Heart Health: ಈ ಹಣ್ಣುಗಳನ್ನು ತಿನ್ನಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ

ಇಡೀ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಹೃದಯದ ಆರೋಗ್ಯ ತುಂಬಾ ಮುಖ್ಯವಾಗುತ್ತದೆ. ಹೃದಯಕ್ಕೆ ಹಾನಿಯಾದರೆ ಇಡೀ ದೇಹಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಹೃದಯದ ಆರೋಗ್ಯವನ್ನು ಕಾಪಾಡುಕೊಳ್ಳುವುದು ಬಹುಮುಖ್ಯ, ಆರೋಗ್ಯಕರವಾದ ಆಹಾರವನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನ ಶೇಖರಣೆಯಾಗುವುದು ತಪ್ಪುತ್ತದೆ.

Heart Health: ಈ ಹಣ್ಣುಗಳನ್ನು ತಿನ್ನಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Fruits
Follow us
TV9 Web
| Updated By: ನಯನಾ ರಾಜೀವ್

Updated on:Jul 04, 2022 | 3:59 PM

ಇಡೀ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಹೃದಯದ ಆರೋಗ್ಯ ತುಂಬಾ ಮುಖ್ಯವಾಗುತ್ತದೆ. ಹೃದಯಕ್ಕೆ ಹಾನಿಯಾದರೆ ಇಡೀ ದೇಹಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಹೃದಯದ ಆರೋಗ್ಯವನ್ನು ಕಾಪಾಡುಕೊಳ್ಳುವುದು ಬಹುಮುಖ್ಯ, ಆರೋಗ್ಯಕರವಾದ ಆಹಾರವನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನ ಶೇಖರಣೆಯಾಗುವುದು ತಪ್ಪುತ್ತದೆ.

ಕೆಲವು ಹಣ್ಣುಗಳು, ತರಕಾರಿಗಳನ್ನು ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೃದಯದ ಆರೋಗ್ಯ ಮತ್ತು ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ. ಹಣ್ಣುಗಳು ಬಹಳಷ್ಟು ನೀರು ಮತ್ತು ಫೈಬರ್ ಅನ್ನು ಹೊಂದಿರುತ್ತವೆ.

ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಕೆಲಸ ಮಾಡುತ್ತದೆ. ಹೃದಯವನ್ನು ಆರೋಗ್ಯಕರವಾಗಿಡಲು, ನೀವು ಆಹಾರದಲ್ಲಿ ಕಲ್ಲಂಗಡಿ, ಮಾವು, ಬೆರ್ರಿ ಹಣ್ಣುಗಳು, ಆ್ಯಪಲ್ ಇತ್ಯಾದಿ ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.

ಆ್ಯಪಲ್: ಆ್ಯಪಲ್​ನಿಂದ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಆ್ಯಪಲ್​ನಲ್ಲಿರುವ ನ್ಯೂಟ್ರಿಯಂಟ್ಸ್​ಗಳು ಹೃದಯ ಸಂಬಂಧಿ ಕಾಯಿಲೆ ಹಾಗೂ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೃದಯಾಘಾತ ಹಾಗೂ ಪಾರ್ಶ್ವವಾಯುವಿನ ಆಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ಬೆರ್ರಿ: ಬೆರ್ರಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಅಂಶವು ಹೃದಯಾಘಾತವನ್ನು ತಪ್ಪಿಸುತ್ತದೆ ಹಾಗೂ ನಿತ್ಯ ಸೇವನೆ ಮಾಡುವುದರಿಂದ ಪಾರ್ಶ್ವವಾಯುವಿನಿಂದ ದೂರ ಇರಬಹುದು.

ಕಿತ್ತಳೆ: ಕಿತ್ತಳೆ ಹಣ್ಣಿನಲ್ಲಿಯೂ ಆಂಟಿ ಆಕ್ಸಿಡೆಂಟ್ಸ್​ಗಳಿದ್ದು, ಅಲ್ಲಿರುವ ಫ್ಲೇವನಾಯ್ಡ್​ ಅಂಶಗಳು ಆಕ್ಸಿಡೇಷನ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಹೃದಯಾಘಾತ ಅಪಾಯವು ಕಡಿಮೆಯಾಗುತ್ತದೆ. ರಕ್ತದ ಪರಿಚಲನೆ ಕೂಡ ಉತ್ತಮವಾಗುತ್ತದೆ.

ಪೀಚ್ : ಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೀಚ್‌ ತುಂಬಾ ಸಹಾಯ ಮಾಡುತ್ತದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು, ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳಿವೆ. ಇದು ಹೃದಯವನ್ನು ಆರೋಗ್ಯಕರವಾಗಿರಿಸುವುದು ಮಾತ್ರವಲ್ಲದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇವುಗಳು ರುಚಿಕರ ಹಾಗೂ ಪೋಷಕಾಂಶಗಳಿಂದ ಕೂಡಿದ್ದು, ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಕಲ್ಲಂಗಡಿ: ಕಲ್ಲಂಗಡಿಯಲ್ಲಿ ಆಂಟಿ ಆಕ್ಸಿಡೆಂಟ್ಸ್​ಗಳಿದ್ದು ರಕ್ತಪರಚಲನೆಯನ್ನು ಉತ್ತಮಗೊಳಿಸಿ, ಹೃದಯದ ಅಪಾಯವನ್ನು ಕಾಪಾಡುತ್ತವೆ.

Published On - 3:58 pm, Mon, 4 July 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್