದುಕೊಳ್ಳುವ ಅಪಾಯ ಹೆಚ್ಚಾಗಿದೆ. ನಿರ್ದಿಷ್ಟವಾಗಿ ಇದು ಹೃದಯ ಸಂಬಂಧಿ ಕಾಯಿಲೆಗಳಿಗೂ ಕಾರಣವಾಗಬಹುದು. ಆದ್ದರಿಂದ, ಅಧಿಕ ರಕ್ತದೊತ್ತಡ ಬರದಂತೆ ಜಾಗರೂಕರಾಗಿರಬೇಕು. ನಾವು ಸೇವಿಸುವ ಕೆಲವು ಆಹಾರಗಳಿಂದ ಬಿಪಿಯನ್ನು ನಿಯಂತ್ರಿಸಬಹುದು. ಹಾಗಿದ್ದರೆ ಅಂತಹ ಆಹಾರಗಳು ಯಾವುದು ಎನ್ನುವ ಬಗ್ಗೆ ನಾವು ತಿಳಿದುಕೊಳ್ಳೋಣ.

1. ಧಾನ್ಯಗಳು ಬಿಪಿ ಇರುವವರು ಸಾಮಾನ್ಯವಾಗಿ ಕಡಿಮೆ ಉಪ್ಪು ಹೊಂದಿರುವ ಆಹಾರವನ್ನು ಸೇವಿಸಬೇಕಾಗುತ್ತದೆ. ಹೀಗಾಗಿ ಧಾನ್ಯದ ಹಿಟ್ಟನ್ನು ಬಳಸಬೇಕು. ಆಹಾರದಲ್ಲಿ ಹೆಚ್ಚು ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಲು ವೈದ್ಯರು ಸೂಚಿಸುತ್ತಾರೆ. 2010 ರ ಅಮೇರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಅಧಿಕ ಧಾನ್ಯದ ಆಹಾರಗಳು ಬಿಪಿಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ, ಪಾರ್ಶ್ವವಾಯು ಮತ್ತು ಹೃದಯ ವೈಫಲ್ಯದ ಅಪಾಯವನ್ನು ಕಡಿಮೆ ಮಾಡುತ್ತದೆ.

2. ಓಟ್ಸ್ ಹಿಟ್ಟು ಓಟ್ಸ್ ಅನ್ನು ಹಿಟ್ಟಾಗಿ  ಪರಿವರ್ತಿಸಬಹುದು. ವೈವಿಧ್ಯಮಯ ಸಿಹಿ ಮತ್ತು ಖಾರದ ತಿನಿಸುಗಳನ್ನು ತಯಾರಿಸಲು ಇದನ್ನು ಬಳಸಬಹುದು. ಓಟ್ಸ್ ಅನ್ನು ಚೆನ್ನಾಗಿ ಒಣಗಿಸಿ, ಗ್ರೈಂಡರ್​ನಲ್ಲಿ ಹಾಕಿ ಪುಡಿ ಮಾಡಿಟ್ಟುಕೊಳ್ಳಿ . ಓಟ್ಸ್​ನಿಂದ ಮಾಡಿದ ವಸ್ತುಗಳು ಬಿಪಿಯನ್ನು ನಿಯಂತ್ರಣದಲ್ಲಿರಿಸುತ್ತವೆ. ಇದರಲ್ಲಿ ಫೈಬರ್ ಮತ್ತು ಪ್ರೊಟೀನ್ ಅಧಿಕವಾಗಿರುತ್ತದೆ. ಇದು ಅಂಟು ರಹಿತವಾಗಿದೆ. ಅಲರ್ಜಿ ಇರುವವರು ಕೂಡ ಇದನ್ನು ತಿನ್ನಬಹುದು. ಬಿಪಿ ರೋಗಿಗಳು ಓಟ್ಸ್ ಅನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು.

3. ಬಾರ್ಲಿ ಹಿಟ್ಟು ಧಾನ್ಯಗಳಲ್ಲಿ ಬಾರ್ಲಿಯೂ ಒಂದು. ಈ ಪ್ರಾಚೀನ ಧಾನ್ಯವನ್ನು ಈಗ ಮತ್ತೆ ವ್ಯಾಪಕವಾಗಿ ಬಳಸಲಾಗುತ್ತದೆ. ಬಾರ್ಲಿ ಹಿಟ್ಟು ಬಿಪಿಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 100 ಗ್ರಾಂ ಬಾರ್ಲಿಯಲ್ಲಿ 17 ಗ್ರಾಂ ಆಹಾರದ ಫೈಬರ್ ಮತ್ತು 12 ಗ್ರಾಂ ಪ್ರೋಟೀನ್ ಇರುತ್ತದೆ. ಇದರ ಜತೆಗೆ ಗೋಧಿ ಹಿಟ್ಟು ಕೂಡ ಬಿಪಿಯನ್ನು ನಿಯಂತ್ರಿಸುತ್ತದೆ. ಬಿಪಿ ಇರುವವರು ಪ್ರತಿದಿನ ಚಪಾತಿ ತಿನ್ನುವುದು ಕೂಡ ತುಂಬಾ ಒಳ್ಳೆಯದು.

ಇದನ್ನೂ ಓದಿ: Weight Loss V/S Fat Loss: ಕೊಬ್ಬು ಮತ್ತು ತೂಕ ಇಳಿಕೆ; ಎರಡರಲ್ಲಿ ಯಾವುದು ಆರೋಗ್ಯಕರ ಆಯ್ಕೆ?

Mushrooms: ಅಣಬೆ ಸೇವನೆ ನಮ್ಮ ದೇಹದ ಆರೋಗ್ಯಕ್ಕೆ ಎಷ್ಟು ಮುಖ್ಯ?

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ