
ನಮ್ಮ ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಇದನ್ನು ಸರಿಯಾಗಿ ಎದುರಿಸುವುದಕ್ಕೂ ನಮ್ಮಿಂದ ಸಾಧ್ಯವಿಲ್ಲ ಎನ್ನುವಷ್ಟರ ಮಟ್ಟಿಗೆ ನಮ್ಮ ಜೀವನ ಹದಗೆಡುತ್ತಿದೆ. ಅದರಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆ ಹೆಚ್ಚಾಗುತ್ತಿದ್ದು ಇದರಿಂದ ಹೃದಯಾಘಾತದಂತಹ ಮಾರಣಾಂತಿಕ ಕಾಯಿಲೆಗಳು ಅಧಿಕವಾಗಿದೆ. ಹಾಗಾಗಿ ಎಲ್ಲಕಿಂತ ಮೊದಲು ನಮ್ಮ ಆಹಾರ ಪದ್ದತಿಯನ್ನು ಸರಿಮಾಡಿಕೊಳ್ಳಬೇಕಾಗಿದೆ. ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಒಳ್ಳೆಯ ಸಲಹೆಗಳನ್ನು ಪ್ರಯತ್ನಿಸುವುದು ಅನಿವಾರ್ಯವಾಗಿದೆ. ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಇದ್ದರೆ ನೀವು ಆಹಾರದಲ್ಲಿ ಕೆಲವು ಪಥ್ಯಗಳನ್ನು ಮಾಡಬೇಕಾಗುತ್ತದೆ. ಸಾಮಾನ್ಯವಾಗಿ ಬಾದಾಮಿ ಆರೋಗ್ಯಕ್ಕೆ ಬಹಳ ಒಳ್ಳೆಯದು ಆದರೆ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಇದನ್ನು ತಿನ್ನಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದಲ್ಲದೆ ಕೆಲವು ಆರೋಗ್ಯ ಸಮಸ್ಯೆಗೆ ಇದು ಒಳ್ಳೆಯದಲ್ಲ. ಹಾಗಾದರೆ ಇದನ್ನು ಯಾರು ಸೇವನೆ ಮಾಡಬಾರದು? ಇದರಿಂದ ಅಪಾಯವಿದೆಯೇ ತಿಳಿದುಕೊಳ್ಳಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ