AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Health Tips: ಮೂತ್ರಪಿಂಡದ ಆರೈಕೆಗೆ ಪ್ರತಿ ದಿನ ಈ ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ

Health Tips: ಮೂತ್ರದಲ್ಲಿ ಕ್ಯಾಲ್ಸಿಯಂ, ಆಕ್ಸಲೇಟ್ ಮತ್ತು ಯೂರಿಕ್ ಆಮ್ಲದ ಮಟ್ಟ ಹೆಚ್ಚಿದ್ದರೆ ಅವು ಸ್ವಾಭಾವಿಕವಾಗಿ ಹೊರಗೆ ಹೋಗುವುದಿಲ್ಲ. ಅವು ಮೂತ್ರದಲ್ಲಿ ಸಂಗ್ರಹವಾಗಿ ನಂತರದ ದಿನಗಳಲ್ಲಿ ಕಲ್ಲುಗಳನ್ನು ರೂಪಿಸುತ್ತವೆ. ಹೀಗಾಗಿ ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೈಸರ್ಗಿಕವಾಗಿ ಸಿಗುವ ಕೆಲವು ಪದಾರ್ಥಗಳನ್ನು ಸೇವಿಸಿ.

Kidney Health Tips: ಮೂತ್ರಪಿಂಡದ ಆರೈಕೆಗೆ ಪ್ರತಿ ದಿನ ಈ ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 04, 2021 | 3:56 PM

ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಹೀಗಾಗಿ ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇತ್ತೀಚೆಗೆ ಜೀವನಶೈಲಿಯಲ್ಲಿನ (Lifestyle) ಬದಲಾವಣೆ, ಡಯಟ್ ಮುಂತಾದವು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ಹೆಚ್ಚಿಸುತ್ತಿದೆ. ಸಾಕಷ್ಟು ನೀರು ಕುಡಿಯದಿರುವುದು, ಕ್ಯಾಲ್ಸಿಯಂ ಅಂಶದ ಹೆಚ್ಚಳ, ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸದಿರುವುದು ಮತ್ತು ಹೆಚ್ಚು ಔಷಧಿ ತೆಗೆದುಕೊಳ್ಳುವುದರಿಂದ ಮೂತ್ರಪಿಂಡದಲ್ಲಿ ಕಲ್ಲು( Kidney Stone) ಉಂಟಾಗಬಹುದು. ಮೂತ್ರದಲ್ಲಿ ಕ್ಯಾಲ್ಸಿಯಂ, ಆಕ್ಸಲೇಟ್ ಮತ್ತು ಯೂರಿಕ್ ಆಮ್ಲದ ಮಟ್ಟ ಹೆಚ್ಚಿದ್ದರೆ ಅವು ಸ್ವಾಭಾವಿಕವಾಗಿ ಹೊರಗೆ ಹೋಗುವುದಿಲ್ಲ. ಅವು ಮೂತ್ರದಲ್ಲಿ ಸಂಗ್ರಹವಾಗಿ ನಂತರದ ದಿನಗಳಲ್ಲಿ ಕಲ್ಲುಗಳನ್ನು ರೂಪಿಸುತ್ತವೆ. ಹೀಗಾಗಿ ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೈಸರ್ಗಿಕವಾಗಿ ಸಿಗುವ ಕೆಲವು ಪದಾರ್ಥಗಳನ್ನು ಸೇವಿಸಿ.

ಎಳನೀರು ಮೂತ್ರಪಿಂಡವನ್ನು ಶುದ್ಧೀಕರಿಸಲು ಎಳನೀರು ಉತ್ತಮವಾದ ಸಾಧನವಾಗಿದೆ. ವಿಶೇಷವಾಗಿ ಮೂತ್ರದಲ್ಲಿ ಯಾವುದೇ ವಾಸನೆ ಇಲ್ಲದಿದ್ದರೆ ಅಥವಾ ಸಾಕಷ್ಟು ನೀರು ಕುಡಿದರೂ ಮೂತ್ರವಿಸರ್ಜನೆ ವೇಳೆ ಉರಿ ಉಂಟಾದರೆ. ನಿಮಗೆ ಇನ್ನೂ ನೀರಿನ ಅಗತ್ಯವಿದೆ ಎಂದು ಅರ್ಥ. ಹೀಗಾಗಿ ಎಳನೀರು ಕುಡಿಯುವುದು ಸೂಕ್ತ. ಎಳನೀರು ಕುಡಿಯುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ದೂರವಾಗುತ್ತದೆ.

ಬಾರ್ಲಿ ಬಾರ್ಲಿ ನೀರು ಮೂತ್ರಪಿಂಡಗಳನ್ನು ಶುದ್ಧಗೊಳಿಸುವುದಷ್ಟೇ ಅಲ್ಲ, ಇದು ಮೂತ್ರಪಿಂಡಗಳನ್ನು ಹಾನಿಯಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ಬಾರ್ಲಿಯು ಅಧಿಕ ಫೈಬರ್ ಧಾನ್ಯವಾಗಿದೆ. ಬಾರ್ಲಿಯು ಮಧುಮೇಹದಿಂದ ರಕ್ಷಿಸುವಲ್ಲಿ ಕೂಡ ಪರಿಣಾಮಕಾರಿಯಾಗಿದೆ. ಬಾರ್ಲಿ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಆ ನೀರನ್ನು ಕುಡಿಯುವುದರಿಂದ ದೇಹವು ಫೈಬರ್ ಅಂಶವನ್ನು ಹೀರಿಕೊಳ್ಳುತ್ತದೆ.

ಹಣ್ಣು ಮತ್ತು ತರಕಾರಿ ಸೇವಿಸಿ ದ್ರಾಕ್ಷಿ, ಬಾಳೆಹಣ್ಣು, ಕಿತ್ತಳೆ, ಕಿವಿ ಹಣ್ಣು ಮತ್ತು ಏಪ್ರಿಕಾಟ್ ನಂತಹ ಹಣ್ಣುಗಳನ್ನು ಹೆಚ್ಚಾಗಿ ಸೇವಿಸುವುದು ಸೂಕ್ತ. ಇದರಲ್ಲಿ ಪೊಟ್ಯಾಶಿಯಂ ಅಧಿಕವಾಗಿರುತ್ತದೆ. ವಿಶೇಷವಾಗಿ ವಿವಿಧ ಬಗೆಯ ಬೆರಿ ಹಣ್ಣುಗಳನ್ನು ಪ್ರತಿನಿತ್ಯ ತಿನ್ನಬೇಕು. ಇದು ಮೂತ್ರಪಿಂಡದ ಆರೋಗ್ಯವನ್ನು ಕಾಪಾಡುತ್ತದೆ.

ಮೂತ್ರಪಿಂಡಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಮದ್ಯ, ಚಾಕೊಲೇಟ್ ಮತ್ತು ಕೆಫೀನ್ ನಿಂದ ಸಾಧ್ಯವಾದಷ್ಟು ದೂರವಿರಬೇಕು. ಇವುಗಳು ಮೂತ್ರಪಿಂಡಗಳ ಮೇಲೆ ಮಾತ್ರವಲ್ಲದೆ ಇಡೀ ದೇಹದ ಮೇಲೂ ಪರಿಣಾಮ ಬೀರಬಹುದು. ಇವುಗಳು ಜೀರ್ಣಕ್ರಿಯೆ ಮತ್ತು ಇನ್ನಿತರ ಪ್ರಕ್ರಿಯೆಯಲ್ಲಿ ಮೂತ್ರಪಿಂಡಗಳ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರುತ್ತವೆ. ಆ ಮೂಲಕ ಮೂತ್ರಪಿಂಡಗಳ ಕಾರ್ಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Kidney Stone: ಮೂತ್ರಪಿಂಡದಲ್ಲಿ ಕಲ್ಲು ಇದೆ ಎಂದು ತಿಳಿಯುವುದು ಹೇಗೆ? ಈ ಲಕ್ಷಣಗಳೇ ಸಮಸ್ಯೆಗೆ ಮುನ್ನೆಚ್ಚರಿಕೆ

Udalu Benefits: ಊದಲು ಸಿರಿಧಾನ್ಯದ ಬಗ್ಗೆ ನಿಮಗೆಷ್ಟು ಗೊತ್ತು? ಪಿತ್ತಜನಕಾಂಗದ ಸ್ವಚ್ಛತೆಗೆ ವಾರಕ್ಕೊಮ್ಮೆ ಸೇವಿಸಿ

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್