Health Tips; ಒಮಿಕ್ರಾನ್ ವಿರುದ್ಧ ಹೋರಾಡಲು ಈ ಸರಳ ಮಾರ್ಗಗಳನ್ನು ಅನುಸರಿಸಿ

ಕೊವಿಡ್-19 ಸೋಂಕಿನಿಂದ ದೂರ ಇರಲು ಆಹಾರ, ವ್ಯಾಯಾಮ, ನಿದ್ರೆ ಮತ್ತು ಹೆಚ್ಚು ಸಕ್ರಿಯ ಜೀವನಶೈಲಿಯೊಂದಿಗೆ ಕಾಲ ಕಳೆಯುವುದು ಬಹಳ ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

Health Tips; ಒಮಿಕ್ರಾನ್ ವಿರುದ್ಧ ಹೋರಾಡಲು ಈ ಸರಳ ಮಾರ್ಗಗಳನ್ನು ಅನುಸರಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Jan 04, 2022 | 11:45 AM

ದೇಶದಾದ್ಯಂತ ಒಮಿಕ್ರಾನ್ (Omicron) ಪ್ರಕರಣ ಮತ್ತು ಮೂರನೇ ಅಲೆಯ ತೀವ್ರ ಏರಿಕೆಯ ಮಧ್ಯೆ, ಕೊರೊನಾ ಲಸಿಕೆಯನ್ನು ಪಡೆಯುವುದು ಮತ್ತು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವುದು ಬಹಳ ಮುಖ್ಯ. ಆಗ ಮಾತ್ರ ವೈರಸ್‌ಗಳ ವಿರುದ್ಧ ನಾವು ಹೋರಾಡಲು ಸಾಧ್ಯ. ಕೊವಿಡ್-19 ಸೋಂಕಿನಿಂದ ದೂರ ಇರಲು ಆಹಾರ, ವ್ಯಾಯಾಮ, ನಿದ್ರೆ ಮತ್ತು ಹೆಚ್ಚು ಸಕ್ರಿಯ ಜೀವನಶೈಲಿಯೊಂದಿಗೆ (Lifestyle) ಕಾಲ ಕಳೆಯುವುದು ಬಹಳ ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಟಿ-ಕೋಶಗಳು (T-cells) ಸೋಂಕಿನಿಂದ ದೂರ ಇರಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ಕೊವಿಡ್​- 19ನ ಹೊಸ ತಳಿಗಳಿಂದ ದೂರ ಇರಲು ಟಿ- ಕೋಶಗಳು ಪ್ರಮುಖ ಪಾತ್ರವಾಹಿಸುತ್ತದೆ. ಸರಳ ಸಲಹೆಗಳೊಂದಿಗೆ ಟಿ-ಕೋಶಗಳನ್ನು ಹೆಚ್ಚಿಸಿಕೊಳ್ಳಲು ಮತ್ತು ಆ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮಾರ್ಗಗಳನ್ನು ಕಂಡುಕೊಳ್ಳಲು ಈ ಕ್ರಮ ಅನುಸರಿಸಿ ಎಂದು ಲ್ಯೂಕ್ ಕೌಟಿನ್ಹೋ ಹೇಳಿದ್ದಾರೆ.

ವಿಟಮಿನ್ ಡಿಗೆ ಪ್ರಾಮುಖ್ಯತೆ ನೀಡಿ ಪ್ರತಿರಕ್ಷಣಾ ವ್ಯವಸ್ಥೆ, ಸೋಂಕು ತಡೆಗಟ್ಟುವಿಕೆ ಮತ್ತು ಚೇತರಿಕೆಗೆ ವಿಟಮಿನ್ ಡಿ ಅತ್ಯಗತ್ಯ. ವಿಟಮಿನ್ ಡಿ ಹೆಚ್ಚಳಕ್ಕೆ ಸಾಕಷ್ಟು ಸೂರ್ಯನ ಬೆಳಕನ್ನು ಪಡೆಯಿರಿ ಎಂದು ಕುಟಿನ್ಹೋ ಹೇಳಿದ್ದಾರೆ.

ಚೆನ್ನಾಗಿ ನಿದ್ರೆ ಮಾಡಿ ನಿದ್ರೆ ಪಡೆಯುವುದು ಬಹಳ ಮುಖ್ಯ. ಏಕೆಂದರೆ ಇದು ಮರುದಿನ ಹೆಚ್ಚು ಶಕ್ತಿ ಮತ್ತು ಚೈತನ್ಯದಿಂದ ಇರಲು ಸಹಾಯ ಮಾಡುತ್ತದೆ. ಜತೆಗೆ ರೋಗನಿರೋಧಕ ಶಕ್ತಿ ನಮ್ಮಲ್ಲಿ ಹೆಚ್ಚಾಗಲು ನಿದ್ರೆ ಬಹಳ ಮುಖ್ಯ. ಒಟ್ಟಾರೆ ದೇಹ ಮತ್ತು ಮನಸ್ಸನ್ನು  ಪುನರ್ಯೌವನಗೊಳಿಸುತ್ತದೆ. ನಿದ್ರೆಯ ಅಭಾವವು ನಿಮ್ಮ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಕಡಿಮೆ ಮಾಡುತ್ತದೆ. ಉರಿಯೂತವನ್ನು ಹೇಗೆ ಹೆಚ್ಚಿಸುತ್ತದೆ, ವೈರಸ್​ಗಳು ಇತ್ಯಾದಿಗಳನ್ನು ಹೇಗೆ ಆಹ್ವಾನಿಸುತ್ತದೆ ಎಂಬುದನ್ನು ನೀವು ತಿಳಿದುಕೊಳ್ಳಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಮಿತವಾಗಿ ವ್ಯಾಯಾಮ ಮಾಡಿ, ಚೆನ್ನಾಗಿ ಆಹಾರ ಸೇವಿಸಿ ಮಿತವಾಗಿ ವ್ಯಾಯಾಮ ಮಾಡುವುದು, ಆಹಾರ ಸೇವನೆ ಮತ್ತು ಸಕ್ರಿಯವಾಗಿರುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿ, ಶುಂಠಿ, ಗರಂ ಮಸಾಲಾ, ಅರಿಶಿಣ, ಜೇನುತುಪ್ಪ, ತುಳಸಿ, ನೆಲ್ಲಿಕಾಯಿ, ಅಮೃತಬಳ್ಳಿ, ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ವಿಟಮಿನ್ ಸಿ ಭರಿತ ಆಹಾರಗಳು ಮತ್ತು ಸತುಭರಿತ ಆಹಾರಗಳನ್ನು ತಿನ್ನಿ ಎಂದು ತಜ್ಞರು ಶಿಫಾರಸು ಮಾಡುತ್ತಾರೆ.

ಪ್ರಾಣಾಯಾಮ ಮಾಡಿ ಶಾಂತವಾಗಿರಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಉತ್ತಮ ಮಾರ್ಗವೆಂದರೆ ಪ್ರಾಣಾಯಾಮ ವ್ಯಾಯಾಮಗಳನ್ನು ಮಾಡುವುದು. ಉಸಿರಾಟದ ವ್ಯಾಯಾಮಗಳು ನಿಮ್ಮ ಜೀವಕೋಶಗಳಿಗೆ ಆಮ್ಲಜನಕವನ್ನು ನೀಡುತ್ತದೆ ಮತ್ತು ನಿಮ್ಮನ್ನು ಆರೋಗ್ಯವಂತರನ್ನಾಗಿ ಮಾಡುತ್ತದೆ.

ಚೆನ್ನಾಗಿ ನೀರು ಕುಡಿಯಿರಿ ಕಾಫಿ ಮತ್ತು ಚಹಾ ಮಾತ್ರವಲ್ಲದೆ ಸಾಕಷ್ಟು ನೀರು ಕುಡಿಯಿರಿ. ಜತೆಗೆ ಆರೋಗ್ಯಯುತವಾದ ಆಹಾರ ಸೇವಿಸಿ. ಆದಷ್ಟು ಜಂಕ್​ ಫುಡ್​ಗಳಿಂದ ದೂರ ಇರಿ.

ಜೀವನಶೈಲಿ ಉತ್ತಮ ಜೀವನಶೈಲಿಯು ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಆದಷ್ಟು ಧೂಮಪಾನ, ಮದ್ಯಪಾಲದಿಂದ ದೂರ ಇರಿ. ಉತ್ತಮ ಜೀವನಶೈಲಿಯನ್ನು ಮೈಗೂಡಿಸಿಕೊಳ್ಳಿ.

ಇದನ್ನೂ ಓದಿ: ಅಸಮಾನತೆಯನ್ನು ಕೊನೆಗೊಳಿಸಿದರೆ ಕೊವಿಡ್-19 ಸಾಂಕ್ರಾಮಿಕ 2022ರಲ್ಲಿ ಕೊನೆಗೊಳ್ಳಬಹುದು: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಕೊರೊನಾ ಹೆಚ್ಚಾದರೆ, ಜನರು ಸಹಕಾರ ಕೊಡದಿದ್ದರೆ ಲಾಕ್ಡೌನ್ ಅನಿವಾರ್ಯ -ಗೃಹ ಸಚಿವ ಆರಗ ಜ್ಞಾನೇಂದ್ರ

Published On - 11:36 am, Tue, 4 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ