AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fruits Benefits: ನೈಸರ್ಗಿಕವಾಗಿ ದೇಹದ ಕೊಬ್ಬು ಕರಗಿಸಲು ಈ ಹಣ್ಣು ತಿನ್ನಿ

Weight Loss Tips: ನಾವು ತಿನ್ನುವ ಕೆಲವು ಆಹಾರಗಳು, ನಮ್ಮ ಜೀವನಶೈಲಿ ದೇಹದ ತೂಕ ಹೆಚ್ಚಾಗಲು ಕಾರಣವಾಗುತ್ತವೆ. ಹೀಗಾಗಿ, ನಾವು ಸೇವಿಸುವ ಆಹಾರದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ. ಹಣ್ಣುಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಕೆಲವು ಹಣ್ಣುಗಳು ದೇಹದ ಕೊಬ್ಬು ಕರಗಿಸಲು ಸಹಾಯ ಮಾಡುತ್ತವೆ ಎಂಬುದು ನಿಮಗೆ ಗೊತ್ತಾ?

Fruits Benefits: ನೈಸರ್ಗಿಕವಾಗಿ ದೇಹದ ಕೊಬ್ಬು ಕರಗಿಸಲು ಈ ಹಣ್ಣು ತಿನ್ನಿ
ಹಣ್ಣುಗಳುImage Credit source: iStock
ಸುಷ್ಮಾ ಚಕ್ರೆ
|

Updated on: Mar 05, 2024 | 7:38 PM

Share

ಬೊಜ್ಜು ಈಗಿನ ಯುವಪೀಳಿಗೆಯ ದೊಡ್ಡ ಸಮಸ್ಯೆಗಳಲ್ಲಿ ಒಂದು. ಬೊಜ್ಜು ನಮ್ಮ ದೇಹದ ಅಂದ ಹಾಳು ಮಾಡುವುದು ಮಾತ್ರವಲ್ಲದೆ ಆರೋಗ್ಯವನ್ನೂ ಕೆಡಿಸುತ್ತದೆ. ಅತಿಯಾದ ಬೊಜ್ಜು ಹೃದ್ರೋಗ, ರಕ್ತದೊತ್ತಡ, ಮಧುಮೇಹದಂತಹ ಅನೇಕ ರೋಗಗಳಿಗೂ ಕಾರಣವಾಗಬಹುದು. ಹೀಗಾಗಿ, ನೈಸರ್ಗಿಕವಾಗಿ ದೇಹದ ಕೊಬ್ಬು ಕರಗಿಸಲು ಸಹಾಯ ಮಾಡುವ ಕೆಲವು ಹಣ್ಣುಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಹಣ್ಣುಗಳನ್ನು ತಾಜಾವಾಗಿ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಕೂಡ ದೂರ ಇಡಬಹುದು.

ಕಲ್ಲಂಗಡಿ:

ಕಲ್ಲಂಗಡಿ ಹಣ್ಣುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ ಮತ್ತು ಇದರಲ್ಲಿ ನೀರಿನ ಅಂಶ ಸಮೃದ್ಧವಾಗಿರುತ್ತದೆ.

ಬಾಳೆಹಣ್ಣು:

ಬಾಳೆ ಹಣ್ಣು ಶಕ್ತಿಯನ್ನು ಹೆಚ್ಚಿಸಲು ಮತ್ತು ಅನಗತ್ಯ ಕಡುಬಯಕೆಗಳನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಹೊಟ್ಟೆಯ ಕೊಬ್ಬು ಕಡಿಮೆ ಮಾಡುವ 6 ಗಿಡಮೂಲಿಕೆಗಳಿವು

ದ್ರಾಕ್ಷಿ ಹಣ್ಣು:

ದ್ರಾಕ್ಷಿ ನಮ್ಮ ದೇಹದ ಕೊಬ್ಬನ್ನು ಸುಡಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕಿತ್ತಳೆ:

ಕಿತ್ತಳೆ ಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಚಯಾಪಚಯವನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಕಿವಿ ಹಣ್ಣು:

ಕಿವಿ ಹಣ್ಣು ವಿಟಮಿನ್​ಗಳು, ಖನಿಜಗಳು ಮತ್ತು ಫೈಬರ್‌ನಿಂದ ತುಂಬಿರುತ್ತದೆ. ಇದು ಕೊಬ್ಬನ್ನು ತ್ವರಿತವಾಗಿ ಕರಗಿಸಲು ಸಹಾಯ ಮಾಡುತ್ತದೆ.

ಸೇಬುಗಳು:

ಸೇಬು ಹಣ್ಣುಗಳಲ್ಲಿ ಫೈಬರ್ ಅಂಶ ಸಮೃದ್ಧವಾಗಿದೆ. ಇದು ಅನಗತ್ಯ ಕಡುಬಯಕೆಗಳನ್ನು ತಡೆಯುತ್ತದೆ.

ಇದನ್ನೂ ಓದಿ: Cholesterol: ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಯಾವುದು? ಒಳ್ಳೆಯ ಕೊಬ್ಬು ಯಾವುದು?

ಆವಕಾಡೊಗಳು:

ಆವಕಾಡೊ ಹಣ್ಣುಗಳಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ. ಇದು ಪೂರ್ಣತೆಯ ಭಾವನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಬೆರಿ ಹಣ್ಣುಗಳು:

ಬೆರಿ ಹಣ್ಣುಗಳಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆಯಾಗಿರುತ್ತದೆ. ಇದು ಕಡುಬಯಕೆಗಳನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ